ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್‍ಓ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಎಚ್. ಮಾತನಾಡಿ, “ನೀಟ್ ಪರೀಕ್ಷೆ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ. ಮಾತನಾಡಿ, “ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ, ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮಕ್ಕೆ ಒಳಗಾಗುತ್ತಿದೆ, ಇದರಿಂದ ಬಡ ವಿದ್ಯಾರ್ಥಿಗಳು ಬಲಿಪಶುಗಳಾಗಿದ್ದಾರೆ. ಈ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಿ ಪ್ರಕರಣದಲ್ಲಿ ಭಾಗಿಯಾದ ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರನೇ ಬಾರಿಗೆ ಪ್ರಧಾನಿಯಾದ ಮೋದಿ, ಹೊಸ ಮನುಷ್ಯರಾಗುವರೇ?
ಪ್ರತಿಭಟನೆಯಲ್ಲಿ ಎಐಡಿಎಸ್‍ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷೆ ಪ್ರೀತಿ ದೊಡ್ಡಮನಿ, ನಾಗರಾಜ ರಾವುರ, ಸದಸ್ಯರಾದ ಸಿದ್ಧಾರ್ಥ ತಿಪ್ಪನೋರ, ಯುವರಾಜ ರಾಠೋಡ್, ಪೂಜಾ ಹಾಗೂ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





