ದಕ್ಷಿಣ ಕನ್ನಡ | ಖಾಸಗಿ ಬಸ್‌ಗಳಿಂದ 10 ಸಾವು; ವಿದ್ಯಾರ್ಥಿಗಳ ಪ್ರತಿಭಟನೆ

Date:

ಖಾಸಗಿ ಬಸ್‌ಗಳ ವೇಗ, ಬೇಜವ್ದಾರಿ, ಪೈಪೋಟಿ ಸಂಚಾರದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಹಲವರು ಬಲಿಯಾಗುತ್ತಿದ್ದಾರೆ. ಈ ಒಂದು ವರ್ಷದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ. ಖಾಸಗಿ ಬಸ್‌ಗಳ ಈ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕೆಂದು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ.

ಮೂಡಬಿದರೆ ಬಳಿಯ ಹಂಡೇಲು ಬಳಿ ಇರುವು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸೋಮವಾರ ಸಂಜೆ ಬೈಕ್‌ಗೆ ಖಾಸಗಿ ಬಸ್‌ ಢಿಕ್ಕಿ ಹೊಡೆದು, ವಿದ್ಯಾರ್ಥಿ ಕಾರ್ತಿಕ್‌ ಸಾವನ್ನಪ್ಪಿದ್ದಾರೆ. ಘಟನೆಯಿಂದ ಆಕ್ರೋಶಗೊಂಡಿರುವ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ. ಪೋಲೀಸ್‌ ವೃತ್ತ ನಿರೀಕ್ಷಕ ನಿರಂಜನ್‌ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಖಾಸಗಿ ಬಸ್‌ಗಳ ವಿರುದ್ಧ ಕಿಡಿಕಾರಿರುವ ಪ್ರತಿಭಟನಾಕಾರರು, “ಬೇಜವ್ದಾರಿಯಿಂದ ಬಸ್‌ ಚಲಾಯಿಸುವ ಚಾಲಕರು ಮತ್ತು ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...