ಉಡುಪಿ | ದುಬೈನ ಫಾರ್ಚ್ಯೂನ್ ಸಂಸ್ಥೆಗೆ ಕೋಟ್ಯಂತರ ರೂ. ವಂಚನೆ: ಆರೋಪಿಗೆ ನ್ಯಾಯಾಂಗ ಬಂಧನ

Date:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ₹2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಾರ್ಕೂರು‌ ಮೂಲದ ನಾಗೇಶ್ ಪೂಜಾರಿ (31) ಎಂಬಾತನಿಗೆ ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ಧುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಅ.16 ಬುಧವಾರದಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಲ್ಲದೇ, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದಾರೆ. ಜಾಮೀನು‌ ಅರ್ಜಿ ಮೇಲಿನ ಆದೇಶವನ್ನು ಅ.21ರ ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...