ಮಹೇಶ್ ಜೋಶಿಗೆ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನ ರದ್ದತಿಗೆ ಸಿಪಿಐಎಂ ಆಗ್ರಹ

Date:

ಕನ್ನಡ ಸಾಹಿತ್ ಪರಿಷತ್‌ನ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸಂಪುಟದ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಆ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು, ಜೋಶಿ ಅವರು ಕಸಾಪ ಅಧ್ಯಕ್ಷ ಸ್ಥಾನದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ಅವರಿಗೆ ನೀಡಲಾಗಿರುವ ಸಚಿವ ದರ್ಜೆಯ ಸ್ಥಾನಮಾನವನ್ನು ಹಿಂಪಡೆಯಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ-ಮಾಕ್ಸ್‌ವಾದಿ (ಸಿಪಿಐ-ಎಂ) ಆಗ್ರಹಿಸಿದೆ.

ಸಿಪಿಐಎಂನ ಮಂಡ್ಯ ಜಿಲ್ಲಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಒತ್ತಾಯಿಸಿದೆ. “ಕಸಾಪ ಅಧ್ಯಕ್ಷ ಸ್ಥಾನ ಇರುವುದು ಸಾಹಿತ್ಯ ಪರಿಚಾರಿಕೆ ಮಾಡಲೇ ಹೊರತು ಅಧಿಕಾರ ಚಲಾವಣೆಗಲ್ಲ. ಈ ಹಿಂದಿನ ಸರ್ಕಾರ ರಾಜಕೀಯ ಕಾರಣಗಳಿಗಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ದಯಪಾಲಿಸಿದೆ. ಇದನ್ನು ಕೂಡಲೇ ಹಿಂಪಡೆದು ಪರಿಷತ್ತಿನ ಘನತೆಯನ್ನು ಎತ್ತಿ ಹಿಡಿಯಬೇಕು” ಎಂದು ಆಗ್ರಹಿಸಿದೆ.

“ಕಸಾಪ ಅಧ್ಯಕ್ಷ ಮಹೇಶ್ ಜೋಶಿಯವರು ತಮ್ಮ ಸ್ಥಾನದ ಘನತೆಯನ್ನು ಮರೆತು, ಸಚಿವ ದರ್ಜೆಯ ಸ್ಥಾನಮಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಹಿರಿಯ ಸಾಹಿತಿಗಳು, ಜಿಲ್ಲಾಡಳಿತ ಮತ್ತು ಸ್ಥಳೀಯ ಜನ ಪ್ರತಿನಿಧಿಗಳು ಸೇರಿದಂತೆ ಎಲ್ಲರ ಮೇಲೂ ಅಧಿಕಾರ ಚಲಾಯಿಸುವ, ಅಹಂಕಾರ ಮೆರೆಯುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾಹಿತಿಗಳು ಮತ್ತು ಸಾಹಿತ್ಯ ಪ್ರೇಮಿಗಳು ಮುಜುಗರ ಪಡುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಂಪನಿಂದ ದೇವನೂರು ಮಹಾದೇವ ವರೆಗಿನ ಕನ್ನಡ ಸಾಹಿತ್ಯ ಪರಂಪರೆ ಬಹಳ ದೊಡ್ಡದು ಮತ್ತು ಘನತೆಯದು. ಅದು ಎಲ್ಲರನ್ನೂ ಒಳಗೊಂಡ, ಅಪ್ಪಿಕೊಂಡ ಪರಂಪರೆ. ಆದರೆ ಈಗಿನ ಅಧ್ಯಕ್ಷ ಜೋಶಿಯವರು ತಮ್ಮ ಜಾತಿ ಶ್ರೇಷ್ಠತೆ ಮತ್ತು ಅಧಿಕಾರದ ಅಹಂನಿಂದ ಎಲ್ಲರನ್ನೂ ದೂರ ತಳ್ಳುವ ಕನ್ನಡವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಅಧ್ಯಕ್ಷರಿಗೆ ನೀಡಿರುವ ಸಚಿವ ಸ್ಥಾನಮಾನ ತೆಗೆದು ಪರಿಷತ್ತಿನ ಅಧ್ಯಕ್ಷರ ನೈಜ ಜವಾಬ್ದಾರಿ ಏನು ಎನ್ನುವುದನ್ನು ಜೋಶಿಯವರು ಅರಿತು ಮುನ್ನಡೆಯುವಂತೆ ಮಾಡಬೇಕು” ಎಂದು ಆಗ್ರಹಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಪಿಐಎಂ ಬರೆದಿರುವ ಪತ್ರದಲ್ಲಿ ಟಿ.ಎಲ್ ಕೃಷ್ಣೇಗೌಡ, ಎಂ.ಪುಟ್ಟಮಾದು, ದೇವಿ, ಟಿ.ಯಶವಂತ, ಸಿ.ಕುಮಾರಿ, ಎನ್.ಎಲ್. ಭರತ್‌ರಾಜ್ ಸಹಿಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...