ಬೀದರ್‌ | ರಾಜ್ಯಪಾಲರ ಹುದ್ದೆ ರದ್ದತಿಗೆ ಸಿಪಿಐ ಆಗ್ರಹ

Date:

ರಾಜ್ಯದ ಕಾಂಗ್ರೆಸ್‌ ನೇತ್ರತ್ವದ ಸರ್ಕಾರವನ್ನು ರಾಜ್ಯಪಾಲರು ಅಸ್ಥಿರಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತ್‌ ಕಮ್ಯುನಿಷ್ಟ ಪಕ್ಷ (ಸಿಪಿಐ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಮುಖಾಂತರ ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ರಾಜ್ಯಪಾಲರು ಕೇಂದ್ರ ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ರಾಜ್ಯದ ಬಹುಮತ ಸರ್ಕಾರವನ್ನು ಕಿತ್ತೊಗೆಯಲು ಬಿಜೆಪಿ-ಜೆಡಿಎಸ್‌ ಪಕ್ಷಗಳು ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯʼ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ಹಗರಣ ನಡೆದಿದೆ ಎನ್ನಲಾದ ಮುಡಾ ನಿವೇಶನ ಹಂಚಿಕೆ ಹಾಗೂ ವಾಲ್ಮಿಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣ ಸೇರಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ʼಈಗಾಗಲೇ ಕೆಲವು ರಾಜ್ಯಗಳ ಆಡಳಿತ ನಡೆಸುತ್ತಿರುವ ವಿರೋಧ ಪಕ್ಷಗಳ ಸರ್ಕಾರಗಳನ್ನು ರಾಜ್ಯಪಾಲರ ಮುಖಾಂತರ ಬುಡಮೇಲು ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ. ಹೀಗಾಗಿ ರಾಜ್ಯಪಾಲರ ಹುದ್ದೆ ರದ್ದುಪಡಿಸುವುದು ಅವಶ್ಯಕವಾಗಿದೆʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ : ರಾಜ್ಯಪಾಲರ ವಾಪಸ್‌ಗೆ ಒತ್ತಾಯ

ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಮುಖಂಡ ಬಾಬುರಾವ ಹೊನ್ನಾ, ಜಿಲ್ಲಾ ಕಾರ್ಯದರ್ಶಿ ಎಂ.ಡಿ.ಅಲಿ ಅಹ್ಮದ್‌ ಖಾನ್‌, ಎಂ.ಡಿ.ಶಫಾಯತ್‌ ಅಲಿ, ಎಐಕೆಎಸ್‌ ಜಿಲ್ಲಾಧ್ಯಕ್ಷ ನಜೀರ್‌ ಅಹ್ಮದ್‌ ಚೊಂಡಿ ಸೇರಿದಂತೆ ಪ್ರಮುಖರಾದ ಪ್ರಭು ಹೊಚಕನಳ್ಳಿ, ಶಿವರಾಜ ಕಮಠಾಣಾ, ಖಮರ್‌ ಪಟೇಲ್‌ , ಚಾಂದೋಬಾ ಭೋಸ್ಲೆ, ಪ್ರಭು ತಗಣಿಕರ್‌ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...