ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ : ಸಚಿವ ಈಶ್ವರ ಖಂಡ್ರೆ

Date:

ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಎಂದು ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ʼಮಳೆ, ಪ್ರವಾಹದಿಂದ ಬೆಳೆ ಹಾನಿ ಆದಾಗ 3 ದಿನಗಳ ಒಳಗಾಗಿ ವೆಬ್ ಲಿಂಕ್ ಅಥವಾ ದೂರವಾಣಿ ಮುಖಾಂತರ ಮಾಹಿತಿ ನೀಡಬೇಕು ಎಂಬ ಷರತ್ತಿದೆ. ಆದರೆ, ಖಾಸಗಿ ಕಂಪನಿಗಳ ಫೋನ್ ಮತ್ತು ವೆಬ್ ಲಿಂಕ್ ಕಾರ್ಯ ನಿರ್ವಹಿಸುವುದಿಲ್ಲ. ಬೆಳೆ ಹಾನಿಯಾದವರು ಮಾಹಿತಿ ನೀಡಿಲ್ಲ ಎಂದು ಪರಿಹಾರ ನೀಡುವುದಿಲ್ಲ. ಇಂತಹ ಸಾಕಷ್ಟು ನ್ಯೂನತೆಗಳಿವೆʼ ಎಂದರು.

ʼಬೆಳೆ ಕಟಾವು ಪ್ರಯೋಗದಲ್ಲಿ 7 ವರ್ಷದ ಅಂದಾಜಿನಲ್ಲಿ 5 ವರ್ಷದ ಇಳುವರಿಯ ಸರಾಸರಿ ತೆಗೆದುಕೊಳ್ಳುವ ವಿಚಾರದಲ್ಲೂ ವೈಜ್ಞಾನಿಕವಾಗಿ ನಿಗದಿ ಮಾಡುವುದಿಲ್ಲ. ಋತುಮಾನದ ಮಧ್ಯಕಾಲೀನ ವೈಪರೀತ್ಯ (ಮಿಡ್ ಸೀಸನ್ ಅಡ್ವರ್ಸಿಟಿ) ವಿಚಾರದಲ್ಲೂ ರೈತರಿಗೆ ಅನ್ಯಾಯ ಆಗುತ್ತಿದೆ. ಇಂತಹ ನ್ಯೂನತೆಗಳು ಇವೆ. ಒಟ್ಟಾರೆ ಬೆಳೆ ವಿಮೆ ನೀತಿ ಬದಲಾವಣೆಯಾದರೆ ಮಾತ್ರ ರೈತರಿಗೆ ಒಳ್ಳೆಯದಾಗುತ್ತದೆ. ಇದಕ್ಕೆ ಎಲ್ಲರೂ ಕೂಡಿ ಪ್ರಯತ್ನ ಮಾಡಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕೇಂದ್ರ ಸರ್ಕಾರ ಬೆಳೆ ವಿಮೆ ಯೋಜನೆಗೆ ಮಾಡಿರುವ ಮಾರ್ಗಸೂಚಿಗಳಲ್ಲಿ ಸಾಕಷ್ಟು ನ್ಯೂನತೆ ಇವೆ. ಇದನ್ನು ಪರಿಹರಿಸಲು ಕೃಷಿ ಸಚಿವರು ಸಭೆ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆದರೆ ಈವರೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿಗೆ ಬದಲಾವಣೆ ಮಾಡಿಲ್ಲ. ಕೇಂದ್ರ ಸರ್ಕಾರ 5-10 ಖಾಸಗಿ ವಿಮಾ ಕಂಪನಿಗಳನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದು, ಅವರೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಅವರು ರಾಜ್ಯದ 31 ಜಿಲ್ಲೆಗಳನ್ನು ಹಂಚಿಕೊಂಡು ತಮಗೆ ಲಾಭವಾಗುವ ರೀತಿಯಲ್ಲಿ ಟೆಂಡರು ಹಾಕಿ ಲಾಭ ಮಾಡಿಕೊಳ್ಳುತ್ತಿದ್ದಾರೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಕಲ್ಯಾಣ ಕರ್ನಾಟಕದಲ್ಲಿ 20,462 ಶಿಕ್ಷಕರ ಹುದ್ದೆ ಖಾಲಿ

2016ಕ್ಕೆ ಮುನ್ನ ಭಾರತೀಯ ಕೃಷಿ ನಿಗಮದ ವತಿಯಿಂದ ವಿಮೆ ಜಾರಿ ಮಾಡುತ್ತಿದ್ದರು. ಆಗ ನಿಗಮಕ್ಕೆ ನಷ್ಟ ಆಗುತ್ತಿತ್ತು. ಆ ನಷ್ಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಭರಿಸುತ್ತಿತ್ತು. ಈಗಲೂ ನಿಗಮಕ್ಕೆ ನಷ್ಟ ಆಗುತ್ತದೆ. ಆದರೆ ಖಾಸಗಿ ಕಂಪನಿಗಳಿಗೆ ಮಾತ್ರ ಲಾಭ ಆಗುತ್ತಿದೆ. ಹೀಗಾಗಿ ಇಡೀ ನೀತಿಗೆ ತಿದ್ದುಪಡಿ ತರುವ ಅಗತ್ಯವಿದೆʼ ಎಂದು ಪ್ರತಿಪಾದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...