ದ.ಕ. | ಬಸವ ಸಂಸ್ಕೃತಿ ಅಭಿಯಾನ: ಪದವಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಚನ ಗಾಯನ ಸ್ಪರ್ಧೆ

Date:

ಕರ್ನಾಟಕ ರಾಜ್ಯ ಸರ್ಕಾರವು ʼಸಾಂಸ್ಕೃತಿಕ ನಾಯಕ ಬಸವಣ್ಣʼ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಾದಿ ಶಿವಶರಣರ ತತ್ವಾದರ್ಶಗಳನ್ನು ಜನಮನದಲ್ಲಿ ಬಿತ್ತುವ, ಜನರ ಮನಸ್ಸುಗಳನ್ನು ಕಟ್ಟುವ ಜೊತೆಗೆ ಪರಸ್ಪರ ಭಾಂದವ್ಯದ ಬೆಸುಗೆ ಹಾಕುವ ಸದುದ್ದೇಶದಿಂದ ಲಿಂಗಾಯತ ಮಠಾಧೀಶರ ಒಕ್ಕೂಟವು ಕರ್ನಾಟಕ ರಾಜ್ಯದಾದ್ಯಂತ ಸೆಪ್ಟೆಂಬರ್‌ 1 ರಿಂದ ಅಕ್ಟೋಬರ್‌ 5 ರ ತನಕ ‘ಬಸವ ಸಂಸ್ಕೃತಿ ಅಭಿಯಾನ’ವನ್ನು ಹಮ್ಮಿಕೊಂಡಿದೆ.

ಇದರ ಭಾಗವಾಗಿ ದ.ಕ. ಜಿಲ್ಲಾ ಸಹಮತ ವೇದಿಕೆಯ ಆಶ್ರಯದಲ್ಲಿ ಸೆಪ್ಟೆಂಬರ್‌ 19ರಂದು ಮಂಗಳೂರಿನ ಉರ್ವಸ್ಟೋರ್‌ ಬಳಿಯ ತುಳು ಭವನದಲ್ಲಿ ಅಭಿಯಾನದ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ಪದವಿ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಮಟ್ಟದ ಸಮೂಹ ವಚನ ಗಾಯನ ಸ್ಪರ್ಧೆ ಏರ್ಪಡಿಲಾಗಿದೆ.

ಸೆಪ್ಟೆಂಬರ್‌ 16 ರಂದು ಬೆಳಿಗ್ಗೆ 9.30 ರಿಂದ ಮಂಗಳೂರಿನ ಬಲ್ಮಠ ಡಾ. ಬಿ.ಆರ್.‌ ಅಂಬೇಡ್ಕರ್‌ ವೃತ್ತದ ಬಳಿಯಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಈ ಸ್ಪರ್ಧೆ ನಡೆಯಲಿದೆ. ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ಕ್ರಮವಾಗಿ ರೂ. 3000, ರೂ. 2000, ರೂ. 1000 ನಿಗದಿಪಡಿಸಲಾಗಿದೆ. ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಅಭಿಯಾನದ ಸಂಘಟಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮುಸ್ಲಿಂ ಸಮುದಾಯದಲ್ಲಿ ಜಾತಿಕಾರಣ: ಕೆಲವು ಗೊಂದಲಗಳು ಮತ್ತು ಹಲವು ಸ್ಪಷ್ಟತೆಗಳು

ಆಸಕ್ತರು ಹೆಸರು ನೋಂದಾವಣೆ ಮತ್ತು ಮಾಹಿತಿಗಳಿಗಾಗಿ ಸೆ. 14ರ ಒಳಗಾಗಿ ದೂರವಾಣಿ ಸಂಖ್ಯೆ: 9980951074 (ಪ್ರವೀಣ್‌ ಬಿ.ಎಂ.) 9448911777 (ಮೀನಾಕ್ಷಿ ರಾಮಚಂದ್ರ), 9482969468 (ಸುಮಾ ಮಾನ್ವಿ) ಇವರನ್ನು ಸಂಪರ್ಕಿಸಬಹುದು ಎಂದು ಅಭಿಯಾನದ ಜಿಲ್ಲಾ ಸಂಚಾಲಕ ಉಮರ್‌ ಯು.ಹೆಚ್.‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...