ವಿಶ್ವಾಸ ಇಟ್ಟು ಕಾಂಗ್ರೆಸ್‌ ಸೇರುವವರನ್ನು ತಡೆಯುವುದಿಲ್ಲ: ಡಿಕೆ ಶಿವಕುಮಾರ್

Date:

  • ‘ನಮಗೆ ಆಪರೇಷನ್‌ ಹಸ್ತದ ಅಗತ್ಯವಿಲ್ಲ, ಬರುವವರು ಬರಲಿ’
  • ‘ಕೆಲಸದ ವಿಚಾರವಾಗಿ ಕೆಲವು ನಾಯಕರು ಭೇಟಿ ಮಾಡುತ್ತಾರೆ’

ನಮ್ಮ ಪಕ್ಷಕ್ಕೆ ಬಲ ತುಂಬುವವರು, ನಮ್ಮ ಮೇಲೆ ವಿಶ್ವಾಸ ಇಡುವವರನ್ನು ನಾವು ಪಕ್ಷಕ್ಕೆ ಸದಾ ಸ್ವಾಗತಿಸುತ್ತೇವೆ. ಮುಖಂಡರಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆಗಳಿರುತ್ತವೆ. ಏನೋ ಕೆಲಸಗಳು ಆಗಬೇಕಾಗಿರುತ್ತವೆ. ಅದಕ್ಕಾಗಿ ಕೆಲವು ನಾಯಕರು ಭೇಟಿ ಮಾಡುತ್ತಾರೆ ಎಂದು ಡಿಎಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಚಾಮರಾಜನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಮಗೆ ಆಪರೇಷನ್‌ ಹಸ್ತದ ಅಗತ್ಯವಿಲ್ಲ. ಆದರೆ, ಕಾಂಗ್ರೆಸ್‌ ಸೇರಲು ಬಯಸುವವರನ್ನು ತಡೆಯುವುದಿಲ್ಲ” ಎಂದರು.

“ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಧಾನಮಂತ್ರಿ ಕಚೇರಿಯ ಸಂದೇಶವೇ ಬಿಜೆಪಿ ನಾಯಕ ಆರ್. ಅಶೋಕಗೆ ಗೊತ್ತಿಲ್ಲ. ಸುಮ್ಮನೇ ಏನೇನೋ ಮಾತನಾಡುತ್ತಾರೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್‌ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸುವ ಬಗ್ಗೆ ಪ್ರಶ್ನಿಸಿದಾಗ, “ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವರಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಯವರಿಗೂ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ನ್ಯಾಯ ಒದಗಿಸುವುದು ನಮ್ಮ ಆದ್ಯತೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿ: ಜಗದೀಶ್‌ ಶೆಟ್ಟರ್‌ ಲೇವಡಿ

“ಚಾಮರಾಜನಗರ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ. ಖಾಸಗಿ ಕಂಪನಿಯು ₹2,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದ್ದು, ಮೊದಲ ಹಂತದಲ್ಲಿ ₹500 ಕೋಟಿಯನ್ನು ಇಲ್ಲಿ ಹೂಡಿಕೆ ಮಾಡಿ ಬ್ಯಾಟರಿ ಉತ್ಪಾದನಾ ಘಟಕ ನಿರ್ಮಾಣ ಮಾಡುತ್ತಿದೆ. ಗಡಿ ಪ್ರದೇಶ ಚಾಮರಾಜನಗರದಲ್ಲಿ ಕೈಗಾರಿಕೆಗೆ ಬಂಡವಾಳ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಪ್ರೋತ್ಸಾಹ ನೀಡಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...