ದೇವಾಲಯಕ್ಕೆ ಭೇಟಿ: ಉಚಿತ ಪ್ರಯಾಣದ ಲಾಭ ಪಡೆಯುತ್ತಿರುವ ಮಹಿಳೆಯರು

Date:

ಬಹುನಿರೀಕ್ಷಿತ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಯೋಜನೆಯ ಲಾಭ ಪಡೆಯುತ್ತಿದ್ದಾರೆ.

“ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜೂನ್ 11ರಂದು ಮೊದಲ ದಿನ 303 ಬಸ್‌ಗಳಲ್ಲಿ 5,454 ಮಂದಿ ಮಹಿಳೆಯರು ಪ್ರಯಾಣಿಸಿದ್ದರು. ಸೋಮವಾರ ಈ ಸಂಖ್ಯೆ 25,446ಕ್ಕೆ ಏರಿದೆ, ಮೂರನೇ ದಿನದಂದು 48,722 ಮಂದಿ ಮಹಿಳೆಯರು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ” ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.

“ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಮಣ್ಯಕ್ಕೆ ತೆರಳುವ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ಮಾರ್ಗದಲ್ಲಿ ಎಲ್ಲ ಬಸ್ಸುಗಳು ಭರ್ತಿಯಾಗಿ ಸಂಚರಿಸುತ್ತಿವೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೋಗುವ ದೂರದ ಮಾರ್ಗದ ಬಸ್‌ಗಳಲ್ಲಿಯೂ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಕ್ತಿ ಯೋಜನೆಯ ಸದ್ಬಳಕೆ ಅಗಾಧವಾಗಿದೆ. ಈ ಹಿನ್ನೆಲೆಯಲ್ಲಿ ನಾವು ಮುಖ್ಯ ಕಚೇರಿಗೆ ಪ್ರತಿಕ್ರಿಯೆಯನ್ನು ಒದಗಿಸುತ್ತಿದ್ದೇವೆ. ಹೆಚ್ಚಿನ ಬಸ್ಸುಗಳನ್ನು ಪರಿಚಯಿಸುವುದರಿಂದ ಬಸ್ಸುಗಳ ಖರೀದಿ ಮತ್ತು ಸಿಬ್ಬಂದಿ ನೇಮಕಾತಿ ಮಾಡಬೇಕಾಗುತ್ತದೆ” ಎಂದು ಅವರು ಹೇಳಿದರು.

“ಉತ್ತರ ಕರ್ನಾಟಕ ಜಿಲ್ಲೆಗಳ ಮಹಿಳಾ ಕಾರ್ಮಿಕರು ಈ ಯೋಜನೆಯ ಸೇವೆಯನ್ನು ಉತ್ತಮವಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ತಮ್ಮ ಊರಿಗೆ ಒಂದು ಸುತ್ತು ಪ್ರಯಾಣ ಮಾಡಬೇಕೆಂದಿದ್ದರೆ ₹800ರಿಂದ ₹1,000 ವ್ಯಯ ಮಾಡಬೇಕಾಗಿತ್ತು. ಇದೀಗ ಅಷ್ಟು ಹಣವನ್ನು ಉಳಿಸಲು ಸಾಧ್ಯವಾಗುತ್ತಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಪುತ್ತೂರು ವಿಭಾಗದಲ್ಲಿ ಮೊದಲ ದಿನ 341 ಟ್ರಿಪ್‌ ಮೂಲಕ 6,200 ಮಂದಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಸೋಮವಾರ ಮತ್ತು ಮಂಗಳವಾರ ಧರ್ಮಸ್ಥಳ, ಸುಬ್ರಹ್ಮಣ್ಯ ಮಾರ್ಗಗಳಲ್ಲಿ ಜನದಟ್ಟಣೆ ಕಂಡುಬಂದಿದೆ” ಎಂದು ಕೆಎಸ್ಆರ್‌ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು: ಸಿದ್ದರಾಮಯ್ಯ ತರಾಟೆ

ಹಾಸನ ಮತ್ತು ಚಿಕ್ಕಮಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಕೆಎಸ್ಆರ್‌ಟಿಸಿ ಬಸ್ಸುಗಳೂ ಭರ್ತಿಯಾಗಿವೆ ಎಂದು ತಿಳಿದುಬಂದಿದೆ.

“ವಾರಾಂತ್ಯದಲ್ಲಿ ದೇವಾಲಯದಲ್ಲಿ ಭಾರೀ ಜನಸಂದಣಿ ದಾಖಲಾಗಿದೆ. ಆದರೆ, ಉಚಿತ ಬಸ್ ಸೇವೆಯಿಂದಾಗಿ ಅಲ್ಲ. ಮಂಗಳವಾರ ಬೆಳಗ್ಗೆ ನಾವು ಆಶ್ಲೇಷ ಬಲಿ ಸೇವೆಗಾಗಿ ವಿಶೇಷ ಪೂಜೆ ಆಯೋಜಿಸಿದ್ದೆವು. ಈ ವೇಳೆ ತುಂಬಾ ನೂಕುನುಗ್ಗಲು ಇತ್ತು. ಬಳಿಕ ನಿಯಮಿತ ದರ್ಶನಕ್ಕೆ ಹೆಚ್ಚಿನ ನೂಕುನುಗ್ಗಲು ಇರಲಿಲ್ಲ” ಎಂದು ಕುಕ್ಕೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಲ್ಲಿ ಹೇಳಿದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...