ಸೌಜನ್ಯ ಕೊಲೆ; ಯುಟ್ಯೂಬರ್ ಸಮೀರ್ ಪ್ರಕರಣದ ವಿಚಾರಣೆ ಧಾರವಾಡ ಪೀಠಕ್ಕೆ ವರ್ಗಾವಣೆ

Date:

ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ಬಳ್ಳಾರಿಯ ಕೌಲ್‌ ಬಜಾರ್ ಠಾಣೆ ಪೊಲೀಸರು ದಾಖಲಿಸಿರುವ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು ಪೀಠವು ಧಾರವಾಡ ಪೀಠಕ್ಕೆ ವರ್ಗಾಯಿಸಿದೆ.

ಬೆಂಗಳೂರಿನ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರ ಸಮೀರ್‌ ಪರ ವಕೀಲರು “ಬಳ್ಳಾರಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅರ್ಜಿಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ಎಫ್‌ಐಆರ್‌ಗೆ ತಡೆ ನೀಡಿ ಮಧ್ಯಂತರ ರಕ್ಷಣೆ ಒದಗಿಸಿರುವುದನ್ನು ಮುಂದುವರಿಸಬೇಕು” ಎಂದು ಕೊರಿದ್ದಾರೆ.

ಇದಕ್ಕೆ ಆಕ್ಷೇಪಿಸಿದ ಸರ್ಕಾರದ ವಕೀಲರು “ಬೇರೆ ಪೀಠಕ್ಕೆ ಅರ್ಜಿ ವರ್ಗಾವಣೆ ಮಾಡಲಾಗದು. ಧಾರವಾಡ ಪೀಠದಲ್ಲಿ ಅರ್ಜಿದಾರರು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಮಧ್ಯಂತರ ಪರಿಹಾರ ಮುಂದುವರಿಸಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ ಪೀಠವು “ಹೈಕೋರ್ಟ್‌ ಎಫ್‌ಐಆರ್‌ಗೆ ತಡೆ ನೀಡಿದೆ. ಸರ್ಕಾರವು ಮಧ್ಯಂತರ ಆದೇಶ ತೆರವಿಗೆ ಅರ್ಜಿ ಸಲ್ಲಿಸಿದೆ. ವ್ಯಾಪ್ತಿಯ ವಿಚಾರ ಇರುವುದರಿಂದ ಈ ಅರ್ಜಿಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸಲಾಗುತ್ತಿದೆ. ಹಲವು ಪ್ರಕರಣಗಳನ್ನು ಹಾಗೆ ವರ್ಗಾಯಿಸಲಾಗುತ್ತದೆ. ಹೀಗಾಗಿ, ಅರ್ಜಿದಾರರು ಹೊಸ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ” ಎಂದು ಹೇಳಿ, ಸಮೀರ್‌ ಅರ್ಜಿಯನ್ನು ಧಾರವಾಡ ಪೀಠಕ್ಕೆ ವರ್ಗಾಯಿಸಿ, ವಿಚಾರಣೆ ಮುಂದೂಡಿತು.

ಇದನ್ನೂ ಓದಿ ಧಾರವಾಡ | ಪತ್ನಿ ತೀರಿಕೊಂಡ ಹಿನ್ನೆಲೆ; ಮನನೊಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಪ್ರಕರಣ ಹಿನ್ನೆಲೆ:
ಯೂಟ್ಯೂಬರ್‌ ಸಮೀರ್‌ ‘ಊರಿಗೆ ದೊಡ್ಡವರೇ ಕೊಲೆ ಮಾಡಿದವರಾ?ʼ ಎಂಬ ತಲೆಬರಹದ ವಿಡಿಯೋವನ್ನು ‘ದೂತ: ಸಮೀರ್‌ ಎಂ ಡಿ (Dhootha : Sameer MD)’ ಎಂಬ ತನ್ನ ಯೂಟ್ಯೂಬ್‌ ಚಾನಲ್‌ನಲ್ಲಿ ಅಪ್‌ಲೋಡ್‌ ಮಾಡಿದ್ದರು. ಸದರಿ ವಿಡಿಯೊವನ್ನು ಕೋಟ್ಯಂತರ ಜನರು ವೀಕ್ಷಣೆ ಮಾಡಿದ್ದರು. ಇದನ್ನು ಆಧರಿಸಿ, ಬಳ್ಳಾರಿ ಪೊಲೀಸರು ಸ್ವಯಂಪ್ರೇರಿತವಾಗಿ ಸಮೀರ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದಕ್ಕೂ ಮುನ್ನ, ಸಮೀರ್‌ಗೆ ಪೊಲೀಸ್‌ ನೋಟಿಸ್‌ ನೀಡಲಾಗಿತ್ತು. ಇದನ್ನೂ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ವೇಳೆ ತನಿಖಾಧಿಕಾರಿಯ ನಡೆಗೆ ಹೈಕೋರ್ಟ್‌ ಕಿಡಿಕಾರಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...