ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲ, ಮುಖ್ಯಮಂತ್ರಿಗೆ ಮನವಿ

Date:

  • ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ನೇತೃತ್ವದಲ್ಲಿ ನಿಯೋಗ ಭೇಟಿ
  • ಮರು ತನಿಖೆಗೆ ಒಳಪಡಿಸಲು ಸರ್ಕಾರಕ್ಕೆ ಅವಕಾಶವಿಲ್ಲ ಎಂದ ಸಿದ್ದರಾಮಯ್ಯ

ರಾಜ್ಯದಲ್ಲಿ ತೀವ್ರ ಚರ್ಚೆಗೆ ಒಳಗಾಗಿರುವ ಸೌಜನ್ಯ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆ ಆಗಬೇಕು ಎಂದು ಪೋಷಕರಿಂದ ಹಿಡಿದು ಹಲವಾರು ಸಂಘಟನೆಗಳು ಆಗ್ರಹಿಸಿವೆ. ಈ ಒತ್ತಾಯದ ಬೆನ್ನಲ್ಲೇ ಬಿಜೆಪಿ ನಿಯೋಗ ಕೂಡ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್, ಮಾಜಿ ಸಚಿವ ವಿ.ಸುನಿಲ್‌ಕುಮಾರ್, ಶಾಸಕರಾದ ಹರೀಶ್ ಪೂಂಜ, ಭರತ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ವೇದವ್ಯಾಸ ಕಾಮತ್‌, ಭಾಗೀರಥಿ ಮುರುಳ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಅಶ್ವತ್ಥನಾರಾಯಣ ಅವರನ್ನು ಒಳಗೊಂಡ ನಿಯೋಗ ಈ ಮನವಿ ಸಲ್ಲಿಸಿದೆ.

ಸೌಜನ್ಯ ಪ್ರಕರಣದ ಬಗ್ಗೆ ಮರುತನಿಖೆಗೆ ಅವಕಾಶವಿದ್ದರೆ ಪರಿಶೀಲನೆ ನಡೆಸುತ್ತೇನೆ ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಭೇಟಿ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸೌಜನ್ಯ ಪ್ರಕರಣ 1

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರ ಘೋಷಣೆಯಲ್ಲ, ಪೀಡಿತರಿಗೆ ಪರಿಹಾರ ಮುಟ್ಟಿಸುವುದು ಮುಖ್ಯ

ಈ ಹಿನ್ನೆಲೆಯಲ್ಲಿ ಬಿಜೆಪಿ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವೇಳೆ ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, “ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರ್ಕಾರಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ತಿಳಿಸಿದ್ದೇನೆ. ಕಾನೂನು ಸಲಹೆ ಪಡೆದು ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ” ಎಂದಿದ್ದಾರೆ.

ಕೊಲೆಯಾದ ಸೌಜನ್ಯ ಕುಟುಂಬಕ್ಕೆ ಇನ್ನೂ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಹೋರಾಟ ಸಮಿತಿ ಮುಖಂಡರು ಕೂಡ ನ್ಯಾಯ ಕೋರಿ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸೌಜನ್ಯ ಕುಟುಂಬಸ್ಥರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮರು ತನಿಖೆಗೆ ಆಗ್ರಹಿಸಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...