ದಕ್ಷಿಣ ಕನ್ನಡ | ನೈತಿಕ ಪೊಲೀಸ್‌ಗಿರಿ ತಡೆಗೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಕಾರ್ಯಾರಂಭ

Date:

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್‌ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ.

ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದು, ಸಿಎಸ್​ವಿ ಇನ್ಸ್​ಪೆಕ್ಟರ್ ಸೇರಿದಂತೆ ಐವರು ಸಿಬ್ಬಂದಿಯೊಂದಿಗೆ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭಿಸಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್ ಮಾಹಿತಿ ನೀಡಿದ್ದಾರೆ.

“ಮಂಗಳೂರು ನಗರದ ಸಿಸಿಬಿ ಎಸಿಪಿ ಉಸ್ತುವಾರಿಯಲ್ಲಿ “ಆ್ಯಂಟಿ‌ ಕಮ್ಯುನಲ್ ವಿಂಗ್” ತಂಡ ರಚನೆ ಮಾಡಲಾಗಿದ್ದು, ನಗರದಲ್ಲಿ ನಡೆಯಬಹುದಾದ ಅನೈತಿಕ ಪೊಲೀಸ್‌ಗಿರಿ ಸಮಸ್ಯೆಯನ್ನು ನಿಭಾಯಿಸುವುದು ಇದರ ಕರ್ತವ್ಯವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು, ನೈತಿಕ ಪೊಲೀಸ್‌ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋ-ವಧೆ ಮುಂತಾದ ಪ್ರಕರಣಗಳನ್ನು ಈ ವಿಂಗ್‌ ಪರಿಶೀಲನೆ ನಡೆಸಲಿದೆ. ಅವುಗಳಲ್ಲಿನ ಆರೋಪಿತರ ಚಲನವಲನಗಳ ಬಗ್ಗೆ ನಿತ್ಯ ನಿಗಾವಹಿಸುವುದು, ಅವರ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದು, ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಿಸುತ್ತಿರುವ ಎಲ್ಲ ಸಂಘಟನೆಗಳ ಬಗ್ಗೆ ಮಾಹಿತಿಯನ್ನು ಆ್ಯಂಟಿ‌ ಕಮ್ಯುನಲ್ ವಿಂಗ್ ಸಂಗ್ರಹ ಮಾಡಲಿದೆ” ಎಂದು ಮಾಹಿತಿ ನೀಡಿದರು.

“ಯಾವುದೇ ಧರ್ಮದ ಸಂಘಟನೆಗಳು ಹಾಗೂ ಗುಂಪುಗಳು ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಫೇಸ್‌ಬುಕ್‌ ‘ಬ್ಯಾನ್‌’ ಮಾಡುತ್ತೇವೆ: ಹೈಕೋರ್ಟ್‌ ಎಚ್ಚರಿಕೆ

ಕೋಮು ಆಧಾರಿತ ನೈತಿಕ ಪೊಲೀಸ್‌ಗಿರಿಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದು, ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ನೂತನ ಪಡೆಯಾದ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸುವ ಅಗತ್ಯವಿದೆ ಎಂದು ಮಂಗಳೂರಿಗೆ ಭೇಟಿ ನೀಡಿದ ವೇಳೆ ಹೇಳಿದ್ದರು.

ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ರಾಜ್ಯಾದ್ಯಂತ ಅಥವಾ ಇತರ ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ಕೂಡಾ ಆರಂಭ ಮಾಡಲಾಗುತ್ತಾ ಎಂಬುವುದರ ಕುರಿತಾಗಿ ಯಾವುದೇ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...