ರಾಜ್ಯ ಬಜೆಟ್ ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು ಘೋಷಣೆಗೆ ಸಂಭ್ರಮಿಸಿದ ಕಾಂಗ್ರೆಸ್ ಮುಖಂಡರು

Date:

ಕೋಲಾರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 2026 -27 ನೇ ಸಾಲಿನ ಬಜೆಟ್ ನಲ್ಲಿ ಕೋಲಾರಕ್ಕೆ ವೈದ್ಯಕೀಯ ಮೆಡಿಕಲ್ ಕಾಲೇಜು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ ಕೋಲಾರ ಕಾಂಗ್ರೆಸ್ ಮುಖಂಡರು.

ಈ ಸಂದರ್ಭದಲ್ಲಿ ಕೋಲಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಪ್ಸರ್ ಮಾತನಾಡಿ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದ್ದು ಕೋಲಾರ ಜಿಲ್ಲೆಗೆ ವೈದ್ಯಕೀಯ ಮೆಡಿಕಲ್ ಕಾಲೇಜು, ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಪೋಲಿಸ್ ಠಾಣೆ ಹಾಗೂ ರೈತರಿಗೆ ಕೈಗೆಟಕುವ ಬೆಲೆಯಲ್ಲಿ ಕೃಷಿ ಪರಿಕರಗಳನ್ನು ಮಾರಾಟ ಮಾಡಲು ರೈತ ಮಾಲ್ ಮಂಜೂರು ಮಾಡಿಲಾಗಿದ್ದು ಜಿಲ್ಲೆಯ ಜನರ ಪರವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸುತ್ತೇವೆ.

ನಮ್ಮ ಜನಪ್ರಿಯ ಶಾಸಕರಾದ ಕೋತ್ತೂರ್ ಮಂಜುನಾಥ್ ರವರ ಕಾಳಜಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ ಸದಸ್ಯರಾದ ಅನೀಲ್ ಕುಮಾರ್ ಹಾಗೂ ಮಾಲೂರು ಶಾಸಕ ನಂಜೇಗೌಡ ರವರ ಸಹಯೋಗದೊಂದಿಗೆ ಇಂದು ಮೆಡಿಕಲ್ ಕಾಲೇಜು ಘೋಷಣೆ ಯಾಗಿದ್ದು ಕೋಲಾರದ ಜನರಿಗೆ ಇಂದು ಐತಿಹಾಸಿಕ ದಿನವಾಗಿದೆ ಯಾಕಂದ್ರೆ ಇದುವರೆಗೂ ಕೋಲಾರಕ್ಕೆ ಮೆಡಿಕಲ್ ಕಾಲೇಜು ಬಂದಿಲ್ಲಾ ಶಾಸಕ ಕೋತ್ತೂರ್ ಮಂಜುನಾಥ್ ರವರು ಬಹಳಷ್ಟು ಶ್ರಮ ಪಟ್ಟು ನಮ್ಮ ಕೋಲಾರಕ್ಕೆ ಒಳ್ಳೆಯ ಸುದ್ದಿ ತಂದಿದ್ದಾರೆ ಹಾಗೂ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಸಹ ಮಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರ ಪರಿಶಿಷ್ಟ ಪಂಗಡದ ವಿಭಾಗದ ಜಿಲ್ಲಾಧ್ಯಕ್ಷ ಅಂಬರೀಶ್ ರವರು ಮಾತನಾಡಿ ಕೋಲಾರಕ್ಕೆ ಇಂದು ವಿಶೇಷವಾದ ದಿನವಾಗಿದೆ ಕಾಂಗ್ರೆಸ್ ಅಂದ್ರೆ ಬಡವರ ಪರವಾಗಿದೆ ರಾಜ್ಯ ಸರ್ಕಾರ ನಮ್ಮ ಜಿಲ್ಲೆಗೆ ಮೆಡಿಕಲ್ ಕಾಲೇಜು ಹಾಗೂ ರೈತರಿಗೆ ಮಾಲ್ ಗೆ ಬಜೆಟ್ ನಲ್ಲಿ ಮಂಜೂರು ನೀಡಿದ್ದು ಬಹಳ ಸಂತಸದ ವಿಷಯವಾಗಿದೆ.

ಕಳೆದ ಬಜೆಟ್ ನಲ್ಲಿ ಕೋಲಾರಕ್ಕೆ ಪಿಪಿಪಿ ಮಾಡೆಲ್ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ರು ಆದರೆ ಸಾರ್ವಜನಿಕ ಅಹವಾಲನ್ನು ಶಾಸಕ ಕೋತ್ತೂರ್ ಮಂಜುನಾಥ್, ನಸೀರ್ ಅಹ್ಮದ್, ಅನೀಲ್ ಕುಮಾರ್ ರವರು ಸರ್ಕಾರಕ್ಕೆ ಒತ್ತಡ ತಂದು ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿಸಿದ್ದಾರೆ ಇದರಿಂದ ಜಿಲ್ಲೆಯ ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಹರ್ಷ ತಂದಿದೆ. ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಕೋಲಾರದಲ್ಲಿ MSIL ವತಿಯಿಂದ ರೈತರಿಗೆ ಮಾಲ್ ತೆರೆಯಲು ಅವಕಾಶ ಮಾಡಿಕೊಟ್ಟಿದ್ದಾರೆ.

ಬಡವರ ಪರ ಕಾಳಜಿ ಇಟ್ಟುಕೊಂಡಿರುವ ಸಿಎಂ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಶಾಸಕ ಕೋತ್ತೂರ್ ಮಂಜುನಾಥ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಿರಿಯ ನಾಯಕರಾದ ರಮೇಶ್ ಕುಮಾರ್ ವಿಧಾನಪರಿಷತ್ ಸದಸ್ಯರಾದ ಅನೀಲ್ ಕುಮಾರ್ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಇದನ್ನು ಓದಿದ್ದೀರಾ..? ಗೊಬ್ಬರ ಕಾಳಸಂತೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಚಿವರಿಂದ ಖಡಕ್ ಸೂಚನೆ

ಈ ಸಂದರ್ಭದಲ್ಲಿ ಕೋಲಾರ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್, ಮಾಜಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಫೈರೋಜ್ ಖಾನ್, ಕಾಂಗ್ರೆಸ್ ಮುಖಂಡರಾದ ಅಮರ್, ಸೈಫ್, ನಗರಸಭೆ ಮಾಜಿ ಸದಸ್ಯರಾದ ರಫೀ, ಏಜಾಜ್, ಶಫೀ, ನಾರಾಯಣಸ್ವಾಮಿ, ತ್ಯಾಗರಾಜ್, ಚೌಡಪ್ಪ, ರಾಜೇಶ್, ನದೀಂ ಬೇಗ್, ಚಿನ್ನಾಪುರ ನಾರಾಯಣಸ್ವಾಮಿ ಸಂಪತ್, ಸ್ವಾಮಿ, ಹಾರೋಹಳ್ಳಿ ರಾಜೇಶ್ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಸುಹೈಲ್, ನಗರ ಅಧ್ಯಕ್ಷ ಅರ್ಬಾಜ್ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...