ಕಲಬುರಗಿ | ಗುತ್ತಿಗೆದಾರ ಆತ್ಮಹತ್ಯೆ : ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್‌ ವಿರುದ್ಧ ಪ್ರಕರಣ ದಾಖಲು

Date:

ಬೀದರ್‌ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮರಣ ಪತ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಶುಕ್ರವಾರ ರಾತ್ರಿ ನೀಡಿರುವ ದೂರಿನ ಆಧಾರದ ಮೇಲೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರ್ ಸೇರಿ ಇನ್ನಿತರರ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲಾಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ಮೂವರು ಬಿಜೆಪಿ ನಾಯರು ಬಿಜೆಪಿ ನಾಯಕರನ್ನು ಹತ್ಯೆ ಮಾಡುವುದಾಗಿ ಸಂಚು ರೂಪಿಸಿದ್ದಾರೆಂದು ಆರೋಪಿಸಿ, ಬಿಜೆಪಿ ಮುಖಂಡರು ಶುಕ್ರವಾರ ರಾತ್ರಿ ಕಮಿಷನರ್ ಅವರಿಗೆ ದೂರು ಕೊಟ್ಟಿದ್ದರು. ಇದಕ್ಕೂ ಮುಂಚೆ ಶುಕ್ರವಾರ ರಾತ್ರಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ಕೊಡಲು ಹೋಗಿದ್ದ ಬಿಜೆಪಿ ನಾಯಕರ ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿತ್ತು.

ಶನಿವಾರ ಬೆಳಗ್ಗಿನವರೆಗೆ ಕೊಲೆಗೆ ಸಂಚು ಹೂಡಿದ್ದ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸದೆ ಇರುವುದರಿಂದ ಬಿಜೆಪಿ ಮುಖಂಡರು ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಆರೋಪಿಗಳ‌ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಕೋರ್ಟ್ ಗಮನಕ್ಕೆ ತಂದ ಪೊಲೀಸರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ್ ಸೇರಿದಂತೆ 6 ಜನರ ವಿರುದ್ಧ ಬಿಎನ್ಎಸ್ ಸೆಕ್ಷನ್ 351 (2) ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್ : ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ

ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್ ಅವರ ದೂರಿನನ್ವಯ, ಮಾಜಿ ಕಾರ್ಪೊರೇಟರ್ ರಾಜು ಕಪನೂರ್, ನಂದಕುಮಾರ್ ನಾಗಭುಜಂಗೆ, ಪ್ರತಾಪ್ ಧೀರ ಪಾಟೀಲ್, ಮನೋಜ್ ಶೇಜೇವಾಲ, ಗೋರಖನಾಥ್ ಸಜ್ಜನ್, ರಾಮನಗೌಡ ಪಾಟೀಲ್ ಅವರ ವಿರುದ್ಧ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...