ಕೋಲಾರ: ಫೆ.೧೯ರಂದು ಬೆಳಗ್ಗೆ ೧೧ ಗಂಟೆಗೆ ಹುತ್ತೂರು ಹೋಬಳಿಯ ವಡಗೂರು ಸಂತೆ ಮೈದಾನದಲ್ಲಿ ಹೋಬಳಿ ವ್ಯಾಪ್ತಿಯಲ್ಲಿ ೩೧ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಬೃಹತ್ ಪಕ್ಷ ಸೇರ್ಪಡೆ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ವಡಗೂರು ಸಂತೆ ಮೈದಾನದಲ್ಲಿ ಮಂಗಳವಾರ ಕಾರ್ಯಕ್ರಮದ ಸಿದ್ದತೆ ಕುರಿತಂತೆ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರ ಅಭಿವೃದ್ಧಿ ಪರ್ವ ಹೆಚ್ಚಾಗಿದೆ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಹಾಗೂ ಹೋಬಳಿಯ ಅಭಿವೃದ್ಧಿ ಕಾರ್ಯಗಳನ್ನು ಜನಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಯಲಿದ್ದು ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿನ ಜನ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹುತ್ತೂರು ಗ್ರಾಪಂ ಮಾಜಿ ಅಧ್ಯಕ್ಷ ಸಿ.ಎಂ ನಾರಾಯಣಸ್ವಾಮಿ ಮಾತನಾಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಹಾಗೂ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಮುಂದಿನ ದಿನಗಳಲ್ಲಿ ಹೋಬಳಿ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಲಾಗುತ್ತದೆ ಸುಮಾರು ೩೧ ಕೋಟಿ ಅನುದಾನದಲ್ಲಿ ಪ್ರತಿಯೊಂದು ಗ್ರಾಮಕ್ಕೂ ಕನಿಷ್ಠ ೧೦ ರಿಂದ ೨೦ ಲಕ್ಷ ಅನುದಾನದಲ್ಲಿ ಹೈಮಾಸ್ಟ್ ಲೈಟ್ ರಸ್ತೆಗಳ ಡಾಂಬರೀಕರಣ ಶುದ್ಧ ನೀರಿನ ಘಟಕ ಸಮುದಾಯ ಭವನ ಸಿಸಿ ರಸ್ತೆಗಳು ಸೇರಲಿವೆ ಎಂದರು.
ಈ ಸಂದರ್ಭದಲ್ಲಿ ಹರಟಿ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಂಡಹಳ್ಳಿ ನಾಗಭೂಷಣ ಬಾಬು ಮಾತನಾಡಿ ಕಾರ್ಯಕ್ರಮಕ್ಕೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಪ್ರಾಧಿಕಾರದ ಅಧ್ಯಕ್ಷರು ಸದಸ್ಯರು ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಾಜಿ ಜಿಪಂ ತಾಪಂ ಗ್ರಾಪಂ ಅಧ್ಯಕ್ಷರು ಸದಸ್ಯರು ಮುಂಚೂಣಿ ಘಟಕಗಳ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸುವಂತೆ ಮನವಿ ಮಾಡಿದರು.
ಇದನ್ನು ಓದಿದ್ದೀರಾ..? ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಿದ ವಿಜಯಕುಮಾರ್ ಗೆ ಕಾಂಗ್ರೆಸ್ ಮುಖಂಡರಿಂದ ವಾಗ್ದಾಳಿ
ಈ ಸಂದರ್ಭದಲ್ಲಿ ಮುಖಂಡರಾದ ಹರಳಕುಂಟೆ ವೆಂಕಟೇಶ್, ಹೊಳಲಿ ಚಲಪತಿ, ಮೇಡತಂಬಿಹಳ್ಳಿ ರಮೇಶ್, ಬಿಎಂಟಿಸಿ ಬೆಳಗಾನಹಳ್ಳಿ ಮಂಜುನಾಥ್, ಕೋದಂಡಪ್ಪ, ನಂದಂಬಳ್ಳಿ ವಿಜಯಕುಮಾರ್, ಪಟ್ನ ನಾರಾಯಣಸ್ವಾಮಿ, ಭಟ್ರಹಳ್ಳಿ ಲೋಕೇಶ್ ಮುಂತಾದವರು ಇದ್ದರು.





