ದ.ಕ. | ಛತ್ತೀಸ್‌ಘಡದಲ್ಲಿ ಕ್ರೈಸ್ತ ಸನ್ಯಾಸಿನಿಯರ ಬಂಧನ ವಿರೋಧಿಸಿ ಪ್ರತಿಭಟನೆ

Date:

ಸುಳ್ಳು ಆರೋಪ ಹೊರಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲುಗಟ್ಟಿದ ಛತ್ತೀಸ್ ಘಡ ಗಡ್ ರಾಜ್ಯ ಸರ್ಕಾರದ ಫ್ಯಾಸಿಸ್ಟ್ ರಾಜಕಾರಣವನ್ನು ವಿರೋಧಿಸಿ ಹಾಗೂ ಕ್ರೈಸ್ತ ಸನ್ಯಾಸಿನಿಯರನ್ನು ಬಿಡುಗಡೆಗೊಳಿಸಬೇಕು, ಅವರ ಮೇಲಿನ ಸುಳ್ಳು ಮೊಕದ್ದಮೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ  ನಗರದ ಕ್ಲಾಕ್ ಟವರ್ ಬಳಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಮಹಿಳಾ ಮುಖಂಡರಾದ ಅನಿತಾ ಫ್ರಾಂಕ್ ರವರು, ದೇಶದ ಸಂವಿಧಾನವು ಸರ್ವ ಜನಾಂಗದ ಜನತೆಗೆ ಎಲ್ಲಾ ರೀತಿಯ ಹಕ್ಕುಗಳನ್ನು ನೀಡಿದ್ದರೂ, ಇಂದು ದ್ವೇಷ ರಾಜಕಾರಣದ ಭಾಗವಾಗಿ ಅಲ್ಪಸಂಖ್ಯಾತರನ್ನು ಗುರಿಯನ್ನಾಗಿಸಿ ದೇಶಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ನಾಯಕಿ ಈಶ್ವರೀ ಬೆಳ್ತಂಗಡಿಯವರು ಮಾತನಾಡಿ, ಮಹಿಳೆಯರನ್ನು ಮಾತೆ ಎನ್ನುತ್ತಾ, ಹೆಣ್ಣು ಮಕ್ಕಳ ಬಗ್ಗೆ ಬಣ್ಣಬಣ್ಣದ ಘೋಷಣೆಗಳನ್ನು ನೀಡುವ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಮಹಿಳೆಯರನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಪ್ರೀತಿ ಹಾಗೂ ಸೇವೆಯ ಪ್ರತೀಕವಾದ ಕ್ರೈಸ್ತ ಸನ್ಯಾಸಿನಿಯರ ಕಾರ್ಯವನ್ನು ಇಡೀ ಸಮಾಜವೇ ಗುರುತಿಸಿ ಕೊಂಡಾಡುವಾಗ ಸಂಘ ಪರಿವಾರದ ಗೂಂಡಾಗಳು ಅವರ ಮೇಲೆ ಇಲ್ಲಸಲ್ಲದ ಆರೋಪವನ್ನು ಹೊರಿಸಿ ಜೈಲಿಗಟ್ಟಿರುವ ಘಟನೆ ಅತ್ಯಂತ ಅಮಾನವೀಯವಾಗಿದೆ. ಛತ್ತೀಸ್ ಗಡದ ಬಿಜೆಪಿ ಸರ್ಕಾರ ಕ್ರೈಸ್ತ ಸನ್ಯಾಸಿನಿಯರ ಬಗ್ಗೆ ಸುಳ್ಳು ಆರೋಪಗಳನ್ನು ಹೊರಿಸಿ ಜೈಲಿಗಟ್ಟಿದರೆ ಕೇರಳ ರಾಜ್ಯದ ಬಿಜೆಪಿ ನಾಯಕರು ಕ್ರಿಶ್ಚಿಯನ್ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವುದು ತಮ್ಮ ದ್ವಂದ್ವ ನೀತಿಯನ್ನು ಎತ್ತಿ ತೋರಿಸಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಪ್ರಮೀಳಾ ಶಕ್ತಿನಗರ, ಪ್ಲೇವಿಕ್ರಾಸ್ತಾ ಅತ್ತಾವರ, ಅಸುಂತ ಡಿಸೋಜ, ಶಮೀಮಾ ಬಾನು, ಉಷಾ ಫೆರ್ನಾಂಡೀಸ್, ಝೀಟಾ ಮೋರಸ್, ಭಾರತಿ ಬೋಳಾರ, ಜಯಲಕ್ಷ್ಮಿ, ಲತಾ ಲಕ್ಷ್ಮಣ್, ಯೋಗಿತಾ ಉಳ್ಳಾಲ, ವಾಯಿಲೆಟ್, ತುಳಸಿ, ಮರ್ಲಿನ್ ರೇಗೋ, ವಿದ್ಯಾ ಶೆಣೈ, ರಶ್ಮಿ ವಾಮಂಜೂರು, ಅರ್ಚನಾ ರಾಮಚಂದ್ರ, ನ್ಯಾನ್ಸಿ ಫೆರ್ನಾಂಡೀಸ್, ಆಶಾ ಬೋಳೂರು, ಸೌಮ್ಯ ಪಂಜಿಮೊಗರು, ಮಂಜುಳಾ ವಾಮಂಜೂರು ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...