ಬೀದರ್‌ | ವಿವಿಧ ಬೇಡಿಕೆಗಳನ್ನು ಈಡೆರಿಸುಂತೆ ಬೆಳೆ ಸಮಿಕ್ಷೆದಾರರ ಒತ್ತಾಯ

Date:

  • ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಕೆ
  • ಜೀವ ಹಾನಿ ಸಂಭವಿಸಿದಲ್ಲಿ 5 ಲಕ್ಷ ರೂಪಾಯಿ ಜೀವ ವಿಮೆ ಒದಗಿಸಿಕೊಡಬೇಕು

ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರತಿ ವರ್ಷ ಮುಂಗಾರು, ಹಿಂಗಾರು, ಬೇಸಿಗೆ ಋತುವಿನಲ್ಲಿ ಬೆಳೆ ಸಮಿಕ್ಷೆ ಕಾರ್ಯಕೈಗೊಳುತ್ತೇವೆ. ಆದರೆ ಸದರಿ ಬೆಳೆ ಸಮೀಕ್ಷೆ ಕಾರ್ಯ ಸುಗಮ ರೀತಿಯಲ್ಲಿ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಬೇಕಾದರೆ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾ ಬೆಳೆ ಸಮೀಕ್ಷೆದಾರರು ( ಪಿ.ಆರ್)‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಕರ್ನಾಟಕ ಸರಕಾರದ ಆದೇಶದಂತೆ ಪ್ರತಿ ವರ್ಷ ಬೀದರ ಜಿಲ್ಲೆಯ ರೈತರ ಪಹಾಣಿ ಪ್ರತಿಕೆಯಲ್ಲಿ ಬೆಳೆ ನಮೂದು ಆಗಲು ಹಾಗೂ ಪ್ರಧಾನ ಮತ್ರಿ ಫಸಲ ಭಿಮಾ ಯೋಜನೆ ಪಡೆಯಲು ಬೆಳೆ ವಿಮೆ ಪಡೆಯಲು ವಿವಿಧ ಬೆಳೆ ಹಾನಿ ಪ್ರಸಂಗಗಳಲ್ಲಿ ಬೆಳೆ ಹಾನಿ ಪರಿಹಾರ ಪಡೆಯಲು ಮಾರುಕಟ್ಟೆಯಲ್ಲಿ ಬೆಳೆ ಮಾರಾಟ ಮಾಡಲು ಬೆಳೆ ಸಮೀಕ್ಷೆ ಅತ್ಯಗತ್ಯವಾಗಿರುತ್ತದೆ. ಬೆಳೆ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಹಲವು ತೊಂದರೆಗಳು ಅನುಭವಿಸುತ್ತಿದ್ದು ಕೂಡಲೇ ಸಮಸ್ಯೆಗಳು ಬಗೆಹರಿಸುವಂತೆ ಒತ್ತಾಯಿಸಿದರು

ಬೇಡಿಕೆಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಬೆಳೆ ಸಮೀಕ್ಷೆ ಕೈಗೊಳ್ಳಲು ಹೋದಾಗ ಹೊಲದಲ್ಲಿ ವಿವಿಧ ವಿಷಜಂತುಗಳಿಂದ ಸುರಕ್ಷಿತ ಕವಚಗಳನ್ನು (ಸೆಫ್ಟಿ ಶೂ ಹಾಗೂ ಇತ್ಯಾದಿಗಳು) ಕೊಡಬೇಕು.
  2. . ಪಿ.ಆರ್‌.ಗಳಿಗೆ (PR) ಗುರುತಿನ ಚೀಟಿ ನೀಡಬೇಕು.
  3. ಸುಗಮ ರೀತಿಯಲ್ಲಿ ಬೆಳೆ ಸಮೀಕ್ಷೆಕೈಗೊಳ್ಳಲು ಸುಗಮ ರೀತಿಯಲ್ಲಿ ಜಿ.ಪಿ.ಎಸ್ (G.P.S) ನಕ್ಷೆ ವ್ಯವಸ್ಥೆ ಮಾಡಿಕೊಡುವುದು.
  4. ಜೀವ ಹಾನಿ ಸಂಭವಿಸಿದಲ್ಲಿ 5 ಲಕ್ಷ ರೂಪಾಯಿ ಜೀವ ವಿಮೆ ಒದಗಿಸಿಕೊಡಬೇಕು.
  1. ಪ್ರತಿ ಪ್ಲಾಟ್‌ ಗೆ 50 ರೂ. ನಿಗದಿಪಡಿಸುವುದು ಅಥವಾ ಪಿ.ಆರ್ ಗಳಿಗೆ ಪ್ರತಿ ತಿಂಗಳಿಗೆ ನಿರ್ದಿಷ್ಟ ಮೊತ್ತ (10,000) ನಿಗದಿಪಡಿಸಬೇಕು.
  1. ಪಿ.ಆರ್‌.ಗಳು ಬೆಳೆ ಸಮೀಕ್ಷೆ ಮಾಡುವ ಸಮಯದಲ್ಲಿ ಫೋನ್ ಹಾಗೂ ಚಾರ್ಚಿಂಗ್ ತೊಂದರೆ ಆಗುತ್ತಿದೆ.ಹೊಸ ಮೊಬೈಲ್‌, ಪವರ್‌ ಬ್ಯಾಂಕ್‌ ಕೊಡಿಸಬೇಕು.
  2. ಪ್ರತಿ ವರ್ಷ ಜಿ.ಪಿ.ಎಸ್ (GPS) ನಕ್ಷೆ ಸರ್ವೆ ನಂಬರ ಮೂಲಕ ಬೆಳೆ ಸಮೀಕ್ಷೆ ಮಾಡಲಾಗುತ್ತಿತ್ತು. ಆದರೆ ಈವಾಗ ಹಿಸ್ಸಾ ನಂಬರ ಜಿ.ಪಿ.ಎಸ್ ಮಾಡಲು ತುಂಬಾ ತೊಂದರೆ ಹಾಗೂ ಸಮಯ ವರ್ಥವಾಗುತ್ತಿದೆ. ಈ ಸಮಸ್ಯೆ ಬಗೆಹರಿಸಬೇಕು.

ಈ ಸುದ್ದಿ ಓದಿದ್ದೀರಾ ? ಬೀದರ್‌ | ವಿವಿಧ ಬೇಡಿಕೆಗಳ ಈಡೇರಿಕೆಗೆ ಭೀಮ್‌ ಆರ್ಮಿ ಒತ್ತಾಯ

ಈ ಸಂದರ್ಭದಲ್ಲಿ ಬೀದರ ಜಿಲ್ಲೆಯ ವಿವಿಧ ತಾಲೂಕಿನ ಪಿ.ಆರ್‌ ಗಳಾದ ಲೋಕೇಶ, ಬಸವರಾಜ ಕುಪ್ಪೆ, ಸಂಜುಕುಮಾರ, ವೀರಶೆಟ್ಟಿ, ಏಕನಾಥ ಮೇತ್ರೆ, ನಾಗಶೇಟ್ಟಿ, ಸಂತೋಷ, ಶ್ರೀಕಾಂತ, ಸುಂದರ, ರಮೇಶ, ಸೊಗೇಲ್‌, ದಾವುದ್‌ ಮಿಯ್ಯಾ, ನಾಗರಾಜ, ಕಲ್ಯಾಣಿ, ನರಸಪ್ಪ, ಪ್ರಕಾಶ, ಬಲಭೀಮ, ಮಧುಕರ, ಗುಂಡಪ್ಪ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...