ಉಡುಪಿ | ಸೌಹಾರ್ದ ಜಿಲ್ಲೆ ನಿರ್ಮಾಣದ ಸಂಕಲ್ಪದೊಂದಿಗೆ ಸಿಪಿಎಂ ಪರ್ಯಾಯ ಶಕ್ತಿ ಆಗಬೇಕು : ಸುರೇಶ್ ಕಲ್ಲಾಗರ

Date:

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಜಿಲ್ಲಾ ಸಮಿತಿ ಕಚೇರಿ ಇಂದು ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿಯ ರಾಜರಾಮ್ ಮೋಹನ್ ರಾಯ್ ರಸ್ತೆಯಲ್ಲಿರುವ ಮಹಾಮಾಯ ಕಾಂಪ್ಲೆಕ್ಸ್ ಎರಡನೇ ಮಹಡಿಯಲ್ಲಿ ಉದ್ಘಾಟನೆ ನೆರವೇರಿತು.

ಪಕ್ಷದ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಾಸ್ತಾವಿಕ ಮಾತನಾಡಿ, ಸರ್ಕಾರದ ನೀತಿಗಳಿಂದ ಜಿಲ್ಲೆಯ ಅಪಾರ ಸಂಖ್ಯೆಯ ಜನರು ಇಂದು ಸಂಕಷ್ಟದಲ್ಲಿದ್ದಾರೆ. ಜಿಲ್ಲೆಗೆ ಸಿಪಿಎಂ ಪಕ್ಷವೇ ಪರ್ಯಾಯ ಆಗಬೇಕಾಗಿದೆ.
ಜನರನ್ನು ಬೆಲೆ ಏರಿಕೆಯಿಂದ ರಕ್ಷಿಸಬೇಕಾದ ಹೊಣೆ ಪಕ್ಷದ ಮೇಲಿದೆ. ಕಾರ್ಮಿಕ ವರ್ಗದ ಪಕ್ಷವಾಗಿ ಕಾರ್ಮಿಕರ ಕಾನೂನು ರಕ್ಷಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು. ರೈತರು, ಕೂಲಿಕಾರರು ಪಕ್ಷದ ಬೆನ್ನೆಲುಬು ಅವರನ್ನು ಸಂಘಟಿಸಲು ಮುತುವರ್ಜಿ ವಹಿಸಬೇಕು. ಕೋಮುದ್ವೇಷ ಹರಡಿ ರಾಜಕಾರಣ ಮಾಡಿ ಜನರ ಪ್ರೀತಿ, ವಿಶ್ವಾಸ ಒಡೆಯುವ ಶಕ್ತಿಗಳ ವಿರುದ್ಧ ಹೆಚ್ಚು ಹೆಚ್ಚು ಕೆಲಸ ಮಾಡಬೇಕಾಗಿದೆ ನೆಮ್ಮದಿಯ, ಸೌಹಾರ್ದತೆಯ ಉಡುಪಿ ಜಿಲ್ಲೆ ಕಟ್ಟುವ ಕೆಲಸ ಪ್ರತಿಯೊಬ್ಬ ಪಕ್ಷದ ಸದಸ್ಯರು ಮಾಡಬೇಕು ಎಂದು ಅವರು ಹೇಳಿದರು.

ತಯೆಯ

ಕಚೇರಿ ಉದ್ಘಾಟನೆಯನ್ನು ಪಕ್ಷದ ಹಿರಿಯ ಸದಸ್ಯರಾದ ಅದಮಾರು ಶ್ರೀಪತಿ ಆಚಾರ್ಯ ಉದ್ಘಾಟಿಸಿ ಮಾತನಾಡಿ: ಸಿಪಿಎಂ ಚುನಾವಣೆಯಲ್ಲಿ ಸೋಲಬಹುದು ಆದರೆ ನಿರಂತರ ಜನರ ನಡುವೆ ಅಧಿಕಾರದಲ್ಲಿರುತ್ತದೆ. ಕಮ್ಯುನಿಸ್ಟ್ ಬಗ್ಗೆ ಕೆಲವು ಮಂದಿ ಪೂರ್ವಗ್ರಹ ಪೀಡಿತರಾಗಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಎಂ ಎಲ್ಲಾ ಮತಗಳನ್ನು ಗೌರವಿಸುತ್ತದೆ ಆದರೆ ನಮ್ಮ ಮತವೇ ಶ್ರೇಷ್ಠ ಎಂಬುವುದನ್ನು ಮಾತ್ರ ದ್ವೇಷಿಸುತ್ತದೆ ಈ ವೈಚಾರಿಕ ವಿಚಾರಗಳನ್ನು ಜನರ ಬಳಿ ಹೋಗಬೇಕು ಪಕ್ಷ ಆ ಕೆಲಸ ಮಾಡಬೇಕು.ನೊಂದವರ, ಶೋಷಿತರ ಪರವಾಗಿ ನಿಲ್ಲುವುದೇ ಪಕ್ಷ ಸಿದ್ಧಾಂತವಾಗಿ ರುವುದರಿಂದ ಪಕ್ಷವನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.

ಸಿಪಿಎಂ ಹಿರಿಯ ಸದಸ್ಯ ಕೆ ಶಂಕರ್ ಅವರು ಪಕ್ಷದ ನಾಮಫಲಕ ಉದ್ಘಾಟಿಸಿ ಮಾತನಾಡಿದರು. ಸಹೋದರ ಪಕ್ಷ ಸಿಪಿಐನ ಕಾರ್ಯದರ್ಶಿ ಶೇಖರ್ ಅವರು ಶುಭಾಶಯ ಎಡಪಕ್ಷಗಳ ಅಗತ್ಯತೆ ಬಗ್ಗೆ ಹಾಗೂ ಶುಭ ಕೋರಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಲಯ ಸಮಿತಿ ಕಾರ್ಯದರ್ಶಿ ಶಶಿಧರ್ ಗೊಲ್ಲ ವಹಿಸಿದ್ದರು. ಸಭೆಯಲ್ಲಿ ಕಟ್ಟಡ ಮಾಲಕರಾದ ಲಕ್ಷ್ಮೀನಾರಾಯಣ ಭಟ್, ಜಿಲ್ಲಾ ಸಮಿತಿ ಸದಸ್ಯ ಕವಿರಾಜ್ ಎಸ್ ಕಾಂಚನ್, ಉಮೇಶ್ ಕುಂದರ್, ಶೀಲಾವತಿ ಪಡುಕೋಣೆ, ವಾಮನ ಪೂಜಾರಿ, ಸಿಪಿಐ ಶಿವಾನಂದ, ಕೋಣಿ ವೆಂಕಟೇಶ್, ಬಲ್ಕೀಸ್, ಸರೋಜ, ಸಂಜೀವ ಬಳ್ಕೂರು ಮೊದಲಾದವರಿದ್ದರು.

ಚ್‌ತ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...