ಕಾಂಗ್ರೆಸ್ ಶಾಸಕಾಂಗ ಸಭೆ‌ ಮುಕ್ತಾಯ; ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಹೈಕಮಾಂಡ್ ಹೆಗಲಿಗೆ

Date:

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ಹೊಣೆಯನ್ನು ಹೈಕಮಾಂಡ್‌ ನಿರ್ಧಾರಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ನಿರ್ಧರಿಸಿದೆ. ಸೋಮವಾರ ಅಥವಾ ಮಂಗಳವಾರ ಈ ಕುರಿತಾಗಿ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.

ಬೆಂಗಳೂರಿನ ವಸಂತನಗರದಲ್ಲಿರುವ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಐಸಿಸಿಯಿಂದ ವೀಕ್ಷಕರಾಗಿ ಮ‌ಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಾಬರಿಯಾ ಭಾಗವಹಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. ಈ ವರದಿಯನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ.

ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು,  ʻಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷರ ವಿವೇಚನೆಗೆ ಬಿಡುವ ನಿರ್ಣಯವನ್ನು ಸಿದ್ದರಾಮಯ್ಯ ಅವರು ಸಭೆಯಲ್ಲಿ ಮಂಡಿಸಿದ್ದರು. ಡಿಕೆ ಶಿವಕುಮಾರ್‌ ಸೇರಿದಂತೆ ಎಲ್ಲಾ 135 ಶಾಸಕರು ಸಿದ್ದರಾಮಯ್ಯ ಅವರ ನಿರ್ಣಯವನ್ನು ಸರ್ವಾನುಮತದಿಂದ ಅನುಮೋದಿಸಿದ್ದಾರೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಐಸಿಸಿಯ ಮೂವರು ಹಿರಿಯ ವೀಕ್ಷಕರು ಎಲ್ಲಾ ಶಾಸಕರ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿ ಎಐಸಿಸಿ ಅಧ್ಯಕ್ಷರಿಗೆ ತಲುಪಿಸಲಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದಾರೆ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದ ಸಭೆಯಲ್ಲಿ ಒಮ್ಮತದಿಂದ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷರ ವಿವೇಚನೆಗೆ ಬಿಡಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ, ನಾಯಕರಾದ ಬಿ ಕೆ ಹರಿಪ್ರಸಾದ್, ಎಚ್ ಕೆ ಪಾಟೀಲ್, ಎಂ ಬಿ ಪಾಟೀಲ್, ಸಲೀಮ್ ಮೊಹಮ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗರೆಡ್ಡಿ, ಚಂದ್ರಪ್ಪ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...