ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

Date:

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಮತ್ತು ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10ರೊಳಗಾಗಿ ಸಲ್ಲಿಸಬಹುದು.

ಅರ್ಜಿಯನ್ನು ನಿಗದಿತ ನಮೂನೆ ಎಇ-5 ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ,  ಪ್ರಸ್ತಾವಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (100 ರೂ ಸ್ಟಾಂಪ್ ಪೇಪರ್ ), ಸರಕಾರಿ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು.

ಇದನ್ನೂ ಓದಿ: ದ.ಕ. | ಹೊಂಡ ಗುಂಡಿಗಳಿಗೆ ಬಿದ್ದು ವಾಹನ ಸವಾರರು ಮೃತಪಟ್ಟರು ಜನಪ್ರತಿನಿಧಿಗಳಿಗೆ ಲೆಕ್ಕವಿಲ್ಲ: ಡಿವೈಎಫ್ಐ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೂ.200 ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ರೂ.500 ಲೈಸೆನ್ಸ್ ಶುಲ್ಕವನ್ನು ಪಾವತಿಸಬೇಕು.

ಅರ್ಜಿದಾರರು ಈ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ ನಿರಾಕ್ಷೇಪಣಾ ಪತ್ರ, ಪೊಲೀಸ್ ಅಧೀಕ್ಷಕರ ನಿರಾಕ್ಷೇಪಣಾ ಪತ್ರ, ಸಂಬಂಧಪಟ್ಟ ತಹಶೀಲ್ದಾರರ ನಿರಾಕ್ಷೇಪಣಾ ಪತ್ರ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ನಿರಾಕ್ಷೇಪಣಾ ಪತ್ರ ಪಡೆದು ಸಲ್ಲಿಸಬೇಕು.

ಕಡ್ಡಾಯವಾಗಿ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ. ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ಸ್ಫೋಟಕ ಕಾಯಿದೆ ಅಥವಾ ನಿಯಮಾವಳಿಗಳಿಗೆ ಒಳಪಟ್ಟು ಪರವಾನಿಗೆ ಮಂಜೂರು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...