ಚಿಕ್ಕಬಳ್ಳಾಪುರ | ಭಾರತೀಯ ಮೂಲ ಕಲೆಯ ಪೋಷಣೆ ಶ್ಲಾಘನೀಯ:‌ ಹೈಕೋರ್ಟ್ ವಕೀಲ ಪಾವಗಡ ಶ್ರೀರಾಮ್

Date:

‌ಭಾರತೀಯ ಮೂಲ ಕಲೆಗಳು ಅಳಿವಿನಂಚಿಗೆ ಸರಿಯುತ್ತಿರುವ ಇಂದಿನ ಡಿಜಿಟಲ್‌ ಯುಗದಲ್ಲಿ ಜನಪದ ಕಲೆಗಳ ಪೋಷಣೆ ನಿಜಕ್ಕೂ ಶ್ಲಾಘನೀಯ ಎಂದು ಹೈಕೋರ್ಟ್‌ ವಕೀಲ ಪಾವಗಡ ಶ್ರೀರಾಮ್‌ ಹೇಳಿದರು.

ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್‌ ಅಕಾಡೆಮಿ ಆಫ್‌ ಕಲ್ಚರಲ್‌ ಫಿಲಂ ಸೈನ್ಸ್‌ ಅಂಡ್‌ ರೀಸರ್ಚ್‌ ಇನ್ಸ್ಟಿಟ್ಯೂಟ್‌ ಗುರುವಾರ ಆಯೋಜಿಸಿದ್ದ ಸಾಂಸ್ಕೃತಿಕ ಸುಗ್ಗಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿಎಂ ರವಿಕುಮಾರ್ ಮಾತನಾಡಿ, ಇಲಾಖೆ ವತಿಯಿಂದ ಜನಪದ ಕಲೆ ಮತ್ತು ಜನಪದ ಕಲಾವಿದರಿಗೆ ಸಿಗುವಂತ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕಲಾವಿದರು ಮತ್ತು ಕಲೆಯನ್ನು ಪೋಷಿಸುವ ಸಂಸ್ಥೆಗಳು ಇಲಾಖೆಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಪಂ ಮಾಜಿ ಸದಸ್ಯ ಕೆ.ಸಿ ರಾಜಿಕಾಂತ್ ಮಾತನಾಡಿ, ಚಿಕ್ಕಬಳ್ಳಾಪುರ ಕಲೆಗಳ ತವರೂರು ಮತ್ತು ಕಲಾವಿದರ ಬೀಡಾಗಿದೆ. ಇಂತಹ ಕಲಾವಿದರಿಗೆ ಸೂಕ್ತ ವೇದಿಕೆಗಳನ್ನ ಕೊಡುವ ರೀತಿಯಲ್ಲಿ ಈ ಸಂಸ್ಥೆಯು ಕೆಲಸ ಮಾಡುತ್ತಿದ್ದು, ಕಲಾವಿದರು ಈ ಸಂಸ್ಥೆಗೆ ಆಭಾರಿಯಾಗಿರಬೇಕು ಎಂದು ಹೇಳಿದರು.

ಇಂದಿನ ಕಾಲದಲ್ಲಿ ಜನಪದಕ್ಕೆ ಯಾವುದೇ ಮಾನ್ಯತೆ ಮತ್ತು ಪ್ರೋತ್ಸಾಹ ಸಿಗದೇ ಅನೇಕ ಬಡ ಜನಪದ ಕಲಾವಿದರು ಕಲೆಯನ್ನು ಮರೆತು ತಮ್ಮ ಜೀವನೋಪಾಯಕ್ಕಾಗಿ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇದು ಕಲೆಗೆ ಆಗುತ್ತಿರುವ ಅವಮಾನ. ಇಂತಹ ಸ್ಥಿತಿಯಲ್ಲಿ ಯಶ್ವಂತ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಕಂಸಾಳೆ, ಯಕ್ಷಗಾನ, ಜನಪದ ಗಾಯನ, ಪಟಕುಣಿತ ಮುಂತಾದ ನೃತ್ಯ ಪ್ರಕಾರಗಳು ಪ್ರದರ್ಶನಗೊಂಡವು.

ಕಾರ್ಯಕ್ರಮದಲ್ಲಿ ಎಸ್.ಎಸ್.ಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜಿ.ಸಿ ವೆಂಕಟರಮಣಪ್ಪ, ಮಂಚನಬಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಮಧು ವಿ, ಸಮಾಜ ಸೇವಕರಾದ ಮಂಡಿಕಲ್ ಕುಪೇಂದ್ರ, ಎಂಬೋಸ್ದ್ ಸಿಇಓ ರೂಹಿದ್, ಮಾನವ ಹಕ್ಕುಗಳ ಜಿಲ್ಲಾಧ್ಯಕ್ಷರಾದ ಟಿ ಆರ್ ಕೃಷ್ಣಪ್ಪ, ಕನ್ನಡ ಪರ ಹೋರಾಟಗಾರ ಮತ್ತು ರಾಜ್ಯ ಮುಖಂಡರಾದ ತಿಪ್ಪೇನಹಳ್ಳಿ ಪಿ ನಾರಾಯಣಸ್ವಾಮಿ, ನಮ್ಮ ಕರ್ನಾಟಕ ಅಹಿಂದ ಜನಪದ ವೇದಿಕೆಯ ಅಧ್ಯಕ್ಷರಾದ ಕೃಷ್ಣಚಾರಿ, ಹಿರಿಯ ಸಾಹಿತಿಗಳು ಮತ್ತು ಸಮಾಜದ ಹೋರಾಟಗಾರರಾದ ಪ್ರೆಸ್ ಸುಬ್ರಾಯಪ್ಪ, ಕರ್ನಾಟಕ ರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ನಾರಾಯಣಸ್ವಾಮಿ ಎನ್.ಎಂ, ಯುವ ಮುಖಂಡರು ಡಾಕ್ಟರ್ ಬಿ ವಿ ಆನಂದ್ (ಅನು),ವಕೀಲರಾಗಿರುವ ಎಸ್ ಡಿ ನರಸಿಂಹಮೂರ್ತಿ ಮತ್ತು ಹಲವಾರು ಕಲಾವಿದರು ಹಾಗೂ ಕನ್ನಡ ಅಭಿಮಾನಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...