ಸೆ.5ರಂದು ಶಾಲೆಗಳಲ್ಲಿ ಸಂವಿಧಾನ ಪ್ರಸ್ತಾವನೆ ಓದು ಕಾರ್ಯಕ್ರಮಕ್ಕೆ ಚಾಲನೆ: ಸಚಿವ ಮಧು ಬಂಗಾರಪ್ಪ

Date:

  • ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲೂ ವಿದ್ಯಾರ್ಥಿಗಳಿಂದ ಸಂವಿಧಾನದ ಓದು
  • ಈ ವರ್ಷ 50 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ: ಮಧು

ಸೆ.5ರಂದು ನಡೆಯುವ ಶಿಕ್ಷಕರ ದಿನಾಚರಣೆಯಂದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಕಡ್ಡಾಯವಾಗಿ ಓದುವ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಧಾರವಾಡದಲ್ಲಿ ಬೆಂಗಳೂರಿನ ಇಕೋ ವಾಚ್ ಸಂಘಟನೆ, ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಬಾಲ ಬಳಗ ಸೃಜನಶೀಲ ಶಿಕ್ಷಣ ಪ್ರತಿಷ್ಠಾನ ವತಿಯಿಂದ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಮಕ್ಕಳ ನಡಿಗೆ ಹಸಿರಿನ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಸಂವಿಧಾನ ಓದು ಕಾರ್ಯಕ್ರಮಕ್ಕೆ ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ. ದೇಶದಲ್ಲಿನ ಪ್ರಜೆಗಳೆಲ್ಲರೂ ಅನ್ಯೂನ್ಯವಾಗಿ ಬಾಳಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಸಂವಿಧಾನ ಪ್ರಸ್ತಾವನೆಯನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು ಎಂಬುದು ಈ ಕಾರ್ಯಕ್ರಮದ ಆಶಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

“ಈ ವರ್ಷ 50 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಲಾಗಿದೆ. ಶಾಲಾ ಮತ್ತು ಸಾಕ್ಷರತಾ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ಬಿಸಿಯೂಟ ಸೇವನೆ ನಂತರ ಮಕ್ಕಳು ಗಿಡದ ಬುಡದಲ್ಲಿ ತಟ್ಟೆ ತೊಳೆಯುವಂತೆ ಉದ್ದೇಶಿಸಲಾಗಿದೆ” ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು ಬಗೆಹರಿದಿಲ್ಲ. ಕೆಲವೆಡೆ ಶಾಲಾ ಕಟ್ಟಡ ಸಮಸ್ಯೆ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳು ಇವೆ. ಎರಡು ವರ್ಷದಲ್ಲಿ ಎಲ್ಲ ಸಮಸ್ಯೆ ಪರಿಹರಿಸುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...