ತುಮಕೂರು | ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ ಏಳಕ್ಕೆ ಏರಿಕೆ

Date:

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯರಾಮಪ್ಪ (67) ಎಂಬವರು ಗುರುವಾರ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಕಲುಷಿತ ನೀರು ಕುಡಿದು ವಾಂತಿ ಭೇದಿಯಿಂದ 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯರಾಮಪ್ಪ ಮೊದಲಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಗಂಭೀರ ಸಮಸ್ಯೆ ಕಾಣಿಸಿಕೊಂಡ ನಂತರ ಜೂನ್ 13 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ʼಏಳು ಮಂದಿ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆʼ ಎಂದು ಡಿಎಚ್ ಒ ರಂಗಸ್ವಾಮಿ ಮಾಹಿತಿ ನೀಡಿರುವುದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...