ದ.ಕ. | ಪೆರಾಜೆ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ; ರೈತರಲ್ಲಿ ಆತಂಕ

Date:

ಮಂಗಳೂರು ಜಿಲ್ಲೆಯ ಪೆರಾಜೆ ಸಮೀಪದ ಬಿಳಿಯಾರು ಕೃಷಿಕರ ತೋಟಗಳಿಗೆ ಹಾಗೂ ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕೃಷಿ ಜಮೀನು ಮತ್ತು ತೋಟಗಳಿಗೆ ಕಾಡಾನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಪಡಿಸಿದೆ.

ಇದನ್ನೂ ಓದಿ: ದ.ಕ. | ಗುಣಮಟ್ಟದ ಶಿಕ್ಷಣಕ್ಕಾಗಿ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ: ಸಚಿವ ದಿನೇಶ್ ಗುಂಡೂರಾವ್

ಪಿ.ಬಿ.ದಿವಾಕರ ರೈ ಮತ್ತು ಸಹೋದರರ ಕೃಷಿ ಭೂಮಿಗೆ ಕಾಡಾನೆ ಹಿಂಡು ನುಗ್ಗಿ ತೆಂಗು, ಬಾಳೆ, ಅಡಿಕೆ ಮರ, ಗದ್ದೆಯನ್ನು ಸಂಪೂರ್ಣವಾಗಿ ಹಾಳು ಮಾಡಿದೆ.  20 ರಿಂದ 30ಕ್ಕೂ ಹೆಚ್ಚು ಫಲಕ್ಕೆ ಬಂದಿದ್ದ ತೆಂಗಿನ ಮರ ಸೇರಿದಂತೆ ತೆಂಗಿನ ಗಿಡಗಳು, ಬಾಳೆ ಗಿಡ, ಅಡಿಕೆ ಗಿಡಗಳನ್ನು ಹಾಳು ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ ನೇಜಿ ನೆಟ್ಟ ಗದ್ದೆಯಲ್ಲಿ ಕಾಡಾನೆಗಳು ಓಡಾಟ ನಡೆಸಿ ಕೃಷಿಯನ್ನೂ ನಾಶ ಮಾಡಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲವು ದಿನಗಳಿಂದ ಆನೆಗಳ ಹಾವಳಿ ಹೆಚ್ಚಾಗಿದ್ದು, ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಆನೆಗಳು ಹಲವು ದಿನಗಳಿಂದ ಪಟ್ಟೂರ್ ರಕ್ಷಿತಾರಣ್ಯದಲ್ಲಿ ಇದ್ದು, ರಾತ್ರಿ ಹೊತ್ತು ಬಲ್ಯ ಗ್ರಾಮದಲ್ಲಿ ಬಂದು ಕೃಷಿ ಹಾನಿ ಮಾಡುತ್ತಿವೆ. ಇತ್ತ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...