ಮನಪಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ; ಸಿಪಿಐಎಂ ಕಾರ್ಯಕರ್ತರ ಬಂಧನ, ಬಿಡುಗಡೆ

Date:

ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ಆಯುಕ್ತರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದ ಸಿಪಿಐಎಂ ಕಾರ್ಯಕರ್ತರ ಬಂಧನವಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಮಹಾನಗರ ಪಾಲಿಕೆಯ ಭ್ರಷ್ಟ, ಲೂಟಿಕೋರ ಆಯುಕ್ತ ಆನಂದ್ ಸಿ ಎಲ್ ಅವರನ್ನು ಕೂಡಲೇ ವಜಾಗೊಳಿಸಬೇಕು. ಆಯುಕ್ತರು ತೊಲಗಲೇಬೇಕೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಬಿ ಕೆ ಇಮ್ತಿಯಾಜ್ ಮಾತನಾಡಿ, “ಪಾಲಿಕೆ ಆಯುಕ್ತ ಸ್ಮಾರ್ಟ್ ಸಿಟಿ ಸಹಿತ ಇತರೆ ಯೋಜನೆಯ ನೂರಾರು ಕೋಟಿ ರೂಪಾಯಿ ಅನುದಾನವನ್ನು ನಗರದ ಅಭಿವೃದ್ಧಿಗೆ ಬಳಸುವ ಬದಲಾಗಿ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ. ಈ ಹಿಂದೆಯೇ ಮಂಗಳೂರಿನಿಂದ ವರ್ಗಾವಣೆಗೊಂಡಿದ್ದ ಪಾಲಿಕೆ ಆಯುಕ್ತರು ಎಷ್ಟು ಕೋಟಿ ದುಡ್ಡು ಕೊಟ್ಟು ಆ ವರ್ಗಾವಣೆ ರದ್ದುಗೊಳಿಸಿದ್ದಾರೆಂದು ನಗರದ ಜನರಿಗೆ ತಿಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಾಯುಕ್ತ ಬಲೆಗೆ ಬಿದ್ದಿರುವ ಆಯುಕ್ತರನ್ನು ಬಂಧಿಸದೇ ಇರಲು ಇಲ್ಲಿನ‌ ಪಾಲಿಕೆ ಆಡಳಿತ, ಬಿಜೆಪಿ ಮತ್ತು ಶಾಸಕ ವೇದವ್ಯಾಸ ಕಾಮತ್‌ ಅವರು ಪರೋಕ್ಷವಾಗಿ ಶಾಮೀಲಾಗಿದ್ದಾರೆ. ರಾಜ್ಯ ಸರ್ಕಾರವೂ ಈ ಆಯುಕ್ತರ ಪರವಾದ ಧೋರಣೆಗಳನ್ನು ಹೊಂದಿದೆ. ಜನರ ತೆರಿಗೆ ಹಣವನ್ನು ಲೂಟಿಗೈಯ್ಯಲು ಬಂದಿರುವ ಇಂತಹ ಭ್ರಷ್ಟ ಆಯುಕ್ತರು ಮಂಗಳೂರಿಗೆ ಬೇಕಾಗಿಲ್ಲ. ಕೂಡಲೇ‌ ಅವರನ್ನು ವಜಾಗೊಳಿಸಿ” ಎಂದು ಕಟುವಾಗಿ ಟೀಕಿಸಿದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, “ನಗರ ಪಾಲಿಕೆಯಲ್ಲಿ ಆಡಳಿತ ನಡೆಸುವ ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅದರ ಪ್ರತಿಫಲವೇ ಸ್ವತಃ ಆಯುಕ್ತರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡುವ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದ ಹಾಗಿದೆ. ಕೋಟ್ಯಂತರ ಬೆಲೆ ಬಾಳುವ ಮೂರು ಮನೆಗಳನ್ನು ಹೊಂದಿರುವ ಈ ಭ್ರಷ್ಟ ಆಯುಕ್ತರಿಗೆ ತನ್ನ ಅಧಿಕಾರದ ಅವಧಿಯಲ್ಲಿ ಬಡವರಿಗೆ ಒಂದು ತುಂಡು ನಿವೇಶನ ನೀಡಲು ಸಾಧ್ಯವಾಗಿಲ್ಲ. ವಾಲ್ಮೀಕಿ ಹಗರಣ ಮುಡಾ ಹಗರಣದ ಬಗ್ಗೆ ಉದ್ದುದ್ದ ಮಾತನಾಡುವ ಶಾಸಕ ವೇದವ್ಯಾಸರಿಗೆ ತನ್ನ ಕಾಲಿನಬುಡದಲ್ಲಿರುವ ಮನಪಾ ಆಯುಕ್ತರ ಅಕ್ರಮ ಆಸ್ತಿಯ ಬಗ್ಗೆ ಮಾತನಾಡಲು ಎದೆಗಾರಿಕೆ ಇಲ್ಲವೇ” ಎಂದು ಪ್ರಶ್ನಿಸಿದರು.

ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, “ಸುಂದರ ಸಮೃದ್ಧ ಸ್ವಚ್ಛ ಮಂಗಳೂರು ನಿರ್ಮಾಣದಲ್ಲಿ ಕೈಜೋಡಿಸಬೇಕಾದ ಶಾಸಕ ವೇದವ್ಯಾಸ ಅವರು ಆಯುಕ್ತರ ಜೊತೆಗೂಡಿ ಇಡೀ ಮಂಗಳೂರನ್ನು ಕಬಳಿಸಲು ಹೊಂಚು ಹಾಕುತ್ತಿದ್ದು, ಇದರ ವಿರುದ್ಧ ಮಂಗಳೂರಿನ ಪ್ರಜ್ಞಾವಂತ ಜನತೆ ಎಚ್ಚೆತ್ತುಕೊಳ್ಳಬೇಕು” ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಮುಖಂಡ ಜೆ ಬಾಲಕೃಷ್ಣ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಜಯಂತಿ ಶೆಟ್ಟಿ, ಮಹಿಳಾ ಮುಖಂಡೆ ಪ್ರಮಿಳಾ ದೇವಾಡಿಗ, ಅಸುಂತ ಡಿಸೋಜ, ಯೋಗಿತಾ ಉಳ್ಳಾಲ, ಯುವಜನ ನಾಯಕರಾದ ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ಸಾಮಾಜಿಕ ಚಿಂತಕ ಜೆ ಇಬ್ರಾಹಿಂ ಜೆಪ್ಪು ಇದ್ದರು.

ಸಿಪಿಐಎಂ ಮಂಗಳೂರು ನಗರ ಮುಖಂಡೆ ಪ್ರಮಿಳಾ ಶಕ್ತಿನಗರ, ದಯಾನಂದ ಶೆಟ್ಟಿ, ಅಶೋಕ್ ಶ್ರೀಯಾನ್, ಭಾರತಿ ಬೋಳಾರ, ನಾಗೇಶ್ ಕೋಟ್ಯಾನ್, ದೀಪಕ್ ಬಜಾಲ್, ನವೀನ್ ಕೊಂಚಾಡಿ, ತಯ್ಯೂಬ್ ಬೆಂಗರೆ, ಕೃಷ್ಣ ತಣ್ಣೀರುಬಾವಿ, ರೆಹಮಾನ್, ರಿಯಾಜ್, ಶಶಿಧರ್ ಶಕ್ತಿನಗರ, ಉಮೇಶ್ ಸೇರಿದಂತೆ ಬಹುತೇಕರು ಮುತ್ತಿಗೆ ಚಳವಳಿಯ ನೇತ್ರತ್ವ ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ಪಾಲಿಕೆ ಕಚೇರಿಗೆ ನುಗ್ಗಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಿಪಿಐಎಂ ಹೋರಾಟಗಾರರನ್ನು ಪೊಲೀಸರು ಬಲಪ್ರಯೋಗದಿಂದ ತಡೆದರು. ಆಕ್ರೋಶಗೊಂಡ ಪ್ರತಿಭಟನಾಕಾರರು ನಂತರ ರಸ್ತೆತಡೆ ಮಾಡಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೋಲಿಸರು ಕಾರ್ಯಕರ್ತರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...