ದಕ್ಷಿಣ ಕನ್ನಡ | 6.325 ಕೆಜಿ ಗಾಂಜಾ ವಶ; ಆರೋಪಿ ಬಂಧನ

Date:

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ‌ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ನಿಶಾಂತ್ ಶೆಟ್ಟಿ (36) ಎಂಬಾತ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್‌ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.

ಗಾಂಜಾ ಆರೋಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯಿಂದ ಗೂಡ್ಸ್ ಟೆಂಪೋ, ₹1.50 ಲಕ್ಷ ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ₹9,11,500 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದೆದಿ ಓದಿದ್ದೀರಾ? ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...