ರಾಯಚೂರು | ಮಾದಿಗರ ಮತ ಪಡೆಯಲು ಕಾಂಗ್ರೆಸ್‌ನಿಂದ ಒಳಮೀಸಲಾತಿ ಬಳಕೆ: ಮಾದಿಗ ದಂಡೋರ ಸಮಿತಿ ಆರೋಪ

Date:

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ದೇಶನದಂತೆ ಮತ್ತೊಂದು ಏಕಸದಸ್ಯ ಸಮಿತಿ ರಚಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಉಪಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುತ್ತದೆ ಎಂದು ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ಹೇಳಿದರು.

ಬುಧವಾರ ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿಗೆ ನಿರ್ಧರಿಸಿ ಏಕ ಸದಸ್ಯ ಸಮಿತಿ ರಚಿಸಿರುವುದು ವಿಳಂಬ ಮಾಡುವ ದುರುದ್ದೇಶವಿದೆ. ಸಚಿವ ಸಂಪುಟ ಸಭೆಯಂತೆ ಛಲವಾದಿ ಸಮುದಾಯದ ಸಚಿವರುಗಳು ಸರ್ಕಾರದ ಮೇಲೆ ಒತ್ತಡ ಹಾಕುವ ತಂತ್ರ ನಡೆಸಿದ್ದರು. ಒಲ್ಲದ ಮನಸ್ಸಿನಿಂದಲೇ ಸಿದ್ದರಾಮಯ್ಯನವರು ಹೈಕೋರ್ಟ್‌ ನ್ಯಾಯಮೂರ್ತಿ ಮತ್ತೊಂದು ಸಮಿತಿ ರಚಿಸಿ ಉಪ ಚುನಾವಣೆಯಲ್ಲಿ ಮಾದಿಗ ಸಮದಾಯ ಓಟು ಪಡೆಯುವ ದುರುದ್ದೇಶ ಹೊಂದಿದ್ದಾರೆ ಎಂದು ಹೇಳಿದರು.

IMG 20241030 WA0007

ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಪರಮೇಶ್ವರ ಇವರು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಜಾರಿಗೆ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿದ್ದರು. ಮಾದಿಗ ಸಮುದಾಯದ ಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಮಾದಿಗರಿಗೆ ನಿಧಾನದ್ರೋಹ ಮಾಡುವ ಹುನ್ನಾರ ನಡೆಸಿದೆ. ಮೂರು ತಿಂಗಳಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಲು ಸಾಧ್ಯವಾಗುವುದಿಲ್ಲ. ಸದಾಶಿವ ಆಯೋಗ ನೀಡಿರುವ ದತ್ತಾಂಶ ಸಿದ್ಧವಾಗಿದ್ದರೂ ಕಾಲಹರಣ ಮಾಡಲು ಏಕಸದಸ್ಯ ಸಮಿತಿ ರಚಿಸಲಾಗಿದೆ. ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ ಬಿಜೆಪಿ ಗೆಲ್ಲಿಸಲು ಸಮದಾಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳು ಒಳಮೀಸಲಾತಿ ನಾನೇ ಜಾರಿ ಮಾಡುವುದಾಗಿ ಹೇಳುತ್ತಾ ಬಂದಿದ್ದಾರೆಯೇ ಹೊರತು ಸ್ವಪಕ್ಷೀಯರಿಂದ ಇರುವ ಒತ್ತಡವನ್ನು ಬಹಿರಂಗಪಡಿಸಿಲ್ಲ. ಅದನ್ನು ಬಹಿರಂಗಪಡಿಸಬೆಕು ಎಂದು ಒತ್ತಾಯಿಸಿದರು.

ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ತಡೆಯುವುದಾಗಿ ಸರಕಾರ ಹೇಳಿದ್ದರೂ ಈಗಾಗಲೇ ನೋಟಿಫಿಕೇಶನ್ ಆಗಿರುವ ಹುದ್ದೆಗಳನ್ನು ಮತ್ತೊಂಡು ಕಡೆಯಿಂದ ನೇಮಕಾತಿ ಮುಂದುವರಿಸಿರುವುದು ಸಮುದಾಯಕ್ಕೆ ಮಾಡಿರುವ ವಂಚನೆಯಾಗಿದೆ. ಕಾಂಗ್ರೆಸ್ ಪ್ರಾರಂಭದಿಂದಲೂ ಒಳಮೀಸಲಾತಿಗೆ ಸಹಕರಿಸುತ್ತಿಲ್ಲ. ಸರಕಾರ ಕೇವಲ ಭರವಸೆಯನ್ನಾಗಿ ನೀಡಿ, ಸಮುದಾಯದ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಮುದಾಯದ ಜನರು ಎಚ್ಚರಗೊಂಡು ಕಾಂಗ್ರೆಸ್ ತಕ್ಕ ಉತ್ತರ ನೀಡಬೇಕೆಂದು ನರಸಪ್ಪ ದಂಡೋರ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಸರ್ಕಾರಿ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನೇಮಿಸಲು ಎಸ್ಎಫ್‌ಐ ಒತ್ತಾಯ

ಈ ಸಂದರ್ಭದಲ್ಲಿ ಮಾದಿಗ ದಂಡೋರ ಸಮಿತಿಯ ರಾಯಚೂರು ಜಿಲ್ಲಾಧ್ಯಕ್ಷ ಮಾನಪ್ಪ, ಮೇಸ್ತಿ ದುಳ್ಳಯ್ಯ ಗುಂಜಹಳ್ಳಿ, ರಂಜಿತ ದಂಡೋರ, ನರಸಿಂಹಲು ಗಾಜರಾಳ, ಯಲ್ಲಪ್ಪ ರಾಂಪೂರು, ಹನುಮಂತ ಜುಮಲಗೇರಾ, ದಾವೀದ್ ಮರ್ಚಟ್ಹಾಳ, ನರಸಿಂಹಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...