ಕಳಪೆ ಶಿಕ್ಷಣದಿಂದ ಸಂವಿಧಾನ ಬುಡಮೇಲು: ಶಿಕ್ಷಣ ತಜ್ಞ ನಿರಂಜನಾರಾಧ್ಯ

Date:

“ರಾಜ್ಯದಲ್ಲಿ 2009ರ ಶಿಕ್ಷಣ ಹಕ್ಕು ಕಾಯ್ದೆಯು ಎಷ್ಟರ ಮಟ್ಟಿಗೆ ಅನುಷ್ಠಾನಗೊಂಡಿದೆ. ಅದರ ವಸ್ತುಸ್ಥಿತಿಯನ್ನ ರಾಜಕೀಯ ಮತ್ತು ಆರ್ಥಿಕ ದೃಷ್ಟಿಯಿಂದ ಅರ್ಥಮಾಡಿಕೊಳ್ಳಬೇಕಿದೆ. ಬಹುತ್ವದ ಮೌಲ್ಯಗಳನ್ನ ಮಕ್ಕಳಲ್ಲಿ ಬಿತ್ತಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಿಂದ ಮಾತ್ರ ಸಾಧ್ಯ. ಇದು ಸಾಧ್ಯವಾಗದೆ ಹೋದಲ್ಲಿ ಸಂವಿಧಾನ ಬುಡಮೇಲು ಮಾಡುವ ಜನರಿಗೆ ತುಂಬ ಅನುಕೂಲವಾಗಲಿದೆ” ಎಂದು ಖ್ಯಾತ ಶಿಕ್ಷಣ ತಜ್ಞ ನಿರಂಜನಾರಾಧ್ಯ ಹೇಳಿದರು.

ಬೆಂಗಳೂರಿನಲ್ಲಿ ಎಸ್‌ಐಓ ಮತ್ತು ಸಿಇಆರ್‌ಟಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ‘ಆರ್‌ಟಿಇ-2009; ವಸ್ತುಸ್ಥಿತಿ, ಸಮಸ್ಯೆಗಳು ಮತ್ತು ಸವಾಲುಗಳು’ ಕುರಿತು ನಡೆಸಿದ್ದ ‘ಶಾಲಾ ಸಮೀಕ್ಷಾ ವರದಿ’ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಶಿಕ್ಷಣ ವ್ಯವಸ್ಥೆಯನ್ನ ಖಾಸಗಿಕರಣ ಮಾಡಿದರೆ ಮಾತ್ರ ಉತ್ತಮ ಶಿಕ್ಷಣ ಸಿಗುತ್ತದೆ ಎಂಬ ನಿರ್ವಚನ ಸೃಷ್ಟಿಸಲಾಗಿದೆ. ಐಐಟಿ, ಐಐಎಮ್, ಕಾನೂನು ಶಾಲೆಗಳಿಗೆ ಸೇರುವ ಬಹುತೇಕರು ಕೇಂದ್ರ ಸರ್ಕಾರ ಅಡಿಯಲ್ಲಿ ಬರುವ ಕೇಂದ್ರಿಯ ವಿದ್ಯಾಲಯ ಮತ್ತು ನವೋದಯ ಶಾಲೆಗಳಲ್ಲಿ ಓದಿದವರು. ಈ ಶಾಲೆಗಳ ಶೈಕ್ಷಣಿಕ ಗುಣಮಟ್ಟ ತಲುಪಲು ಯಾವ ಖಾಸಗಿ ಶಿಕ್ಷಣ ಸಂಸ್ಥೆಯಿಂದಲು ಸಾಧ್ಯವಾಗಿಲ್ಲ. ಆದರೆ, ಉಳಿದ ಸರ್ಕಾರಿ ಶಾಲೆಗಳ ಗುಣಮಟ್ಟ ಏರಿಸಲು ಯಾಕೆ ಸಾಧ್ಯವಾಗಿಲ್ಲ ಎಂಬುದು ದೊಡ್ಡ ರಾಜಕೀಯ ಪ್ರಶ್ನೆಯಾಗಿದೆ” ಎಂದರು.

“ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಯಾವ ರಾಜಕೀಯ ಪಕ್ಷಗಳೂ ಆಧ್ಯತೆಯಾಗಿ ಪರಿಗಣಿಸಿಲ್ಲ. ರಾಜ್ಯದ 14,738 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 30ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಇನ್ನು ಎರಡು ಮೂರು ವರ್ಷದಲ್ಲಿ ಈ ಎಲ್ಲ ಶಾಲೆಗಳನ್ನ ಮುಚ್ಚಲಾಗುತ್ತದೆ. ಇದರಿಂದ ಸಾಮಾಜಿಕ-ಆರ್ಥಿಕ ಹಿಂದುಳಿದವರಿಗೆ ಹೆಚ್ಚು ನಷ್ಟವಾಗಲಿದೆ. 50,000 ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಉತ್ತರ ಕರ್ನಾಟಕಕ್ಕೆ ಹೋದರೆ ಶೂನ್ಯ ಶಿಕ್ಷಕರಿರುವ ಅನೇಕ ಶಾಲೆಗಳಿವೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅವರೇ ರೂಪಿಸಿದ ‘ಆರ್‌ಟಿಇ’ ಕಾಯ್ದೆಯನ್ನ ಪರಿಣಾಮಕಾರಿಯಾಗಿ ಜಾರಿ ಮಾಡಿ ಎಂದು ಒತ್ತಾಯಿಸಬೇಕಾಗಿದೆ. ಇದೊಂದು ಜನಹೋರಾಟ ಆಗದಿದ್ದರೆ, ಕರ್ನಾಟಕದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಅನುಷ್ಠಾನ ಆಗವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಮೀಕ್ಷೆಯು ಒಟ್ಟು 151 ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳನ್ನ ಒಳಗೊಂಡಿದೆ. ಸಮೀಕ್ಷಾ ವರದಿಯು ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಮಾನದಂಡಗಳನ್ನು ಎಷ್ಟರ ಮಟ್ಟಿಗೆ ಅಳವಡಿಸಿಕೊಂಡಿವೆ ಎಂಬುದನ್ನು ತಿಳಿಸಿಕೊಡುತ್ತದೆ. ಈ ಶಾಲೆಗಳಲ್ಲಿ ಒಟ್ಟು 270 ವಿದ್ಯಾರ್ಥಿಗಳು ಹಲವಾರು ಕಾರಣಗಳಿಂದ ಶಿಕ್ಷಣವನ್ನು ಕಡಿತಗೊಳಿಸಿ, ಶಾಲೆ ತೊರೆದಿದ್ದಾರೆ. 34 ಶಾಲೆಗಳಲ್ಲಿ ಬರೇ ಬಾಲಕಿಯರಿಗೆ ಶೌಚಾಲಯವಿದೆ. ಬಾಲಕರು ಬಯಲು ಶೌಚಾಲಯವನ್ನೇ ಅವಲಂಬಿಸಿದ್ದಾರೆ. 75 ಶಾಲೆಗಳಲ್ಲಿ ಶಿಕ್ಷಕರೇ ಸ್ವಂತ ಹಣ ಖರ್ಚು ಮಾಡಿ ಬೋಧನಾ-ಕಲಿಕಾ ಉಪಕರಣವನ್ನು ಖರೀದಿಸಿದ್ದಾರೆ. 20 ಶಾಲೆಗಳಲ್ಲಿ ಶಿಕ್ಷಕರು ಈ ಉಪಕರಣಗಳನ್ನ ಬಳಸದೇ ಪಾಠ ಮಾಡುತ್ತಿದ್ದಾರೆ” ಎಂದು ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಕಳವಳ ವ್ಯಕ್ತಪಡಿಸಿದ್ದಾರೆ.

“ಶಿಕ್ಷಣ ಹಕ್ಕು ಕಾಯ್ದೆ ಅನುಷ್ಠಾನ ಮಾಡಲು ಚಳುವಳಿಯನ್ನ ಕಟ್ಟಬೇಕಾಗಿದೆ. ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ನಿಷ್ಕ್ರಿಯಗೊಂಡಿವೆ. ಅವೆಲ್ಲವು ಈಗ ಒಗ್ಗೂಡಿ ಬಲಿಷ್ಠವಾಗಬೇಕು” ಎಂದಿದ್ದಾರೆ.

“2009ರ ಶಿಕ್ಷಣ ಹಕ್ಕು ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಸಂಘಟನೆಗಳೊಂದಿಗೆ ಸಭೆ ಆಯೋಜಿಸಲಾಗುತ್ತದೆ” ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ನಾಸಿರ್ ಅಹ್ಮದ್ ಭರವಸೆ ನೀಡಿದರು.

ವರದಿಯಲ್ಲಿನ ಶಿಫಾರಸುಗಳು:

  1. ಆರ್‌ಟಿಇ ಕಾಯ್ದೆ-2009ಅನ್ನು ಸಮಗ್ರವಾಗಿ ಜಾರಿಗೊಳಿಸಲು ಮತ್ತು ಕಾಯ್ದೆಯ ಎಲ್ಲಾ ಸೆಕ್ಷನ್ ಗಳನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸಲಹಾ ಪರಿಷತ್ತನ್ನು ಸಶಕ್ತಗೊಳಿಸಿ, ಸಮರ್ಪಕವಾಗಿ ಜಾರಿಗೆ ತರಬೇಕು.
  2. 6 ರಿಂದ 14 ವರ್ಷದವರೆಗೆ ಇರುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಹುಟ್ಟಿನಿಂದ 18 ವರ್ಷದವರೆಗೆ ವಿಸ್ತರಿಸಬೇಕು. ಬಾಲ್ಯಪೂರ್ವ ಆರೈಕೆ ಪೌಷ್ಟಿಕಾಂಶ ಮತ್ತು ಸಾಮಾಜೀಕರಣ ಗೊಳಿಸುವ ಪ್ರಕ್ರಿಯೆಯು ಕಾಯ್ದೆಯ ಭಾಗವಾಗಬೇಕು. ಅದಕ್ಕಾಗಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.
  3. ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಮತ್ತು ಬಲಪಡಿಸಲು ವಾರ್ಷಿಕ ಆಯವ್ಯಯದಲ್ಲಿ ಶಿಕ್ಷಣಕ್ಕೆ ಒಟ್ಟು ಅನುದಾನದಲ್ಲಿ ಶೇಕಡ 20ರಷ್ಟು ಅನುದಾನವನ್ನು ಮೀಸಲಿಡಬೇಕು.
  4. ಕಡಿಮೆ ದಾಖಲಾತಿ ಹೊಂದಿರುವ ಅಥವಾ ಏಕೋಪಾಧ್ಯಾಯ ಶಾಲೆಗಳನ್ನು ವಿಲೀನಗೊಳಿಸುವ ಅಥವಾ ಮುಚ್ಚುವ ಪ್ರಸ್ತಾಪವನ್ನು ಕೈಬಿಡಬೇಕು ಹಾಗೂ ಅಂಥ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು.
  5. ಶಿಕ್ಷಕರ ಹುದ್ದೆಗಳು ಒಂದು ನಿರ್ದಿಷ್ಟ ಅವಧಿಗಿಂತ ಹೆಚ್ಚಿನವರೆಗೆ ಖಾಲಿ ಉಳಿಯದ ಆಗೆ ಕಾನೂನು ರೂಪಿಸಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಾತರಿ ಪಡಿಸಬೇಕು.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ, ಸಿಇಆರ್‌ಟಿ ಸಂಸ್ಥೆಯ ನಿರ್ದೇಶಕ ರೋಶನ್ ಮೊಹಿದ್ದೀನ್, ಎಸ್‌ಐಓ ರಾಜ್ಯಾಧ್ಯಕ್ಷ ಜೀಶಾನ್ ಆಖಿಲ್ ಹಾಗೂ ವಿವಿಧ ಸಂಘಟನೆಗಳ ಅಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...