ದಾವಣಗೆರೆ | ಸಿಪಿಐ(ಎಂ) ಹಿರಿಯ ಮುಖಂಡ ಕೆ.ಎಲ್ ಭಟ್ ನಿಧನ; JJM ವೈದ್ಯಕೀಯ ಕಾಲೇಜಿಗೆ ದೇಹದಾನ

Date:

ಹಿರಿಯ ಹೋರಾಟಗಾರ, ದಾವಣಗೆರೆ ಜಿಲ್ಲಾ ಸಿಪಿಐ(ಎಂ) ಮಾಜಿ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಕೆ ಲಕ್ಷ್ಮೀನಾರಾಯಣ ಭಟ್ (ಕೆ.ಎಲ್.ಭಟ್) ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರ ಇಚ್ಛೆಯಂತೆಯೇ ಅವರ ಮೃತದೇಹವನ್ನು ಜೆಜೆಎಂ ವೈದ್ಯಕೀಯ ಕಾಲೇಜಿಗೆ ದಾನ ನೀಡಲಾಗುತ್ತದೆ ಎಂದು ಪಕ್ಷವು ತಿಳಸಿದೆ.

82 ವರ್ಷದ ಕೆ.ಎಲ್ ಭಟ್ ಅವರು ದಾವಣಗೆರೆಯ ಎಲ್‌ಐಸಿ ಕಾಲೋನಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬುಧವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅಸಂಖ್ಯಾತ ಚಳವಳಿಯ ಒಡನಾಡಿಗಳನ್ನು ಆಗಲಿದ್ದಾರೆ.

ಭಟ್ ಅವರು ಬದುಕಿದ್ದಾಗಲೇ, ತಮ್ಮ ನಿಧನದ ಬಳಿಕ ತಮ್ಮ ಮೃತದೇಹವನ್ನು ಜೆಜೆಎಂ ವೈದ್ಯಕೀಯ ಕಾಲೇಜಿಗೆ ನೀಡಬೇಕೆಂದು ಸೂಚಿಸಿದ್ದರು. ಅವರ ಇಚ್ಛೆಯಂತೆ ಅವರ ಮೃತದೇಹವನ್ನು ಶುಕ್ರವಾರ ಕಾಲೇಜಿಗೆ ವೈದ್ಯಕೀಯ ಸಂಶೋಧನೆಗಾಗಿ ಹಸ್ತಾಂತರಿಸಲಾಗುತ್ತದೆ ಎಂದು ಪಕ್ಷ ಮತ್ತುಕುಟುಂಬದ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆ.ಎಲ್ ಭಟ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್‌.ಕೆ, “ಉಡುಪಿ ಜಿಲ್ಲೆಯ ಕೊಲ್ಲೂರು ಲಕ್ಷ್ಮೀನಾರಾಯಣ ಭಟ್ ಅವರು 1960ರ ದಶಕ ಕೊನೆಯಲ್ಲಿ ಭಾರತೀಯ ‌ಜೀವ ವಿಮಾ‌ ನಿಗಮದಲ್ಲಿ ದಾವಣಗೆರೆ ಶಾಖೆಯಲ್ಲಿ ಓರ್ವ ಗುಮಾಸ್ತನಾಗಿ‌ ಕೆಲಸ ಆರಂಭಿಸಿದ್ದರು. ಬಳಿಕ ವಿಮಾ‌ ನೌಕರರ‌ ಸಂಘದ ನಾಯಕರಾಗಿ ನೌಕರರ ಮೇಲೆ ನಡೆಯುತ್ತಿದ್ದ ಶೋಷಣೆ ವಿರುದ್ದ ಹೋರಾಡುತ್ತಾ ಸಿಪಿಐ(ಎಂ) ಪಕ್ಷದಲ್ಲಿ ವಿವಿಧ ಹಂತಗಳಲ್ಲಿ ಕೆಲಸ‌ಮಾಡಿದರು. ಅದರ ಜತೆಗೆ ದಾವಣಗೆರೆಯಲ್ಲಿ ಸಮುದಾಯ‌ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿಯಾಗಿ ಅಪಾರ ಕೆಲಸ‌ಮಾಡಿದ್ದರು” ಎಂದು ಸ್ಮರಿಸಿದ್ದಾರೆ.

“ಭಟ್ ಅವರು ನಿವೃತ್ತಿ ಬಳಿಕಾವೂ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮಪಂಚಾಯತ್ ನೌಕರರು ಸೇರಿ ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡುತ್ತಲೇ ಸಿಐಟಿಯು ಜಿಲ್ಲಾ‌ಸಂಚಾಲಕರಾಗಿ ಬಳಿಕ ಸಿಪಿಎಂ ಜಿಲ್ಲಾ ಕಾರ್ಯದರ್ಶಿಯಾಗಿ ಕೆಲಸ‌ ಮಾಡಿದ್ದರು. ದುಡಿಯುವ ಜನರ‌ ಮೇಲೆ ನಡೆಯುತ್ತಿರುವ ನಿರಂತರವಾದ ದಾಳಿಗಳ ವಿರುದ್ದ ಚಳವಳಿಗಳನ್ನು ಮುನ್ನಡೆಸಿದ್ದರು. ವಿಶೇಷವಾಗಿ ದಾವಣಗೆರೆಯಲ್ಲಿ 90 ದಶಕದಲ್ಲಿ ನಡೆದ ಕೋಮು‌ಸಂಘರ್ಘ ಮತ್ತು‌ಕೋಮು ಗಲಭೆಗಳಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳ ಪರವಾಗಿ ಹಾಗೂ ಶಾಂತಿ ಸ್ಥಾಪನೆಯಾಗಿ ಮತ್ತು ಜನರನ್ನು ವಿಭಜಿಸುವ ಹಿಂದುತ್ವವಾದಿಗಳ ವಿರುದ್ದ ಮತ್ತು ಸಮಾಜದಲ್ಲಿ ‌ಶಾಂತಿ‌ಸಾಮರಸ್ಯಕ್ಕಾಗಿ ದಾವಣಗೆರೆ ವಿವಿಧ ಜನಪರ,ಜೀವಪರ ಸಂಘಟನೆಗಳು ಹಾಗೂ ವ್ಯಕ್ತಿಗಳನ್ನು ಒಳಗೊಂಡು ಅವಿತರವಾಗಿ ಶ್ರಮಿಸಿದ್ದರು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...