ಚಿತ್ರದುರ್ಗ | ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ : ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ

Date:

ಗ್ರಾಮ ಪಂಚಾಯಿತಿ ಅಧಿಕಾರಿಗಳು ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ತಾಲ್ಲೂಕಿನಲ್ಲಿ ಮಂಗಳವಾರ ನಡೆದಿದೆ.

ಚಳ್ಳಕೆರೆ ತಾಲ್ಲೂಕಿನ ಕೆಆರ್‌ಎಸ್ ಪಕ್ಷದ ಕಾರ್ಯಕರ್ತ ಮಹೇಶ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ.

ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಪಂಚಾಯಿತಿಯ ಇ-ಸ್ವತ್ತಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರೊಬ್ಬರಿಂದ ಗ್ರಾಮ ಪಂಚಾಯತಿನಲ್ಲಿ ಕೆಲಸ ನಿರ್ವಹಿಸುವ ನೌಕರರೊಬ್ಬರ ಮೂಲಕ ಪಿಡಿಒ ಅವರು 5 ಸಾವಿರ ಫೋನ್ ಪೇ ಮಾಡಿಸಿಕೊಂಡು ಲಂಚ ಸ್ವೀಕರಿಸಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಹಲವು ವರ್ಷಗಳಿಂದ ಚಳ್ಳಕೆರೆ ನಗರಕ್ಕೆ ಹೊಂದಿಕೊಂಡಿರುವ ನಗರಂಗೆರೆ ಪಂಚಾಯಿತಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದೀಗ ರಾಜಾರೋಷವಾಗಿ ಆನ್ಲೈನ್ ಮೂಲಕ ಲಂಚ ಸ್ವೀಕರಿಸುವ ಪರಿಸ್ಥಿತಿಗೆ ಬದಲಾಗಿದೆಯೇ? ಎಂದು ಕೆಆರ್‌ಎಸ್ ಪಕ್ಷದ ಮಹೇಶ ಎಂಬುವವರು ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕುರಿತು ಪ್ರಶ್ನೆ ಮಾಡಿದಕ್ಕೆ ಮಂಗಳವಾರ ಚಳ್ಳಕೆರೆಯ ತಾಲೂಕು ಕಚೇರಿ ಮುಂಭಾಗದಲ್ಲಿ ಮಹೇಶ ಅವರು ಒಬ್ಬರೇ ತೆರಳುತ್ತಿದ್ದಾಗ ಐದಾರು ಜನ ಬಂದು ʼಕೇವಲ ನಗರಂಗೆರೆ ನೌಕರರು, ಪಿಡಿಓ ಮಾತ್ರವೇ ಲಂಚ ಸ್ವೀಕರಿಸುತ್ತಿದ್ದಾರೆಯೇ, ರಾಜ್ಯದ ತುಂಬಾ ಇದು ಹರಡಿಲ್ಲವೇ, ಇದನ್ನು ಪ್ರಶ್ನಿಸಿದಕ್ಕೆ ನೀನ್ಯಾರುʼ ಎಂದು ಬೆದರಿಸಿ ಹಲ್ಲೆ ನಡೆಸಿದ್ದಾರೆʼ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಿಂದ ಕೇವಲ 10 ಮೀಟರ್ ಅಂತರದಲ್ಲಿ ಘಟನೆ ನಡೆದರೂ ಪೊಲೀಸರು ಸ್ಥಳಕ್ಕೆ ಆಗಮಿಸಲಿಲ್ಲ. ಘಟನೆ ಕುರಿತು ಯಾವುದೇ ಮಾಹಿತಿ ಕಲೆ ಹಾಕಿಲ್ಲ ಎಂದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಹಲ್ಲೆಗೊಳಗಾದ ಯುವಕ ಮಹೇಶ್ ಮಾತನಾಡಿ, ʼಗ್ರಾ.ಪಂ. ನೌಕರರು ಫೋನ್ ಪೇ ಮೂಲಕ ಲಂಚದ ಹಣ ಪಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದ್ದಕ್ಕೆ ಪಿಡಿಒ ಕಡೆಯವರು ಬಂದು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನಾನೇ 112ಕ್ಕೆ ಕರೆ ಮಾಡಿದ ಬಳಿಕ ಪೊಲೀಸರನ್ನು ಬಂದಿದ್ದರು. ಹಲ್ಲೆಯಿಂದ ಕಣ್ಣು, ಹೊಟ್ಟೆ ಮತ್ತು ಹೊಟ್ಟೆಯ ಕೆಳಭಾಗಕ್ಕೆ ಬಲವಾದ ಪೆಟ್ಟಾಗಿದೆ. ಘಟನೆ ನಡೆದು ಏಳು ಗಂಟೆ ಕಳೆದರೂ ಪೊಲೀಸರು ಯಾವುದೇ ಮಾಹಿತಿ ಪಡೆದಿಲ್ಲ, ಹೇಳಿಕೆ ದಾಖಲಿಸಿಕೊಂಡಿಲ್ಲ” ಎಂದು ಪ್ರತಿಕ್ರಿಯಿಸಿದರು.‌

ನಗರಂಗೆರೆ ಪಂಚಾಯಿತಿಯಲ್ಲಿ ಎಂಟತ್ತು ವರ್ಷಗಳಿಂದ ಒಬ್ಬರೇ ಪಿಡಿಓ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಒಂದೇ ಕಡೆ ನಿಯುಕ್ತಿಗೊಳ್ಳಲು ಕಾರಣವೇನು? ಹಲ್ಲೆಗೊಳಗಾದ ಮಹೇಶನನ್ನು ಅಧಿಕಾರಿಗಳೇ ಸುಪಾರಿ ಕೊಟ್ಟು ಹಲ್ಲೆ ನಡೆಸಲು ತಿಳಿಸಿದ್ದಾರೆ. ಈ ಘಟನೆ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಕೈವಾಡದಿಂದ ನಡೆದಿದೆ. ಭ್ರಷ್ಟಾಚಾರ ಪ್ರಶ್ನಿಸಿದಕ್ಕೆ ಈ ಹಿಂದೆ ಕೂಡ ಮಹೇಶ ಅವರ ಮೇಲೆ ಎರಡು ಬಾರಿ ಹಲ್ಲೆ ನಡೆದಿತ್ತುʼ ಎಂದು ಮಹೇಶ ಸಂಬಂಧಿಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದಿರಾ? ದರ್ಶನ್‌ ಗನ್‌ ಪರವಾನಗಿ ರದ್ದುಗೊಳಿಸಿದ ಪೊಲೀಸರು

ಮಾರಣಾಂತಿಕ ಹಲ್ಲೆಗೊಳಗಾದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತ ಮಹೇಶ್ ನಗರಂಗೆರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚಿತ್ರದುರ್ಗ ನಗರ ಆಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...