ದ.ಕ | ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಅಧ್ಯಕ್ಷರಾಗಿ ಶರೀಫ್ ಅಬ್ಬಾಸ್ ವಲಾಲ್ ಆಯ್ಕೆ

Date:

ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಸಂಘದ ವಾರ್ಷಿಕ ಸಾಮಾನ್ಯ ಸಭೆ ಫರಂಗಿಪೇಟೆಯ ‘ಸುಲ್ತಾನ್ ಕುಝಿ ಮಂದಿ’ ಸಭಾಂಗಣದಲ್ಲಿ ಜರಗಿತು. ಸದಸ್ಯರ ಸಕ್ರಿಯ ಹಾಜರಾತಿ ಮತ್ತು ಏಕಮನೋಭಾವದ ಮಧ್ಯೆ ನೂತನ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಸಂಘದ 2025-26 ಅವಧಿಯ ನೂತನ ಪದಾಧಿಕಾರಿಗಳನ್ನು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶರೀಫ್ ಅಬ್ಬಾಸ್ ವಲಾಲ್ ಮರು ಆಯ್ಕೆಯಾಗಿದ್ದು, ಸಂಸ್ಥೆಯ ಗೌರವ ಸಲಹೆಗಾರರಾಗಿ ನವಾಝ್ ಹಜ್ಜಾಜ್ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಮುನ್ನಾ ಕಮ್ಮರಡಿ, ಅನಿವಾಸಿ ಉಪಾಧ್ಯಕ್ಷರಾಗಿ ಶಬೀರ್ ಜಾಕ್, ಪ್ರಧಾನ ಕಾರ್ಯದರ್ಶಿಯಾಗಿ ಶೌಕತ್ ಅಲಿ, ಕೋಶಾಧಿಕಾರಿಯಾಗಿ ಇಮ್ತಿಯಾಝ್ ಎಸ್.ಎಂ ಜೊತೆ ಕಾರ್ಯದರ್ಶಿಯಾಗಿ ರಿಯಾಜ್ ಶೈನ್ ಹಾಗೂ ಜುನೈದ್ ಬಂಟ್ವಾಲ್ ಆಯ್ಕೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಿತಿಯ ಸದಸ್ಯರಾಗಿ ಸಾಬಿತ್ ಕುಂಬ್ರ, ಸಫ್ವಾನ್ ಕರ್ವೇಲ್, ಆಫ್ತಾಬ್ ಬಸ್ತಿಕರ್ ಮತ್ತು ಬದ್ರುದ್ದೀನ್ ಅಮನ್ ಸ್ಥಾನ ಪಡೆದಿದ್ದಾರೆ. ಸಭೆಯಲ್ಲಿ ಸದಸ್ಯರು ನೂತನ ಪದಾಧಿಕಾರಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ಮುಂದಿನ ಅವಧಿಯಲ್ಲಿ ಸಂಘದ ಸೇವಾ, ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲು ಸಂಕಲ್ಪ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮತಗಳ್ಳತನ | ಚುನಾವಣಾ ಆಯೋಗ ಬಿಜೆಪಿ ಏಜೆಂಟ್: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

2025-26 ಅವಧಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಣಂಬೂರು ಪೋಲಿಸ್ ಇನ್ಸ್‌ಪೆಕ್ಟರ್ ಸಲೀಮ್ ಅಬ್ವಾಸ್ ವಳಾಲ್ ಭಾಗವಹಿಸಿ ಚುನಾವಣಾ ಪ್ರಕ್ರಿಯೆ ಪಾರದರ್ಶಕತೆ, ಮೌಲ್ಯ, ಹೊಣೆಗಾರಿಕೆಯ ಮಹತ್ವವನ್ನು ವಿವರಿಸಿದರು. ಗೌರವಾಧ್ಯಕ್ಷರಾದ ಆಸಿಫ್ ಸೂರಲ್ಪಾಡಿ, ಗೌರವ ಸಲಹೆಗಾರ ಮುಸ್ತಫಾ ದಮ್ಮಲೆ ಮತ್ತು ಕೋಸ್ಟಲ್ ಫ್ರೆಂಡ್ಸ್ ಸ್ಥಾಪಾಧ್ಯಕ್ಷರಾದ ಸಿರಾಜ್ ಪರ್ಲಡ್ಕ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...