ಚಿಕ್ಕಬಳ್ಳಾಪುರ | ನಗರಸಭೆ ಚುನಾವಣೆ: ಧನದಾಹಕ್ಕೆ ಸೋತ ಕಾಂಗ್ರೆಸ್ ಸದಸ್ಯರು; ಬಿಜೆಪಿಗೆ ಗರಿಷ್ಠ ಮತ

Date:

ಕುತೂಹಲಕಾರಿ ಬೆಳವಣಿಗೆಗಳ ನಡುವೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯು ಗುರುವಾರ ಮಧ್ಯಾಹ್ನ ಅಂತ್ಯ ಕಂಡಿತು. ದನದಾಹಕ್ಕೆ ಸೋತ ಕಾಂಗ್ರೆಸ್‌ ಸದಸ್ಯರಿಂದ, ಗರಿಷ್ಠ ಮತ ಪಡೆದ ಬಿಜೆಪಿಯು ‘ಅನಧಿಕೃತ ಜಯ’ವನ್ನು ಸಂಭ್ರಮಿಸಿತು.

ಕಾಂಗ್ರೆಸ್‌ನ 6 ಮಂದಿ ಸದಸ್ಯರು ಬಿಜೆಪಿಗೆ ಬೆಂಬಲ ಸೂಚಿಸಿದ್ದರಿಂದ, ಬಿಜೆಪಿಯ 9 ಮಂದಿ, 3 ಜನ ಪಕ್ಷೇತರರು ಮತ್ತು ಸಂಸದ ಕೆ.ಸುಧಾಕರ್‌ ಸೇರಿ ಬಿಜೆಪಿಯ ಗಜೇಂದ್ರ ಒಟ್ಟು 19 ಮತಗಳನ್ನು ಪಡೆದರು. ಉಪಾಧ್ಯಕ್ಷ ಜೆ.ನಾಗರಾಜು 20 ಮತಗಳನ್ನು ಪಡೆದರು.

ಜೆಡಿಎಸ್‌ ಇಬ್ಬರು ಸದಸ್ಯರು, ಒಬ್ಬ ಪಕ್ಷೇತರ ಸದಸ್ಯ, ಕಾಂಗ್ರೆಸ್‌ನ 10 ಮಂದಿ ಸದಸ್ಯರು, ಶಾಸಕ ಪ್ರದೀಪ್‌ ಈಶ್ವರ್‌, ಎಂ.ಎಲ್.ಸಿಗಳಾದ ಅನಿಲ್‌ ಕುಮಾರ್‌ ಹಾಗೂ ಸೀತಾರಾಮ್‌ ಸೇರಿ ಕಾಂಗ್ರೆಸ್‌ನ ಅಂಬರೀಶ್ 16 ಮತಗಳನ್ನು ಪಡೆದರು. ಉಪಾದ್ಯಕ್ಷೆ ಮೀನಾಕ್ಷಿ ವೆಂಕಟೇಶ್‌ 15 ಮತ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫಲಿತಾಂಶ ಘೋಷಣೆ ಇಲ್ಲ

ಇತ್ತೀಚೆಗಷ್ಟೇ ಮತದಾರರ ಪಟ್ಟಿಗೆ ಸೇರಿರುವ ಎಂ.ಎಲ್.ಸಿಗಳಾದ ಅನಿಲ್‌ ಕುಮಾರ್‌ ಹಾಗೂ ಸೀತಾರಾಮ್‌ ಅವರ ಮತದಾನ ಹಕ್ಕನ್ನು ಪ್ರಶ್ನಿಸಿ ಬಿಜೆಪಿ ಸದಸ್ಯ ಆನಂದ್‌ ರೆಡ್ಡಿ ಹೈಕೋರ್ಟ್‌ ಮೆಟ್ಟಿಲೇರಿರುವ ಹಿನ್ನೆಲೆ ಚುನಾವಣಾ ಫಲಿತಾಂಶ ಘೋಷಣೆಯಾಗಿಲ್ಲ. ಚುನಾವಣೆಯ ಮತದಾನ ಪ್ರಕ್ರಿಯೆಗಳನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದು, ಕೋರ್ಟ್‌ ಅಂತಿಮ ತೀರ್ಪಿನ ಬಳಿಕವಷ್ಟೇ ಫಲಿತಾಂಶ ನಿರ್ಧಾರವಾಗಲಿದೆ ಎಂದು ಚಿಕ್ಕಬಳ್ಳಾಪುರ ನಗರಸಭೆ ಚುನಾವಣಾಧಿಕಾರಿ ಅಶ್ವಿನ್‌ ತಿಳಿಸಿದ್ದಾರೆ.

ಸಂಸದ ಡಾ.ಕೆ.ಸುಧಾಕರ್‌ ಕೋವಿಡ್‌ ಕಳ್ಳ

ನಗರಸಭೆ ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌, ನನ್ನನ್ನ ಸುಧಾಕರ್‌ ಅಷ್ಟೇ ಅಲ್ಲ ಅವರಪ್ಪ ಬಂದ್ರೂ ಏನೂ ಮಾಡೋಕಾಗಲ್ಲ. ಸಂಸದ ಡಾ.ಕೆ.ಸುಧಾಕರ್‌ ಕೋವಿಡ್‌ ಕಳ್ಳ. ಆತನನ್ನು ಒಳಗೆ ಕಳಿಸಿಯೇ ತೀರುತ್ತೇನೆ ಎಂದು ಕೆಂಡಾಮಂಡಲರಾದರು.

ಬಿಜೆಪಿ3

ಪೊಲೀಸರಿಗೆ ತರಾಟೆ

ಬಿಜೆಪಿ ನಗರಸಭಾ ಸದಸ್ಯರನ್ನು ಹೊತ್ತು ದಾರ್ಜಿಲಿಂಗ್‌ ಪ್ರವಾಸ ತೆರಳಿದ್ದ ಬಸ್‌ ಗುರುವಾರ ಮಧ್ಯಾಹ್ನದ ವೇಳೆಗೆ ನಗರಸಭೆ ಕಾರ್ಯಾಲಯ ತಲುಪಿತು. ಈ ವೇಳೆ ನಗರಸಭೆ ಆವರಣದಲ್ಲಿದ್ದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೇಶವರೆಡ್ಡಿ ಅವರನ್ನು ಕಂಡ ಸಂಸದ ಡಾ.ಕೆ.ಸುಧಾಕರ್‌ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ನಗರಸಭಾ ಸದಸ್ಯರನ್ನು ಹೊರತುಪಡಿಸಿ ಬೇರೆ ಯಾರೂ ಇರುವಂತಿಲ್ಲ. ನಿಷೇಧ ಹೇರಿದ್ದರೂ ಹೇಗೆ ಬಂದರು. ನಾವು ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಅಧಿಕಾರಿಗಳ ವಿರುದ್ಧ ಸಿಟ್ಟಾದರು. ಬಳಿಕ ಚುನಾವಣಾಧಿಕಾರಿ ಅಶ್ವಿನ್‌ ಅವರು 1.20ಗಂಟೆಯೊಳಗೆ ಕೋರಂ ಇಲ್ಲದಿದ್ದರೆ ಚುನಾವಣೆ ಮುಂದೂಡುವುದಾಗಿ ತಿಳಿಸಿದರು. ಆನಂತರ ಬಿಜೆಪಿ ಸದಸ್ಯರು ಒಳಗಡೆ ತೆರಳಿ ಮತದಾನದಲ್ಲಿ ಪಾಲ್ಗೊಂಡರು.

ವಿಪ್‌ ಅಡ್ಡಿ, ಹೈಡ್ರಾಮ

ನಗರಸಭೆ ಆವರಣಕ್ಕೆ‌ ಬಸ್‌ನಲ್ಲಿ ಬಂದಿಳಿದ ಕಾಂಗ್ರೆಸ್ ಸದಸ್ಯರಿಗೆ ವಿಪ್‌ ನೀಡಲು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮುಂದಾದರು. ಈ ವೇಳೆ ಸಂಸದ ಸುಧಾಕರ್‌ ಕಾಂಗ್ರೆಸ್‌ ಮುಖಂಡರು ಇಲ್ಲಿರುವಂತಿಲ್ಲ. ಇದು ಕಾನೂನು ಬಾಹಿರ ಎಂದು ವಿಪ್‌ ನೀಡಲು ಅಡ್ಡಿಪಡಿಸಿದ ಪ್ರಸಂಗ ನಡೆಯಿತು. ಈ ವೇಳೆ ಬಿಜೆಪಿ ಸದಸ್ಯರು, ಕಾಂಗ್ರೆಸ್‌ ಮುಖಂಡರೊಂದಿಗೆ ತಳ್ಳಾಟ ನೂಕಾಟಗಳ ಹೈಡ್ರಾಮವೂ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...