ಕಲಬುರಗಿ | ಮುಂದುವರೆದ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಅಹೋರಾತ್ರಿ ಧರಣಿ

Date:

ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು 12 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಮುಂದುವರೆದಿದೆ.

ʼಕಾಯಂ ನೌಕರರ ಸ್ಥಳದಲ್ಲಿ ಮಾತ್ರ ಕಾಯಂ ನೌಕರರ ವರ್ಗಾವಣೆ ಮಾಡಬೇಕು. ವಾರಕ್ಕೊಂದು ರಜೆ ಕಡ್ಡಾಯವಾಗಿ ಕೊಡಬೇಕು. ಕಾಯಂ ನೌಕರರು 15 ದಿನಕ್ಕಿಂತ ಹೆಚ್ಚು ರಜೆ ಹಾಕಿದಾಗ ಆ ಸ್ಥಳದಲ್ಲಿ ತಾತ್ಕಾಲಿಕವಾಗಿ ಹೊರಗುತ್ತಿಗೆ ನೌಕರರನ್ನು ನೇಮಿಸಬೇಕು. ಕನಿಷ್ಠ ವೇತನ ₹31,000 ನಿಗದಿಪಡಿಸಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. 10 ವರ್ಷ ಮೆಲ್ಪಟ್ಟು ಸೇವೆ ಸಲ್ಲಿಸಿದ ನೌಕರರಿಗೆ ಕ್ಷೇಮಾಭಿವೃದ್ಧಿ ಯೋಜನೆಯಲ್ಲಿ ನೇಮಕಾತಿ ಮಾಡಬೇಕು’ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ʼಬೀದರ ಜಿಲ್ಲೆಯಲ್ಲಿ ಸೊಸೈಟಿಯ ಮಾದರಿಯಲ್ಲಿ ವೇತನ ನೀಡುವಂತೆ ನೌಕರರು ಪ್ರಬಲವಾದ ಬೇಡಿಕೆಗಳನ್ನು ಸರ್ಕಾರದ ಮುಂದಿರಿಸಿದರು. ನೌಕರರಿಗೆ ಪಾವತಿಸಬೇಕಾದ ಬಾಕಿ ವೇತನವನ್ನು ಕೂಡಲೇ ಪಾವತಿ ಮಾಡಬೇಕು. ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಾಸ ಪಡೆಯಬೇಕು. ಹಿಂದಿನಂತೆ 100 ವಿದ್ಯಾರ್ಥಿಗಳಿಗೆ 5 ಜನ ಅಡಿಗೆ ಸಿಬ್ಬಂದಿ ಇರಬೇಕು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಗಳಿಗೆ ರಾತ್ರಿ ಕಾವಲುಗಾರರನ್ನು ನೇಮಿಸಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ಮಾತನಾಡಿ, ʼ ಹಾಸ್ಟೆಲ್‌ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವೆ ಎಂದಿದ್ದರು. ಆದರೆ ಇಲ್ಲಿಯವರಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವಾರದದೊಳಗೆ ಬೇಡಿಕೆ ಈಡೇರಿಸದಿದ್ದರೆ ಫೆ.5 ರಿಂದ ಸಂಘದ ರಾಜ್ಯಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ನೇತ್ರತ್ವದಲ್ಲಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ ಲೋಕಸಭಾ ಕ್ಷೇತ್ರಕ್ಕೆ 50,380 ಮನೆ ಮಂಜೂರು : ಸಂಸದ ಸಾಗರ್‌ ಖಂಡ್ರೆ

ಸಂಘದ ಪ್ರಮುಖರಾದ ಪರಶುರಾಮ ಹಡಲಗಿ, ನಾಗರತ್ನ ಮದನಕರ್‌, ಕಾಶಿನಾಥ ಬಂಡಿ, ಮೇಘರಾಜ ಕಠಾರೆ, ಜ್ಯೋತಿ ದೊಡ್ಡಮನಿ, ಅಲ್ಲಾ ಪಟೇಲ್, ಸಂಜುಕುಮಾರ ಮೇತ್ರಿ, ಕಲ್ಯಾಣಿ ಎನ್.ಪೂಜಾರಿ, ರೇಣುಕಾ ಸಂಗೋಗಿ ಹಾಗೂ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...