ಬೀದರ್ | ಅನುಮತಿ ಇಲ್ಲದೆ ಪಟಾಕಿ ಅಂಗಡಿ ತೆರೆದರೆ ಕ್ರಿಮಿನಲ್ ಪ್ರಕರಣ; ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಎಚ್ಚರಿಕೆ

Date:

ಅನುಮತಿ ಇಲ್ಲದೆ ಪಟಾಕಿ ಅಂಗಡಿ ನಡೆಸುವಂತಿಲ್ಲ. ಜಿಲ್ಲೆಯಲ್ಲಿ ಅಂತಹ ಅಂಗಡಿಗಳು ಕಂಡು ಬಂದರೆ ಅಂಗಡಿ ಮಾಲಿಕರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಟಾಕಿ ಅಂಗಡಿ ಅನುಮತಿಗೆ ಸಂಬಂಧಿಸಿದ ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಅವರು ಮಾತನಾಡಿದರು. “ಮುಂಬರುವ ದೀಪಾವಳಿ ಹಬ್ಬದ ಅಂಗವಾಗಿ ಹಾಕಲಾಗುವ ತಾತ್ಕಾಲಿಕ ಪಟಾಕಿ ಮಳಿಗೆಗಳ ಮಾಲಿಕರು ಮುಂಚಿತವಾಗಿ ಸಂಬಂಧಪಟ್ಟವರಿಂದ ಪರವಾನಗಿ ಪಡೆಯಬೇಕು. ಶಾಶ್ವತವಾಗಿ ಪಟಾಕಿ ಅಂಗಡಿಗಳನ್ನು ನಡೆಸುವವರು ಕಡ್ಡಾಯವಾಗಿ ಪರವಾನಗಿ ಪಡೆದಿರಬೇಕು. ಯಾರ ಪರವಾನಗಿ ಅವಧಿ ಮುಗಿದಿದೆಯೋ ಅವರು ಕೂಡಲೇ ಪರವಾನಗಿಯನ್ನು ನವೀಕರಿಸಿಕೊಳ್ಳಬೇಕು” ಎಂದರು.

“ತಾತ್ಕಾಲಿಕ ಅನುಮತಿಗಾಗಿ ಅರ್ಜಿ ಸಲ್ಲಿಸಿದ ಅಂಗಡಿಗಳ ಸ್ಥಳಕ್ಕೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿ ಶಾಮಕ ದಳ ಹಾಗೂ ನಗರಸಭೆಯ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ ಮೂರು ದಿನಗಳ ಒಳಗೆ ಎನ್‌ಓಸಿ ನೀಡಬೇಕು. ಈ ಹಿಂದಿನಿಂದ ಬೀದರ ಜಿಲ್ಲೆಯಾದ್ಯಂತ ನಡೆಸಲಾಗುತ್ತಿರುವ ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅವರ ಪರವಾನಗಿ ಪರಿಶೀಲಿಸಬೇಕು ಹಾಗೂ ಅವರು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿರುವ ಬಗ್ಗೆ ದೃಢಿಕರಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುಮತಿ ಇಲ್ಲದೆ ಪಟಾಕಿ ಮಾರಾಟ ಅಪರಾಧ:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, “ಯಾರು ಕೂಡ ಪರವಾನಗಿ ಇಲ್ಲದೆ ಪಟಾಕಿ ಮಾರಾಟ ಮಾಡಬಾರದು, ಪಟಾಕಿ ಅಂಗಡಿ ಹೊರತು ಪಡಿಸಿ ಇತರೆ ಅಂಗಡಿಗಳಲ್ಲಿ ಪಟಾಕಿ ಮಾರಾಟ ಮಾಡುವುದು ಅಪರಾಧವಾಗಿರುತ್ತದೆ. ಆದ್ದರಿಂದ ಯಾರೂ ಅನುಮತಿ ಇಲ್ಲದ ಕಡೆಗಳಲ್ಲಿ ಪಟಾಕಿ ಮಾರಾಟ ಮಾಡಬಾರದು” ಎಂದು ಎಚ್ಚರಿಸಿದರು.

“ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಪಟಾಕಿ ಮಾರಾಟದ ಪರವಾನಗಿ ಇಲ್ಲದೆ ಇರುವುದು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಬೇಕು. ಯಾವುದೇ ಕಾರಣಕ್ಕೂ ಸ್ಥಳ ಪರಿಶೀಲನೆ ನಡೆಸದೆ ಎನ್‌ಓಸಿ ನೀಡಬಾರದು. ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವಾರದೊಳಗೆ ಮನರೇಗಾ ಕೂಲಿ ಹಣ ಪಾವತಿಸಲು ಬಿಎಸ್‌ಪಿ ಆಗ್ರಹ

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ನಗರಸಭೆ ಆಯುಕ್ತ ಶಿವರಾಜ ರಾಠೋಡ, ಅಗ್ನಿ ಶಾಮಕ ಅಧಿಕಾರಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...