ಚೈತ್ರಾ ಕುಂದಾಪುರ ಡೀಲ್ ಪ್ರಕರಣ | ಗೋವಿಂದ ಬಾಬು ಪೂಜಾರಿಗೆ ಮೋಸ‌ ಆಗಿದೆ: ಸಿ ಟಿ ರವಿ

Date:

  • ಸಮಗ್ರ ತನಿಖೆ ಆಗಬೇಕು, ಇದರ ಹಿಂದೆ ಯಾರೇ ಇದ್ದರೂ ಕ್ರಮ ಕೈಗೊಳ್ಳಬೇಕು
  • ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ: ರವಿ

ಬಿಜೆಪಿಯಲ್ಲಿ ಹಣವೇ ಪ್ರಧಾನವಲ್ಲ. ಹೀಗಾಗಿಯೇ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು ಆಗಿದ್ದಾರೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.

“ಬೈಂದೂರು ಬಿಜೆಪಿ ಟಿಕೆಟ್​​ಗಾಗಿ ಚೈತ್ರಾ ಕುಂದಾಪುರ ಕೋಟಿ ಕೋಟಿಗೆ ಡೀಲ್ ಮಾಡಿಕೊಂಡಿರುವ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರು ನಾಯಕರಾಗುತ್ತಿರಲಿಲ್ಲ” ಎಂದರು.

ಗೋವಿಂದ ಬಾಬು ಪೂಜಾರಿ ಅವರೇ ಬಿಜೆಪಿ ನಾಯಕರ ಜೋತೆ ನೇರವಾಗಿ ಫೋನ್ ಮಾಡಿ ಮಾತನಾಡುವ ಅವಕಾಶ ಇತ್ತು. ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಮೋಸ‌ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ. ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನೋದು ಬೇರೆ. ಮೊದಲು ಸಮಗ್ರ ತನಿಖೆ ಆಗಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

“ದಕ್ಷಿಣ ಕನ್ನಡ ಮತ್ತು ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳು ಭಾಷೆಯಲ್ಲೇ ಮಾತಾಡುತ್ತಿದ್ದರು. ನಳಿನ್ ಕುಮಾರ್ ಕಟೀಲ್, ಕೋಟಾ ಶ್ರೀನಿವಾಸ ಪೂಜಾರಿಯೂ ಮಾತಾಡುತ್ತಿದ್ದರು” ಎಂದರು.

ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯ

“ನಾವು ಪರಿಷತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುತ್ತಿದೆ. ಆದರೆ ಅಂತಿಮ ಆಗಿಲ್ಲ. ಹಾಗಾಗಿ‌ ಅದು ವರಿಷ್ಠರ ತೀರ್ಮಾನ, ನಾವು ಚುನಾವಣೆಗೆ ನಮ್ಮ ಹಂತದಲ್ಲಿ ಸಿದ್ಧವಾಗುತ್ತಿದ್ದೇವೆ. ಈ ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯವಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...