ರಾಯಚೂರು | ಜಿರಳೆ ಬಿದ್ದ ಹಾಲು ಸೇವನೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Date:

ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಜಿರಳೆ ಬಿದ್ದು, ಅದೇ ಹಾಲು ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಜಿರಳೆ ಬಿದ್ದ ಹಾಲನ್ನು ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆ ತಿಳಿದ ತಕ್ಷಣವೇ ತಾಲೂಕ ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಹತ್ತಿರದ ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಪ್ಯಾಕ್‌ ಮಾಡಿದ ಹಾಲಿನ ಪುಡಿಯಲ್ಲಿ ಜಿರಳೆ ಇತ್ತೊ ಅಥವಾ ಹಾಲಿನ ಪಾತ್ರೆಯಲ್ಲಿ ಜಿರಳೆ ಬಂದಿದೆಯೋ ಎಂಬುದು ನಿಖರವಾಗಿ ಗೊತ್ತಿಲ್ಲ. ಶಾಲೆಯ ಆಡಳಿತ ಮಂಡಳಿ ಹಾಗೂ ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ಜರುಗಿದೆ ಎಂದು ಪೋಷಕರು ಅಸಮಾಧಾನ ಹೊರಹಾಕಿದರು. ನಂತರ ಜಿಲ್ಲಾ ಪಂಚಾಯತ ಸಿಇಒ ರಾಹುಲ್ ತುಕಾರಾಂ ಪಾಂಡೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪರಿಶೀಲಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...