ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್‌, ಪ್ರಚಾರ ಪಡೆಯುತ್ತಿರುವುದು ಬಿಜೆಪಿ: ಬಿ ಕೆ ಹರಿಪ್ರಸಾದ್‌ ಕಿಡಿ

Date:

  • ‘ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ’
  • ‘ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ’

ಬೆಂಗಳೂರಿನಲ್ಲಿ ಇಸ್ರೋ ಸಂಸ್ಥೆಗೆ ಸ್ಥಳ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ಆದರೆ, ನಾವು ಬಿತ್ತಿರುವ ಬೀಜದ ಮರದ ಹಣ್ಣನ್ನು ಬಿಜೆಪಿಯವರು ತಿನ್ನುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಕಿಡಿಕಾರಿದರು.

ಖಾಸಗಿ ಕಾರ್ಯಕ್ರಮದ ನಿಮ್ಮಿತ್ತ ಕಲಬುರಗಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ವೈಜ್ಞಾನಿಕ ನೆಲಗಟ್ಟಲ್ಲಿ ಕಾಂಗ್ರೆಸ್ ಅಚಲ ನಂಬಿಕೆ ಇಟ್ಟುಕೊಂಡಿದೆ. ಬಿಜೆಪಿಯವರ ತರಹ ಮೂಢನಂಬಿಕೆ ಇಟ್ಟುಕೊಂಡ ಪಕ್ಷ ನಮ್ಮದಲ್ಲ” ಎಂದರು.

“ಚಂದ್ರಯಾನ-3ರಲ್ಲಿ ಕಾರ್ಯನಿರ್ವಹಿಸಿದ್ದ ಬಹುತೇಕ ವಿಜ್ಞಾನಿಗಳು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ಗಮನಾರ್ಹ ಸಂಗತಿ” ಎಂದು ಹರಿಪ್ರಸಾದ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಘೋಷಣೆಗಳಿಗೇನು ಕಮ್ಮಿ ಇಲ್ಲ. ಬಿಜೆಪಿಯು ರಾಷ್ಟ್ರದ ವೈವಿಧ್ಯತೆ ಹಾಳು ಮಾಡುತ್ತಿದ್ದು, ವಿವೇಕಾನಂದರ ಆಶಯದ ವಿರುದ್ಧ ಬಿಜೆಪಿ ನಿರ್ಧಾರ ಕೈಗೊಳ್ಳುತ್ತಿದೆ. ಒನ್ ನೇಷನ್ ಒನ್ ಲೀಡರ್ ಅಂದರು ಅನ್ನಬಹುದು, ದೇಶದಲ್ಲಿ ಇಡಿ ಮತ್ತು ಸಿಬಿಐ ಬಳಸದೇ ಚುನಾವಣೆ ನಡೆಸಬೇಕಾಗಿದೆ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲಿತ  ಪ್ರಾಧ್ಯಾಪಕಿಯ ಮೇಲೆ ಸಹೋದ್ಯೋಗಿಗಳು- ವಿದ್ಯಾರ್ಥಿಗಳಿಂದ ಹಲ್ಲೆ; ಎತ್ತ ಸಾಗುತ್ತಿದೆ ಭಾರತ?

“ಸಚಿವ ಸ್ಥಾನ ಸಿಗದಿರುವುದಕ್ಕೆ ನಾನು ಮುನಿಸಿಕೊಂಡಿಲ್ಲ. ನಾನು ಪಕ್ಕಾ ಕಾಂಗ್ರೆಸ್ಸಿನವನು. ನನ್ನ ಹೋರಾಟ ಮಂತ್ರಿ ಸ್ಥಾನಕ್ಕಲ್ಲ, ಸಣ್ಣ ಸಮುದಾಯಗಳಿಗೆ ಅವಕಾಶ ಸಿಗಬೇಕು ಎಂಬುದು. ಈ ವಿಚಾರದಲ್ಲಿ ನಾನು ಬೀದಿಗಿಳಿದು ಹೋರಾಟ ಮಾಡಲು ಸಿದ್ಧ” ಎಂದರು.

“ಜವಾನನಿಂದ ಹಿಡಿದು ದಿವಾನನವರೆಗೆ ಒಂದೇ ಜಾತಿಯವರನ್ನು ಹಾಕಿಕೊಳ್ಳಲು ಆಗಲ್ಲ. ಎಲ್ಲ ವರ್ಗದವರಿಗೂ ಅವಕಾಶ ಕೊಡಬೇಕು ಎಂಬುದನ್ನು ಇಂದಿರಾ ಗಾಂಧಿಯವರನ್ನು ನೋಡಿ ಇಂದಿನವರು ಕಲಿಯಬೇಕು” ಎಂದು ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸದೇ ಕುಟುಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...