ಕ್ರಸ್ಟ್‌ಗೇಟ್ ಮುರಿದಿರುವುದು ಸರ್ಕಾರಕ್ಕೆ ಅಪಶಕುನದ ಮುನ್ಸೂಚನೆ : ಸಂಸದ ಗೋವಿಂದ ಕಾರಜೋಳ

Date:

ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಕ್ರಸ್ಟ್‌ಗೇಟ್ ಮುರಿದಿರುವುದು ಸರ್ಕಾರಕ್ಕೊಂದು ಅಪಶಕುನದ ಮುನ್ಸೂಚನೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಹೇಳಿದರು.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಅನ್ನುವುದಕ್ಕೆ ತುಂಗಭದ್ರಾ ಡ್ಯಾಮ್‌ನ ಗೇಟ್ 19 ಮುರಿದಿರುವುದೇ ಸಾಕ್ಷಿ. ಈ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಪೂರ್ಣಾವಧಿ ನೀರಾವರಿ ಸಚಿವರನ್ನ ನೇಮಕ ಮಾಡಬೇಕಿತ್ತು. ಈಗಿರುವವರು ಪಾರ್ಟ್ ಟೈಂ ನೀರಾವರಿ ಮಂತ್ರಿ ಇದ್ದಾರೆ. ಅವರು ಆಡಳಿತಕ್ಕಿಂತ ಹೆಚ್ಚು ರಾಜಕಾರಣಕ್ಕೆ ಒತ್ತು ಕೊಡುವಂತಹ ಸ್ಥಿತಿಯಲ್ಲಿದ್ದಾರೆ‌” ಎಂದು ಪರೋಕ್ಷವಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

“ಪಕ್ಷದ ಅಧ್ಯಕ್ಷರಾಗಿ, ದೇಶದಲ್ಲಿ ಎಲ್ಲೆಲ್ಲಿ ಚುನಾವಣೆ ನಡಯುತ್ತದೋ ಅಲ್ಲಿ ಹೆಚ್ಚು ಒತ್ತು ಕೊಡಬೇಕಾಗಿದೆ‌. ಹೀಗಾಗಿ ನೀರಾವರಿ ಇಲಾಖೆ ಅನಾಥವಾಗಿದೆ. ಈಗಲಾದರೂ ಸಿಎಂ ಸಿದ್ದರಾಮಯ್ಯನವರು ಎಚ್ಚೆತ್ತುಕೊಂಡು ನೀರಾವರಿ ಇಲಾಖೆಗೆ ಪೂರ್ಣಾವಧಿ ಮಂತ್ರಿಯನ್ನು ನೇಮಕ ಮಾಡಬೇಕು ಎಂಬುದು ನನ್ನ ಒತ್ತಾಯವಾಗಿದೆ” ಎಂದು ಕಾರಜೋಳ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ರಾಜ್ಯಗಳ ಸುಮಾರು 15 ಲಕ್ಷ ಎಕರೆಗೆ ಆಗುವಂತಹ ನೀರು ವ್ಯರ್ಥವಾಗಿ ಆಂಧ್ರ ಪ್ರದೇಶ, ತೆಲಂಗಾಣದ ನದಿಯ ಪಾಲಾಗುತ್ತಿದೆ. ನಮ್ಮ ರೈತರು ಕಣ್ಣೀರು ಹಾಕುವಂತಹ ಪರಿಸ್ಥಿತಿ ಬಂದಿದೆ. ಸರಿಯಾಗಿ ನಿಭಾಯಿಸದೇ ಇರುವುದೇ ಗೇಟ್ ಮುರಿಯುವುದಕ್ಕೆ ಮೂಲ ಕಾರಣ. ಡ್ಯಾಂ ಸೇಫ್ಟಿ ಕಮಿಟಿ ವರದಿ ನೋಡಿದರೆ, ನೀರಾವರಿ ಇಲಾಖೆ ಅಧಿಕಾರಿಗಳು ಶೇ.100ರಷ್ಟು 33 ಗೇಟ್‌ಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ರೈತರ ಜೀವನಾಡಿ ತುಂಗಭದ್ರಾ ಅಣೆಕಟ್ಟೆ ಬಗ್ಗೆ ಗೊತ್ತಿರಬೇಕಾದ ಕುತೂಹಲಕಾರಿ ಸಂಗತಿಗಳು

ಸ್ಥಳಕ್ಕೆ ಭೇಟಿ ಮಾಡಬೇಕು, ಪರಿಶೀಲನೆ ಮಾಡಬೇಕು, ಸರ್ಟಿಫೈಡ್ ಮಾಡಬೇಕು. ಅದ್ಯಾವುದೂ ಮಾಡದೇ ಭ್ರಷ್ಟಾಚಾರದಲ್ಲಿ ಸರ್ಕಾರ ಮುಳುಗಿದೆ‌.ರಾಜ್ಯದಲ್ಲಿ ಜನರಿಗೆ ನ್ಯಾಯ ಸಿಗ್ತಿಲ್ಲಾ‌,ಕಣ್ಣೀರು ಸುರಿಸುವಂತಾ ಪರಿಸ್ಥಿತಿ ಬಂದಿದೆ.ಜನರ ಕಣ್ಣೀರಿನ ಶಾಪ ಸಿದ್ದರಾಮಯ್ಯರ ಸರ್ಕಾರಕ್ಕೆ ತಟ್ಟಲಿದೆ. ಕಣ್ಣೀರಿನಲ್ಲೇ ಸಿದ್ದರಾಮಯ್ಯ ಸರ್ಕಾರ ಕೊಚ್ಚಿಹೋಗೋ ಕಾಲ ಬಂದಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...