ದಕ್ಷಿಣ ಕನ್ನಡ | ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್ ಶಾ ಸುಳ್ಳು ಹೇಳಿಕೊಂಡು ಹೋಗಿದ್ದಾರೆ: ದಿನೇಶ್ ಗುಂಡೂರಾವ್

Date:

ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ. ಆದರೆ ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಅಮಿತ್‌ ಶಾ ಬಂದು ಸುಳ್ಳು ಹೇಳಿಕೊಂಡು ಹೋಗಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುತ್ತೇವೆಂದು ಹೇಳಿ ಮಾಡಿದ್ದಾರೆಯೇ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.‌

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು.‌

“ಡಾಲರನ್ನು 45 ರೂ.ಗೆ ಇಳಿಸುತ್ತೇವೆಂದು ಹೇಳಿದ್ದರು. ಅದೀಗ ₹83 ಆಗಿದೆ. ಜನರಿಗೆ ಮಾತನ್ನು ಕೊಟ್ಟ ಮೇಲೆ ಉಳಿಸಿಕೊಳ್ಳುವುದು ಬಹಳ ಮುಖ್ಯ. ಬಿಜೆಪಿಯವರು ಹೇಳಿದ್ದನ್ನು ಯಾವುದನ್ನಾದರೂ ಮಾಡಿದ್ದಾರೆಯೇ” ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿದೆ, ನಂಬಿಕೆ ಬಂದಿದೆ. ಬಿಜೆಪಿ ಗ್ಯಾರಂಟಿ ಬಗ್ಗೆ ಯಾವುದೇ ನಂಬಿಕೆ ಇಲ್ಲ. ದೇಶದಲ್ಲಿ ಕಾನೂನಾತ್ಮಕ ಭ್ರಷ್ಟಾಚಾರ ಮಾಡಿದ್ದು ಬಿಜೆಪಿ.‌ ಕಾನೂನು ಬಳಸಿಕೊಂಡು ₹12 ಸಾವಿರ ಕೋಟಿ ಲೂಟಿ ಮಾಡಿದೆ. ಐಟಿ, ಇಡಿ ದಾಳಿ ಮಾಡಿಸಿ, ಹಣವಂತರನ್ನು ಬೆದರಿಸಿ ಬಿಜೆಪಿ ಹಣ ಕಿತ್ತುಕೊಂಡಿದೆ” ಎಂದು ಹೇಳಿದರು. ‌

“ಅತ್ಯಂತ ಅಸಮಂಜಸ ಸ್ಥಿತಿಯಲ್ಲಿ ಚುನಾವಣೆ ನಡೆಯುತ್ತಿದ್ದು, ಜನ ಇದನ್ನು ನೋಡುತ್ತಿದ್ದಾರೆ. ಈ ಚುನಾವಣೆಯಲ್ಲಿ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ನಮಗೆ ಸಿದ್ದರಾಮಯ್ಯ ಸರ್ಕಾರದ ನೀತಿಗಳು, ಗ್ಯಾರಂಟಿ ಯೋಜನೆಗಳು ಕೈಹಿಡಿಯುತ್ತವೆ” ಎಂದು ದಿನೇಶ್ ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗ್ಯಾರಂಟಿ ಯೋಜನೆಗಳ ಬಗೆಗಿನ ತಪ್ಪು ಸಂದೇಶಗಳಿಗೆ ಕಿವಿಕೊಡಬೇಡಿ: ಗೀತಾ ಶಿವರಾಜಕುಮಾರ್

“ರಾಜ್ಯಕ್ಕೆ ಅಮಿತ್ ಶಾ ಬಂದು ಸುಳ್ಳನ್ನೇ ಹೇಳಿಕೊಂಡು ಹೋಗಿದ್ದಾರೆ. ಬರ ಪರಿಹಾರದ ಬಗ್ಗೆ ಸುಳ್ಳು ಹೇಳಿಕೆಯನ್ನು ಕೊಟ್ಟಿದ್ದಾರೆ.‌ ಕರ್ನಾಟಕಕ್ಕೆ ಬಿಜೆಪಿ ಮಾಡಿರುವ ಮೋಸಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...