ಲಿಂಗಸೂಗೂರು | ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ಸಂಘಟಕರಿಂದ ಬರುತ್ತಿರುವ ಜೀವ ಬೆದರಿಕೆಗಳು ಮತ್ತು ನಿಂದನೆಗಳನ್ನು ತೀವ್ರವಾಗಿ ಖಂಡಿಸಿ, ಲಿಂಗಸೂಗೂರು ತಾಲ್ಲೂಕು ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿದರು.

ಪಟ್ಟಣದ ಗಡಿಯಾರ ಚೌಕ್‌ನಿಂದ ಆರಂಭವಾದ ಮೆರವಣಿಗೆ ಬಸ್ ನಿಲ್ದಾಣ, ಹಳೆ ಕೋರ್ಟ್ ಮಾರ್ಗವಾಗಿ ಸಹಾಯಕ ಆಯುಕ್ತ ಕಚೇರಿವರೆಗೆ ಮೆರವಣಿಗೆ ನಡೆಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಘೋಷಣೆ ಕೂಗಿ ಸಹಾಯಕ ಆಯುಕ್ತರವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಲಿಂಗಸೂಗೂರು ಮಾಜಿ ಶಾಸಕ ಡಿ ಎಸ್ ಹುಲಗೇರಿ ಮಾತನಾಡಿ, ಸರ್ಕಾರ, ಕಾಂಗ್ರೆಸ್ ಪಕ್ಷ ಹಾಗೂ ನಾಡಿನ ಎಲ್ಲಾ ಸಮಾಜದ ವರ್ಗಗಳು ಪ್ರಿಯಾಂಕ್ ಖರ್ಗೆ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಜನಹಿತದ ನಿಲುವುಗಳಲ್ಲಿ ಪ್ರಿಯಾಂಕ್ ಖರ್ಗೆ ಅವರು ತೋರಿಸಿರುವ ಧೈರ್ಯ ಮತ್ತು ಬದ್ಧತೆ ಶ್ಲಾಘನೀಯ. ಅವರ ವಿರುದ್ಧ ನಡೆಯುತ್ತಿರುವ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಎಲ್ಲರೂ ಒಂದಾಗಿ ನಿಲ್ಲಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿರುವ ಬೆದರಿಕೆ ಮತ್ತು ನಿಂದನೆಗಳನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ. ಪಕ್ಷದ ಎಲ್ಲಾ ನಾಯಕರೂ ಹಾಗೂ ಕಾರ್ಯಕರ್ತರೂ ಅವರ ಬೆಂಬಲಕ್ಕೆ ದೃಢವಾಗಿ ನಿಂತಿದ್ದಾರೆ. ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಆರ್‌ಎಸ್‌ಎಸ್ ಸಂಘಟನೆ ಸರಕಾರಿ ಜಾಗಗಳನ್ನು ದುರುಪಯೋಗಪಡಿಸಿಕೊಂಡು ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ; ಜಿಲ್ಲೆಯಲ್ಲಿ ಅಕ್ಟೋಬರ್ 28 ರವರೆಗೆ ಮಳೆ ಸಾಧ್ಯತೆ

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅಮ್ಜದ್ ಸೇಠ್, ಉಮೇಶ್ ಐಹೊಳೆ, ಸಂಗಮೇಶ ನಾಯಕ, ಗಂಗಾಧರ, ಹಟ್ಟಿ ಯುವ ಘಟಕದ ಅಧ್ಯಕ್ಷ ಲಾಲ್ ಪೀರ, ಕಾಂಗ್ರೆಸ್ ಕಾರ್ಯಕರ್ತರು ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...