ಬೀದರ್‌ | ಕನ್ನಡ ಭಾಷೆ ಶ್ರೀಮಂತಿಕೆಯ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ : ಸುರೇಶ ಚನ್ನಶೆಟ್ಟಿ

Date:

ಸಂಘ-ಸಂಸ್ಥೆಗಳು ಜನಸಾಮಾನ್ಯರಲ್ಲಿ ಕನ್ನಡ ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.

ಬೀದರ್‌ನ ಬಿ.ವಿ. ಭೂಮರಡ್ಡಿ ಕಾಲೇಜಿನಲ್ಲಿ ಆಯೋಜಿಸಿದ್ದ ವಚನಾಮೃತ ಕನ್ನಡ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. “ಈಗಾಗಲೇ ಅನೇಕ ಕನ್ನಡ ಪರ ಸಂಘ- ಸಂಸ್ಥೆಗಳು ಇವೆ. ಸಂಸ್ಥೆಗಳ ಸಂಖ್ಯೆ ಹೆಚ್ಚಿದಷ್ಟು ಕನ್ನಡ ಬೆಳವಣಿಗೆಗೆ ಅನುಕೂಲವೇ ಆಗಲಿದೆ. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಶ್ರೇಯಸ್ಸು ಬಸವಾದಿ ಶರಣರಿಗೆ ಸಲ್ಲುತ್ತದೆ. ಅವರು ಬೇರೆ ಬೇರೆ ರಾಜ್ಯಗಳಿಂದ ಬಂದವರಿಗೆ ಕನ್ನಡ ಕಲಿಸಿದ್ದರು. ಕನ್ನಡದಲ್ಲಿ ವಚನ ಬರೆಯಲು ಪ್ರೇರಣೆ ನೀಡಿದ್ದರು” ಎಂದು ಸ್ಮರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಪ್ರೊ. ಸಿದ್ರಾಮಪ್ಪ ಮಾಸಿಮಾಡೆ ಮಾತನಾಡಿ, “ಸಾಹಿತ್ಯಿಕ ಚಟುವಟಿಕೆಗಳನ್ನು ಕೈಗೊಳ್ಳಲು ವಚನಾಮೃತ ಕನ್ನಡ ಸಂಘ ರಚಿಸಲಾಗಿದೆ. ಸಂಘದಿಂದ ಬರುವ ದಿನಗಳಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿಯ ಹಿರಿಯ ಸಾಹಿತಿ ಕಾವ್ಯಶ್ರೀ ಮಹಾಗಾಂವರ್ ವಿಶೇಷ ಉಪನ್ಯಾಸ ನೀಡಿ, “ಮಾನವೀಯತೆ ಹಾಗೂ ಮಾನವೀಯ ಮೌಲ್ಯಗಳಿಗೆ ಸಂಬಂಧವಿದೆ. ಮಾನವೀಯ ಮೌಲ್ಯಗಳ ಜಾಗೃತಿ ಹೆಚ್ಚು ಅವಶ್ಯಕವಾಗಿದೆ.12ನೇ ಶತಮಾನದ ಶರಣರು ನೀಡಿರುವ ಶ್ರೇಷ್ಠವಾದ ವಚನ ಸಾಹಿತ್ಯವನ್ನು ಎಲ್ಲರೂ ಅಧ್ಯಯನ ಮಾಡಬೇಕು” ಎಂದು ಹೇಳಿದರು

ಎಚ್‌ಕೆಇ ಸೊಸೈಟಿ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಕನ್ನಡ ಪರ ಚಟುವಟಿಕೆಗಳಿಗೆ ತಮ್ಮ ಸಹಕಾರ ಸದಾ ಇರಲಿದೆ” ಎಂದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಯುನೈಟೆಡ್ ಕಿಂಗಡಂ ಗೌರವ ಯುವ ಸಂಚಾಲಕ ಆದಿಶ್ ವಾಲಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಬಿ.ವಿ. ಭೂಮರಡ್ಡಿ ಕಾಲೇಜು ಪ್ರಾಚಾರ್ಯ ಡಾ. ಪಿ. ವಿಠ್ಠಲರೆಡ್ಡಿ, ಸಾಹಿತ್ಯ ಹಾಗೂ ಸಂಸ್ಕೃತಿ ಚಿಂತಕ ಗುರುಸಿದ್ದಪ್ಪ ಬಿರಾದಾರ ಸೇರಿದಂತೆ ಪ್ರಮುಖರಾದ ಬಸವರಾಜ ರುದನೂರು, ಶ್ರೀಕಾಂತ ಬಿರಾದಾರ, ಲೋಕೇಶ ಉಡಬಾಳೆ, ಬಸವರಾಜ ಬಿರಾದಾರ, ಆನಂದ ಜಾಧವ್, ರಾಜಕುಮಾರ ಶಂಭು, ಸಿದ್ರಾಮಪ್ಪ ಸಪಾಟೆ, ಕೆ. ಗುರುಮೂರ್ತಿ, ಗಂಗಶೆಟ್ಟಿ ಖಾನಾಪುರೆ, ಬಸವರಾಜ ಬೆಳಕುಣಿ ಸ್ವರೂಪಾರಾಣಿ, ಭಾರತಿ ವಸ್ತ್ರದ್ ಮೊದಲಾದವರು ಇದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಭೀಕರ ಹತ್ಯೆ

ಪ್ರವೀಣ ಮ್ಯೂಸಿಕ್ ಅಕಾಡೆಮಿಯವರು ನಾಡ ಗೀತೆ ಹಾಗೂ ಸಂಗೀತ ನಡೆಸಿಕೊಟ್ಟರು. ಜಯದೇವಿ ಯದಲಾಪುರೆ ನಿರೂಪಿಸಿದರು. ಪರಮೇಶ್ವರ ಬಿರಾದಾರ ಸ್ವಾಗತಿಸಿದರು. ಸಂತೋಷ ಮಂಗಳೂರೆ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...