ದ.ಕ. | ವೆನ್‍ಲಾಕ್‍ನಲ್ಲಿ ಪೊಲೀಸ್ ಔಟ್ ಪೋಸ್ಟ್ ನಿರ್ಮಾಣ: ಸಚಿವರ ಸೂಚನೆ

Date:

ವೆನ್‍ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನ ಮಾಗಡಿ ರಸ್ತೆಯ ಆರೋಗ್ಯ ಸೌಧದಲ್ಲಿ ಸಭೆ ನಡೆಸಿದರು.

ವೆನ್‍ಲಾಕ್ ಆಸ್ಪತ್ರೆಯ ವಿವಿಧ ಅಭಿವೃದ್ಧಿ ವಿಷಯದ ಹೊಸ ಪ್ರಸ್ತಾವಣೆ ಬಗ್ಗೆ ಚರ್ಚಿಸಿ, ಕಳೆದ ಮೂರು ವರ್ಷಗಳಿಂದ ವೆನ್‍ಲಾಕ್ ಜಿಎನ್‍ಎಮ್ ನರ್ಸಿಂಗ್ ವಿದ್ಯಾರ್ಥಿನಿಯರ ಸ್ಟೈಪೆಂಡ್ ಹಣ ಬಿಡುಗಡೆ ಮಾಡುವಂತೆ ಸದಸ್ಯರು ವಿನಂತಿಸಿದ ಕೂಡಲೇ ಸಚಿವರು ಆಯುಕ್ತರಿಗೆ ತಕ್ಷಣ ಬಿಡುಗಡೆಗೊಳಿಸುವಂತೆ ಸೂಚಿಸಿದರು. ಇತ್ತೀಚೆಗೆ ವರ್ಗಾವಣೆಗೊಂಡು ತೆರವಾದ ವಿವಿಧ ಶ್ರೇಣಿಯ ವೈದ್ಯರು ಮತ್ತು ಸ್ಟಾಪ್ ನರ್ಸ್‍ಗಳ ಖಾಲಿ ಹುದ್ದೆಯನ್ನು ಭರ್ತಿಗೊಳಿಸುವಂತೆ ಸದಸ್ಯರು ಆಗ್ರಹಿಸಿದಾಗ ಸಚಿವರು ಆಯುಕ್ತರಿಗೆ ಭರ್ತಿ ಮಾಡಲು ನಿರ್ದೇಶಿಸಿದರು.

ಇದನ್ನೂ ಓದಿ: ನಿರಂತರ ಮಳೆಗೆ ಕೊಕೊ, ಅಡಕೆ ಬೆಳೆ ನಾಶ: ಆತಂದಲ್ಲೇ ದಿನದೂಡುತ್ತಿರುವ ಕರಾವಳಿ ರೈತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೆನ್‍ಲಾಕ್‍ಗೆ ಅತೀ ಹೆಚ್ಚು ವಿದ್ಯುತ್ ಬಿಲ್ ಬರುವುದರಿಂದ ಇಡೀ ಆಸ್ಪತ್ರೆಗೆ ಸೋಲಾರ್ ವ್ಯವಸ್ಥೆಯನ್ನು ಮಾಡಲು ಸದಸ್ಯರು ಬೇಡಿಕೆ ಇಟ್ಟಾಗ ಆಯುಕ್ತರಿಗೆ ಪರಿಶೀಲಿಸಿ ಅಂದಾಜು ಪಟ್ಟಿ ತಯಾರಿಸುವಂತೆ ಸೂಚಿಸಿದರು. ಆಸ್ಪತ್ರೆಗೆ ಸುಮಾರು 13 ಜಿಲ್ಲೆಗಳಿಂದ ರೋಗಿಗಳು ದಾಖಲಾಗಲು ದಿನದ 24 ಗಂಟೆಯು ಬರುತ್ತಿದ್ದು ವೆನ್‍ಲಾಕ್ ಆವರಣದಲ್ಲಿ ಹಗಲು ರಾತ್ರಿ ಜನ ಸಂಚಾರ ಇರುವುದರಿಂದ ಹಾಗೂ ಆಸ್ಪತ್ರೆಯಲ್ಲಿ ದಿನದ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳು, ಎಲ್ಲಾ ಸಿಬ್ಬಂದಿಗಳಿಗೆ ಮತ್ತು ರೋಗಿಗಳ ಜತೆ ಬರುವವರಿಗೆ ಭದ್ರತಾ ಹಿತದೃಷ್ಟಿಯಿಂದ ವೆನ್‍ಲಾಕ್‍ಗೆ ಪ್ರತ್ಯೇಕ ಪೊಲೀಸ್ ಔಟ್ ಪೋಸ್ಟನ್ನು ನಡೆಸಲು ಸದಸ್ಯರು ಸಚಿವರ ಗಮನಕ್ಕೆ ತಂದ ತಕ್ಷಣ ಮಂಗಳೂರು ಪೋಲಿಸ್ ಆಯುಕ್ತರನ್ನು ಸಂಪರ್ಕಿಸಿ ಕ್ರಮವಹಿಸುವಂತೆ ಸೂಚಿಸಿದರು.

ಇದನ್ನೂ ಓದಿ: ಉಪ್ಪಿನಂಗಡಿ | ಖಾಸಗಿ ಬಸ್‌ ನೌಕರರ ಸಂಘದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

ಲೇಡಿಗೋಷನ್ ಆಸ್ಪತ್ರೆಯಲ್ಲಿ ಮೆಡಿಸಿನ್ ಬಿಲ್ಲು ಬಾಕಿ ಇರುವ ಬಗ್ಗೆ ಸಚಿವರ ಗಮನ ಸೆಳೆದಾಗ ತಕ್ಷಣ ಬಿಡುಗಡೆಗೊಳಿಸಲು ಆಯುಕ್ತರಿಗೆ ಸೂಚಿಸಿದರು. ಸಭೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಪದ್ಮನಾಭ ಅಮೀನ್, ಅಬ್ದುಲ್ ಕರೀಮ್ ಗೇರುಕಟ್ಟೆ, ಜೆ ಶಶಿಧರ್ ಬಜಾಲ್, ಅನಿಲ್ ಎಮ್ ರಸ್ಕಿನ್ಹಾ, ಜಯರಾಮ ದಿಡುಪೆ ಉಪಸ್ಥಿತರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...