ಮಂಡ್ಯ | ಮದ್ದೂರು ಪುರಸಭೆಯಲ್ಲಿ 17 ವರ್ಷಗಳ ಬಳಿಕ ಗದ್ದುಗೆ ಏರಿದ ಕಾಂಗ್ರೆಸ್‌

Date:

ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯಲ್ಲಿ 17 ವರ್ಷಗಳ ಬಳಿಕ, ಕಾಂಗ್ರೆಸ್ ಪಕ್ಷವು ಜೆಡಿಎಸ್‌ ಮತ್ತು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

23 ಸದಸ್ಯ ಬಲದ ಪುರಸಭೆಯಲ್ಲಿ, ಸೋಮವಾರದಂದು ಚುನಾವಣೆ ನಡೆಯಿತು. ಕಾಂಗ್ರೆಸ್ ಪಕ್ಷದ ಕೋಕಿಲಾ ಅರುಣ್ ಅಧ್ಯಕ್ಷರಾಗಿ ಮತ್ತು ಜೆಡಿಎಸ್‌ನ ಟಿ.ಆರ್. ಪ್ರಸನ್ನ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಕಾಂಗ್ರೆಸ್ ಶಾಸಕ ಕದಲೂರು ಉದಯ್ ಅವರ ನೇತೃತ್ವದಲ್ಲಿ, ಜೆಡಿಎಸ್‌ನ 6 ಸದಸ್ಯರು ಮತ್ತು ಬಿಜೆಪಿಯ ಓರ್ವ ಸದಸ್ಯರಿಂದ ಬೆಂಬಲ ಪಡೆದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷೆ ಅಭ್ಯರ್ಥಿ ಕೋಕಿಲಾ ಅರುಣ್ ಪರ ಒಟ್ಟು 15 ಮತಗಳು ಬಿದ್ದಿದ್ದು, ಇದರಲ್ಲಿ ಕಾಂಗ್ರೆಸ್‌ನ 3, ಜೆಡಿಎಸ್‌ನ 6, ಪಕ್ಷೇತರ 4 ಮತ್ತು ಬಿಜೆಪಿ 1 ಮತಗಳು ಸೇರಿವೆ. ಜೆಡಿಎಸ್‌ನ ಶೋಭಾ ರಾಣಿ ಅವರ ಪರ ಕೇವಲ 8 ಮತಗಳು ಬಿದ್ದವು. ಈ ವೇಳೆ, ಜೆಡಿಎಸ್‌ನ ಸದಸ್ಯ ಸುರೇಶ್ ಕುಮಾರ್ ಹಾಗೂ ಸಂಸದ ಎಚ್.ಡಿ. ಕುಮಾರಸ್ವಾಮಿ ಗೈರಾಗಿದ್ದರು.

1001617661

ಕಾಂಗ್ರೆಸ್‌‌ಗೆ ಬೆಂಬಲ ನೀಡಿದ ಜೆಡಿಎಸ್‌ ಸದಸ್ಯ ಟಿ.ಆರ್. ಪ್ರಸನ್ನಕುಮಾರ್ 15 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಜೆಡಿಎಸ್‌ ಅಭ್ಯರ್ಥಿ ಮನೋಜ್ ಕುಮಾರ್ 8 ಮತಗಳನ್ನು ಮಾತ್ರ ಪಡೆದರು.

ಸಿಂಗ್ರಯ್ಯ 2007ರಲ್ಲಿ ಕಾಂಗ್ರೆಸ್ಸಿನಿಂದ ಅಧ್ಯಕ್ಷರಾಗಿದ್ದರು. ಶಾಸಕ ಕದಲೂರು ಉದಯ್‌ ನೇತೃತ್ವದಲ್ಲಿ 17 ವರ್ಷಗಳ ನಂತರ ಮತ್ತೊಮ್ಮೆ ಮದ್ದೂರು ಪುರಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ.

ಈ ಗೆಲುವಿನ ಸಂಭ್ರಮಾಚರಣೆ ವೇಳೆ, ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಸಿಡಿಸಿ ಉತ್ಸವವನ್ನು ಆಚರಿಸಿದರು. ಕಾಂಗ್ರೆಸ್ ಮುಖಂಡರಾದ ಅರುಣ್ ಕುಮಾರ್, ಅಮರ್ ಬಾಬು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...