ಚಿಕ್ಕಬಳ್ಳಾಪುರ | ರಾಜ್ಯಪಾಲರ ವಿರುದ್ಧ ಸಚಿವ ಸುಧಾಕರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ

Date:

ರಾಜ್ಯಪಾಲರ ವಿರುದ್ಧ ಚಿಂತಾಮಣಿಯಲ್ಲಿ ಬೃಹತ್ ಪ್ರತಿಭಟನೆ‌ ನಡೆಯಿತು. ಸಚಿವ ಡಾ.ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕೆಂಡಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಭಾನುವಾರ ಸಚಿವ ಡಾ.ಎಂ.ಸಿ.ಸುಧಾಕರ್‌ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಚಿಂತಾಮಣಿ ನಗರದಲ್ಲಿರುವ ಸಚಿವ ಡಾ.ಎಂ.ಸಿ.ಸುಧಾಕರ್ ನಿವಾಸದಿಂದ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬೆಂಗಳೂರು ವೃತ್ತಕ್ಕೆ ಬಂದು ಗೋ ಬ್ಯಾಕ್ ರಾಜ್ಯಪಾಲ ಎಂದು ಧಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಲೀಸರು ತನಿಖೆಗೆ ಅನುಮತಿ ಕೇಳದಿದ್ದರೂ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂವಿಧಾನ ವಿರೋಧಿಯಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ತಕ್ಷಣವೇ ಪ್ರಾಸಿಕ್ಯೂಶನ್ ಅನುಮತಿಯನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಪರವಾಗಿ ಹೈಕಮಾಂಡ್ ಮತ್ತು ಕರ್ನಾಟಕದ ಜನತೆ ಇದೆ ಎಂದು ಅಭಯ ನೀಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ನೀಡುವ ಮೂಲಕ ರಾಜ್ಯದ ಜನತೆ ಸ್ಪಷ್ಟ ಬಹುಮತ ನೀಡಿದ್ದಾರೆ. ಕಾಂಗ್ರೆಸ್‌ನ ಶಾಸಕರನ್ನು ಖರೀದಿಸಿ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿರುವ ಬಿಜೆಪಿ ಮುಖಂಡರು ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಬೀಳಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ಐದು ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರು ಯಶಸ್ವಿಯಾಗಿ ಜಾರಿಗೊಳಿಸಿರುವುದನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಸಾಧ್ಯವಾಗುತ್ತಿಲ್ಲ. ಅವರ ಜನಪ್ರಿಯತೆಗೆ ಕುಂದು ತರುವ ದುರುದ್ದೇಶದಿಂದಲೆ ಬಿಜೆಪಿಯವರು ರಾಜಭವನದ ಮೂಲಕ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುರುಗಮಲ್ಲ ಲಕ್ಷ್ಮೀನಾರಾಯಣ ರೆಡ್ಡಿ, ಡಾಬಾ ನಾಗರಾಜ್, ಡಾ.ಬಾಲಾಜಿ ರೆಡ್ಡಿ, ಅಶ್ವಥ್ ನಾರಾಯಣಬಾಬು, ಡಾ.ವಿ.ಅಮರ್, ಮುಖಂಡರಾದ ಉಮೇಶ್, ಶೇಕ್ ಸಾದಿಕ್, ವಕೀಲರಾದ ಬರೀದ್, ನಗರಸಭಾ ಸದಸ್ಯರಾದ ಹರೀಶ್, ರೆಡ್ಡಪ್ಪ, ಇಮ್ತಿಯಾಜ್ ಪಾಷಾ, ಕೆ.ಪಿ.ಸಿ.ಸಿ ಸದಸ್ಯರಾದ ಸೈಯದ್ ಎಜಾಜ್, ಕೃಷ್ಣಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...