ಚಾಮರಾಜನಗರ | ಬಂಡೀಪುರ ರೆಸಾರ್ಟ್‌ನಲ್ಲಿ ದಂಪತಿಗಳ ಅಪಹರಣ

Date:

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ರೆಸಾರ್ಟ್‌ಗೆ ಸೋಮವಾರ ಮಧ್ನಾಹ್ನ ಅಪಹರಣವಾಗಿದೆ. ನಿಶಾಂತ್ ಮತ್ತು ಚಂದನ ದಂಪತಿಗಳು ಮತ್ತು ಅವರ ಮಗುವನ್ನು ಅಪಹರಿಸಲಾಗಿದೆ ಎಂದು ತಿಳಿದುಬಂದಿದೆ.

ಭಾನುವಾರ ದಂಪತಿಗಳು ತಮ್ಮ ಮಗುವಿನೊಂದಿಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬಂದಿದ್ದರು. ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದರು. ಮೂವರೂ ರೆಸಾರ್ಟ್‌ನಿಂದ ಹೊರ ಬಂದಾಗ ಎರಡು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ಬಗ್ಗೆ ರೆಸಾರ್ಟ್‌ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಡಿವೈಎಸ್‌ಪಿ ಲಕ್ಷ್ಮಯ್ಯ ಮತ್ತು ಪೊಲೀಸರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದೆ.

“ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪಹರಣವಾಗಿದೆ. ಎರಡು ವಾಹನಗಳಲ್ಲಿ ಬಂದ ದುಷ್ಕರ್ಮಿಗಳು ದಂಪತಿ ಮತ್ತು ಅವರ ಮಗುವನ್ನು ಅಪರಿಸಿದ್ದಾರೆ ಎಂದು ರೆಸಾರ್ಟ್‌ ಮಾಲೀಕರು ತಿಳಿಸಿದ್ದಾರೆ. ಆದರೆ, ಅವರನ್ನು ಕರೆದೊಯ್ಯುವಾಗ ದಂಪತಿಗಳು ಯಾವುದೇ ಪ್ರತಿರೋಧ ವ್ಯಕ್ತಪಡಿಸಿಲ್ಲ ಎಂಬ ಅಂಶ ತಿಳಿದುಬಂದಿದೆ. ಹೀಗಾಗಿ, ಅವರ ಅಪಹರಣವಾಗಿದೆಯೋ ಅಥವಾ ಅವರ ಸಂಬಂಧಿಕರು ಕರೆದುಕೊಂಡು ಹೋಗಿದ್ದಾರೆಯೋ ಎಂಬುದು ಖಚಿತವಾಗಿಲ್ಲ. ಅವರನ್ನು ಕರೆದೊಯ್ದವರ ಬಗ್ಗೆ ರೆಸಾರ್ಟ್‌ನವರಿಗೂ ಮಾಹಿತಿ ಇಲ್ಲ” ಎಂದು ಎಸ್‌ಪಿ ಬಿ.ಟಿ ಕವಿತಾ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...