ತಂಪಾದ ಬೆಂಗಳೂರು | 10 ವರ್ಷದ ಬಳಿಕ ಅತ್ಯಂತ ಕಡಿಮೆ ತಾಪಮಾನ ದಾಖಲು

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನವಾಗಿದೆ. ನಗರದಲ್ಲಿ ಸಂಜೆಯಾದರೆ, ಚಳಿಯ ವಾತಾವರಣ ಉಂಟಾಗುತ್ತಿದೆ. ಇದು ಚಳಿಗಾಲದ ಆರಂಭದ ಮುನ್ಸೂಚನೆಯನ್ನು ನೀಡುತ್ತಿದೆ.

ಕಳೆದ 2013ರಲ್ಲಿ ದಾಖಲಾಗಿದ್ದ ಚಳಿಯ ವಾತಾವರಣದ ಮಾದರಿಯಲ್ಲಿಯೇ ವರ್ಷವೂ ಹೆಚ್ಚಿನ ಚಳಿಯ ವಾತಾವರಣ ಅಕ್ಟೋಬರ್ನಲ್ಲಿಯೇ ಶುರುವಾಗಿದೆ. ಆದರೆ, ರಾಜ್ಯದಲ್ಲಿ ಈ ವರ್ಷ ವಾಡಿಕೆಯಂತೆ ಮಳೆ ಬಿದ್ದಿಲ್ಲ. ರಾಜ್ಯದ ಹಲವೆಡೆ ಮಳೆ ಕೊರತೆ ಎದುರಾಗಿದೆ. ಜಲಾಶಯಗಳು ನೀರಿನಿಂದ ಭರ್ತಿಯಾಗಿಲ್ಲ. ಈ ವರ್ಷ ಭೀಕರ ಬರಗಾಲ ಎದುರಾಗಿದೆ. ರಾಜ್ಯ ಸರ್ಕಾರ 216 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ಇದೀಗ, ಮುಂಗಾರು ಮಳೆಯ ಅವಧಿ ಮುಗಿದು ಹಿಂಗಾರು ಮಳೆ ಆರಂಭವಾಗಿದೆ. ಮಳೆ ಬೀಳುವ ಸಮಯದಲ್ಲಿಯೇ ಚಳಿ ಆರಂಭವಾಗಿದೆ.

ಈಶಾನ್ಯ ಗಾಳಿ ಆರಂಭ ಆಗಿರುವುದನ್ನು ಹವಾಮಾನ ಇಲಾಖೆ ಅಧಿಕೃತಗೊಳಿಸದಿದ್ದರೂ, ಬೆಂಗಳೂರಿನಲ್ಲಿ ಚಳಿ ವಾತಾವರಣ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2014 ಅಕ್ಟೋಬರ್ 31ರಂದು ತಾಪಮಾನವು 17.5 ಡಿಗ್ರಿ ಸೆಲ್ಸಿಯಸ್​​ಗೆ ಇಳಿದಿತ್ತು. ಬಳಿಕ, 2023 ಅಕ್ಟೋಬರ್​ 24 ರಂದು 17.1 ಡಿಗ್ರಿ ಸೆಲ್ಸಿಯಸ್ತಾಪಮಾನ ದಾಖಲಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆಯ ತಿಳಿಸಿದೆ.

“ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್​​, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 17 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಿದೆ” ಎಂದು ಮಾಹಿತಿ ನೀಡಿದೆ.

ಬಾರಿ ಹೆಚ್ಚು ಮಳೆಯಾಗದೇ ಇದ್ದರೂ ಬೆಂಗಳೂರಿನಲ್ಲಿ ಮಂಗಳವಾರದಂದು ಅಕ್ಟೋಬರ್ನಲ್ಲಿ ಅತಿ ಹೆಚ್ಚು ಚಳಿಯನ್ನು ಕಂಡಿದೆ. ಇನ್ನು ಅಕ್ಟೋಬರ್ 18 ಅನ್ನು ಹೊರತುಪಡಿಸಿದರೆ, ಅಕ್ಟೋಬರ್ನಲ್ಲಿ ಉಳಿದ ದಿನಗಳಲ್ಲಿ ಬೆಳಗ್ಗೆ ತಾಪಮಾನ 18.6 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕ್ರಮೇಣ 19 ಮತ್ತು 21 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ಇರುತ್ತದೆ. ಹೀಗಾಗಿ, ನಗರದಲ್ಲಿ ಮಂಗಳವಾರ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿರುವುದು ಒಂದು ರೀತಿಯಲ್ಲಿ ಆಶ್ಚರ್ಯ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲ್ಟಿಪ್ಲೆಕ್ಸ್ ಗೋಲ್ಡ್‌ ಕಾರ್ಡ್‌ ಆಸೆಗೆ ಬಿದ್ದು ₹1 ಲಕ್ಷ ಕಳೆದುಕೊಂಡ ವ್ಯಕ್ತಿ

ಕಡಿಮೆ ತಾಪಮಾನ ಚಳಿಯನ್ನು ಸೂಚಿಸಿದರೆ, ಗರಿಷ್ಠ ತಾಪಮಾನ ಅತ್ಯಂತ ಬಿಸಿಯನ್ನು ಸೂಚಿಸುತ್ತದೆ.

“ಅಕ್ಟೋಬರ್ ತಿಂಗಳಲ್ಲಿ ಇದು ಕನಿಷ್ಠ ತಾಪಮಾನವಾಗಿದೆ. ನವೆಂಬರ್ ಕೊನೆಯ ವಾರದಿಂದ ನಗರದಲ್ಲಿ ಚಳಿಗಾಲದ ಪರಿಣಾಮವ ಬೀರುವ ಸಾಧ್ಯತೆಯಿದೆ. ಎಲ್ ನಿನೋ ಪ್ರಭಾವದಿಂದಾಗಿ ಕಳೆದ ವರ್ಷದಂತೆ ಕಠಿಣ ಚಳಿಗಾಲದ ಸಂಭವನೀಯತೆ ವರ್ಷ ತುಂಬಾ ಕಡಿಮೆಯಾಗಿದೆ. ನವೆಂಬರ್ನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ತಜ್ಞ ಎ ಪ್ರಸಾದ್ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...