ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ: ಬಂದರು ಕಾರ್ಯಾಚರಣೆ ಸ್ಥಗಿತಕ್ಕೆ ಸೂಚನೆ

Date:

ಅರಬ್ಬೀ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗಿರುವ ಪರಿಣಾಮ, ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಕರಾವಳಿ ಸಹಿತ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಗೆ ಯಲ್ಲೋ ಅಲರ್ಟ್ ನೀಡಲಾಗಿದ್ದು, ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣವಿದ್ದು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮಂಗಳೂರು ವ್ಯಾಪ್ತಿಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.

ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ನವಮಂಗಳೂರು ಬಂದರಿಗೆ ಸಂಬಂಧಿಸಿದಂತೆ ಹಡಗುಗಳು, ಬಂದರು ಬಳಕೆದಾರರು, ಸ್ಟಾಕ್ ಹೋಲ್ಡರ್‌ಗಳು ಸುರಕ್ಷಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ನವಮಂಗಳೂರು ಬಂದರಿನಲ್ಲಿ ಎಲ್ಲ ರೀತಿಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಳು ತಾಸು ವಿದ್ಯುತ್ ಪೂರೈಸುವಂತೆ ಅ.19ರಂದು ಪ್ರತಿಭಟನೆ

ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಸೋಮವಾರ ಸುಳ್ಯ, ಸುಬ್ರಹ್ಮಣ್ಯ, ಬಂಟ್ವಾಳ ಪರಿಸರದಲ್ಲಿ ಗುಡುಗು ಸಿಡಿಲಿನ ಮಳೆಯಾಗಿರುವುದು ವರದಿಯಾಗಿದೆ.

ಮಂಗಳೂರು ಹೊರವಲಯದಲ್ಲಿ ಭಾನುವಾರ ರಾತ್ರಿ ಸಿಡಿಲು ಬಡಿದು ಮಗುವಿನ ಕಿವಿಗೆ ಗಾಯಗಳಾಗಿವೆ. ಸಿಡಿಲು ಬಡಿದು ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿದೆ. ಮಂಗಳೂರು ಹೊರವಲಯದ ವಾಮಂಜೂರು ಅಮೃತ ನಗರದ ಗೋಪಾಲ ಪೂಜಾರಿ ಎಂಬುವವರ ಮನೆಯಲ್ಲಿ ಘಟನೆ ನಡೆದಿದ್ದು, ಸಿಡಿಲಿನ ಆರ್ಭಟಕ್ಕೆ ಮನೆಯ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಪುಡಿಯಾಗಿವೆ. ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿನ ಕಿವಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಸುಳ್ಯ ನಗರ, ಜಾಲ್ಸೂರು, ಪುತ್ತೂರು, ಅರಂತೋಡು, ಮಂಡೆಕೋಲು, ಎಡಮಂಗಲ ಭಾಗಗಳಲ್ಲಿ ಮಳೆಯಾಗಿದ್ದರೆ, ಕಾಸರಗೋಡಿನ ಬದಿಯಡ್ಕದಲ್ಲಿ ಸಿಡಿಲು ಬಡಿದು ಕಾಡಮನೆ ಮುಚ್ಚಿಲಕವೆಯಲ್ಲಿ ಕೊರಗಜ್ಜ ದೈವದ ಗುಡಿಗೆ ಹಾಗೂ ಸಮೀಪದ ವಾಸದ ಮನೆಗೆ ಹಾನಿ ಉಂಟಾಗಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...