ಸಂಸದರ ಸ್ಥಾನ ಪಡೆದಿರುವುದು ಮೋದಿ ಎದುರು ಜಿ ಹುಜೂರ್ ಎನ್ನುವುದಕ್ಕೆ ಮಾತ್ರವೇ?: ಕಾಂಗ್ರೆಸ್‌ ಕಿಡಿ

Date:

  • ಪ್ರಸಕ್ತ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ನಯಾ ಪೈಸೆ ಅನುದಾನ ಇಲ್ಲ
  • ಅನ್ಯಾಯವಾಗುತ್ತಿರುವಾಗ ರಾಜ್ಯ ಬಿಜೆಪಿಯ 25 ಸಂಸದರ ಕೆಲಸವೇನು?

23 ಇಲಾಖೆಗಳ 61 ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳಿಗೆ ಪ್ರಸಕ್ತ ವರ್ಷ ಕೇಂದ್ರ ಸರ್ಕಾರ ನಯಾ ಪೈಸೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ರಾಜ್ಯ ಕಾಂಗ್ರೆಸ್‌ ತೀವ್ರವಾಗಿ ತರಾಟೆಗೆ ತಗೆದುಕೊಂಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್‌, “ಈ ಹಿಂದೆ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಗೆದ್ದರೆ ಕೇಂದ್ರದ ಅನುದಾನ ನಿಲ್ಲಲಿದೆ ಎಂದು ಬೆದರಿಕೆ ಹಾಕಿದ್ದರು, ಇಂದು ಅದೇ ಬೆದರಿಕೆಯಂತೆ ನಡೆದುಕೊಳ್ಳುತ್ತಿದೆಯೇ ಕೇಂದ್ರ ಸರ್ಕಾರ” ಎಂದು ಪ್ರಶ್ನಿಸಿದೆ.

“ರಾಜ್ಯ ಬಿಜೆಪಿಯ 25 ಸಂಸದರ ಕೆಲಸವೇನು? ಕರ್ನಾಟಕಕ್ಕೆ ಆಗುತ್ತಿರುವ ಈ ಅನ್ಯಾಯವನ್ನು ಏಕೆ ಪ್ರಶ್ನಿಸುತ್ತಿಲ್ಲ? ಕರ್ನಾಟಕದ ಮೇಲೆ ಈ ರೀತಿ ದ್ವೇಷ ಸಾಧಿಸುವ ನರೇಂದ್ರ ಮೋದಿ ಅವರು ವಾಜಪೇಯಿಯವರು ಹೇಳಿದ್ದ “ರಾಜಧರ್ಮ”ದ ಪಾಠವನ್ನು ನೆನಪಿಸಿಕೊಳ್ಳಲಿ” ಎಂದು ಕಿಡಿ ಕಾರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆಪರೇಷನ್‌ ಹಸ್ತ ಚರ್ಚೆ ನಡುವೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ತೇಜಸ್ವಿನಿ ಅನಂತಕುಮಾರ್‌

“ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳಿಗೆ ಬಿಡಿಗಾಸನ್ನೂ ನೀಡದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ನೆನಪಾಗುವುದು ಕೇವಲ ಚುನಾವಣೆಯ ಸಂದರ್ಭದಲ್ಲಿ ಮಾತ್ರನಾ?” ಎಂದು ಲೇವಡಿ ಮಾಡಿದೆ.

“ಮೂರು ದಿನಕ್ಕೊಮ್ಮೆ ರೋಡ್ ಶೋ ಮಾಡಿ ಕೈಬೀಸಿದ್ದರಲ್ಲ, ಈಗ ಕನ್ನಡಿಗರ ಹಿತ ಮರೆತು ಹೋಯ್ತೆ? ತೆರಿಗೆ ಪಾವತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದರೂ ಕರ್ನಾಟಕಕ್ಕೆ ಮರಳಿ ಕೊಡುತ್ತಿರುವುದು ಶೂನ್ಯ. ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ ಮೋದಿ ಎದುರು ಮಾತನಾಡಲು ಬಿಜೆಪಿ ಸಂಸದರಿಗೆ ಭಯವೇಕೆ? ಸಂಸದರ ಸ್ಥಾನ ಪಡೆದಿರುವುದು ಮೋದಿ ಎದುರು ಜಿ ಹುಜೂರ್ ಎನ್ನುವುದಕ್ಕೆ ಮಾತ್ರವೇ?” ಎಂದು ಕುಟುಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...