ಜು.27ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ

Date:

  • ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಚರ್ಚೆ ಸಾಧ್ಯತೆ
  • ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆಗೆ ಒತ್ತು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಜು.27ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ಬೆಂಗಳೂರಿನ ಏಟ್ರಿಯಾ ಹೋಟೆಲ್‌ನಲ್ಲಿ ಸಂಜೆ 6ಗಂಟೆಗೆ ನಡೆಯಲಿದೆ.

ಈ ಸಭೆಯಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಾಮರ್ಶೆ, ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸೇರಿದಂತೆ ಪಕ್ಷದೊಳಗಿನ ರಾಜಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ.

ಹಾಗೆಯೇ ಬಜೆಟ್ ಅಧಿವೇಶನದಲ್ಲಿ ನಡೆದ ಚರ್ಚೆ, ಆಡಳಿತ ಪಕ್ಷದ ವಿರುದ್ಧದ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಸೇರಿದಂತೆ ಇತರ ಸಂಗತಿಗಳು ಚರ್ಚೆಗೆ ಬರಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.

ಜು.19ರ ಸಂಜೆ 6.30ಕ್ಕೆ ಶಾಸಕಾಂಗ ಪಕ್ಷದ ಸಭೆ ನಡೆಯಬೇಕಿತ್ತು. ಆದರೆ, ಅದೇ ದಿನ ಸಚಿವರ ಜೊತೆ ಎಐಸಿಸಿ ಮುಖಂಡ ರಾಹುಲ್ ಸಭೆ ನಡೆಸಲಿದ್ದಾರೆಂಬ ಕಾರಣಕ್ಕೆ ಸಿಎಲ್‌ಪಿ ಸಭೆ ಮುಂದೂಡಲಾಗಿತ್ತು.

ಈ ನಡುವೆ ಜು.17 ಮತ್ತು 18ರಂದು ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ಜೊತೆ ಬಂದಿದ್ದ ರಾಹುಲ್ ಗಾಂಧಿ ಅವರು, ಜು.18ರ ರಾತ್ರಿಯೇ ದಿಲ್ಲಿಗೆ ಹಿಂದಿರುಗಿದ್ದರು. ಹೀಗಾಗಿ, ಸಚಿವರೊಂದಿಗಿನ ಸಭೆ ರದ್ದಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...