ಉಡುಪಿ | ಆರು ಸಾವಿರ ಪಡಿತರ ಚೀಟಿ ರದ್ದು; ಗೊಂದಲ ಸರಿಪಡಿಸಲು ಕುಂದಾಪುರ ಸಿಪಿಎಂ ಆಗ್ರಹ

Date:

ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಆರು ಸಾವಿರ ಬಿಪಿಎಲ್ ಪಡಿತರ ಚೀಟಿಗಳು ರದ್ದಾಗಿರುವುದು ಹಾಗೂ ಪಡಿತರ ವಿತರಣೆ ಕೇಂದ್ರದಲ್ಲಿ ಪಡಿತರ ವಿತರಣೆಯಲ್ಲಿ ತೊಂದರೆಗಳಾಗಿ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಖಂಡನೀಯ ಎಂದು ಸಿಪಿಎಂ ಕುಂದಾಪುರ ತಾಲೂಕು ಸಮಿತಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಆಹಾರ ವಿಭಾಗದ ಉಪ ತಹಶೀಲ್ದಾರರು ಹಾಗೂ ನಿಯೋಜಿತ ಉಪ ತಹಶಿಲ್ದಾರರನ್ನು ಸಿಪಿಎಂ ನಿಯೋಗ ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ಮಾ‌ಡಿದ್ದು, ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“ಈ ಬಗ್ಗೆ ಸ್ಪಷ್ಟನೆ ನೀಡಿದ ಅಧಿಕಾರಿಗಳು ಸುಮಾರು 6 ಸಾವಿರ ಬಿಪಿಎಲ್ ಪಡಿತರ ಚೀಟಿಗಳು ಪರಿಶೀಲನೆಯಲ್ಲಿದ್ದು, ಅದರಲ್ಲಿ ಅರ್ಹ ಫಲಾನುಭವಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್‌ನೊಂದಿಗೆ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹರಿಸಿಕೊಳ್ಳಬಹುದೆಂದು ತಿಳಿಸಿದ್ದಾರೆ. ಅಲ್ಲದೆ ಕುಟುಂಬದ ವಿದ್ಯಾರ್ಥಿಗಳ ಆದಾಯವನ್ನು ಕುಟುಂಬದ ಆದಾಯವಾಗಿ ಪರಿಗಣಿಸುವುದಿಲ್ಲ. ಪಡಿತರ ವಿತರಣಾ ಕೇಂದ್ರದಲ್ಲಿ ಆಹಾರ ಇಲಾಖೆಯ ಹೊಸ ತಂತ್ರಾಂಶದ ತಾಂತ್ರಿಕ ತೊಂದರೆಗಳಿಂದ ಪಡಿತರ ವಿತರಣೆಯಲ್ಲಿ ವ್ಯತ್ಯಾಸ ಆಗಿರುವುದೇ ವಿನಃ ರೇಷನ್ ಕಾರ್ಡ್ ಪರಿಶೀಲನೆಗೂ ಸಂಬಂಧವಿಲ್ಲ. ಎಲ್ಲ ಅರ್ಹ ಪಡಿತರದಾರರಿಗೂ ಈ ತಿಂಗಳ ಅಂತ್ಯದವರೆಗೂ ಪಡಿತರ ವಿತರಿಸಲಾಗುತ್ತದೆ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿಗಳು ಗ್ರಾಮ ಪಂಚಾಯಿತಿ ಹಾಗೂ ಪಡಿತರ ವಿತರಣಾ ಕೇಂದ್ರದಲ್ಲಿ ಪ್ರಕಟಣೆಯ ಫಲಕ ಅಳವಡಿಸಿ ಜನರಲ್ಲಿರುವ ಗೊಂದಲ ನಿವಾರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರದ ಅವೈಜ್ಞಾನಿಕ ಮಾನದಂಡಗಳನ್ನು ಸರಿಪಡಿಸಲು ಆಹಾರ ಇಲಾಖೆ ಪ್ರತಿ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಿ ಅನರ್ಹರನ್ನು ಗುರುತಿಸಿ ಗ್ರಾಮ ಸಭೆಗಳಲ್ಲಿ ಮಂಡಿಸಿ ಅರಿವು ಮೂಡಿಸಿದ ಬಳಿಕ ಕ್ರಮ ಜರುಗಿಸಬೇಕು. ಅಲ್ಲಿವರೆಗೆ ಕಾರ್ಡ್ ರದ್ದು ಮಾಡಬಾರದು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕನ್ನಡರಾಜ್ಯೋತ್ಸವ 50ರ ಸಂಭ್ರಮ; ಸಾಂಸ್ಕೃತಿಕ ನೃತ್ಯ ತಂಡಗಳ ಸ್ಪರ್ಧೆಗೆ ಆಹ್ವಾನ

“ಕೆಲವು ಬಡವರು ಮನೆಕಟ್ಟಲು ಸಾಲದ ಸಂದರ್ಭದಲ್ಲಿ ಮಾಡಿದ ಸಾಲಕ್ಕೆ ಆದಾಯ ಹೆಚ್ಚು ತೋರಿಸಿದವರಿಗೂ ಸರ್ಕಾರ ರಿಯಾಯಿತಿ ನೀಡಿ ಅವರಿಗೆ ಬಿಪಿಎಲ್ ಕಾರ್ಡ್ ನೀಡಬೇಕು ಎಂದು ನಿಯೋಗ ಆಗ್ರಹಿಸಿತು.

ನಿಯೋಗದಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕುಂದಾಪುರ ವಲಯ ಕಾರ್ಯದರ್ಶಿ ಎಚ್ ನರಸಿಂಹ, ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಚಂದ್ರಶೇಖರ ವಿ, ಕಾಳಾವರ ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರ ನಾವಡ, ಕಟ್ಟಡ ಕಾರ್ಮಿಕರ ಸಂಘದ ಮುಖಂಡ ಪ್ರಶಾಂತ್ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...